Wednesday, June 17, 2026
Wednesday, June 17, 2026

Skate Game ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆ.ಶಿವಮೊಗ್ಗದ ಅನೂಪ್ ಶೆಟ್ಟಿಗೆ ಪ್ರಥಮ ಸ್ಥಾನ

Date:

Skate Game ತಮಿಳುನಾಡಿನ ಕರೂರಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಕೇಟಿಂಗ್ ಚಾಂಪಿಯನ್‌ಶಿಪ್ ನ ೨೦೦ ಮೀ. ಮತ್ತು ೪೦೦ ಮೀ. ನಲ್ಲಿ ಶಿವಮೊಗ್ಗ ನಗರದ ಪ್ರತಿಷ್ಟಿತ ದೆಹಲಿ ಇಂಟರ್ ನ್ಯಾಷನಲ್ ಶಾಲೆಯ ಅನೂಪ್ ಶೆಟ್ಟಿ ಎ.ಎಸ್. ಪ್ರಥಮ ಸ್ಥಾನ ಪಡೆದಿದ್ದಾರೆ. ಜೊತೆಗೆ ಮಧುರೈ ನಲ್ಲಿ ನಡೆದ ಸ್ಕೇಟಿಂಗ್ ಸ್ಪರ್ಧೆಯಲ್ಲೂ ಕೂಡ ೩ನೇ ಸ್ಥಾನ ಪಡೆದು ಜಿಲ್ಲೆಗೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಮೂಲಕ ಅನೂಪ್ ಮಲೇಷಿಯಾದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈ ಪ್ರತಿಭಾನ್ವಿತನ ಸಾಧನೆಗೆ ಶಿವಮೊಗ್ಗ ದೆಹಲಿ ಇಂಟರ್ ನ್ಯಾಷನಲ್ ಶಾಲೆಯ ಸಂಸ್ಥಾಪಕ ಡಾ. ಎಸ್.ಬಿ. ಜಗದೀಶ್ ಗೌಡ, ಛೇರ್ಮನ್ ರಮ್ಯ ಜಗದೀಶ್ ಗೌಡ, ತರಬೇತುದಾರ ದೀಪಕ್ ಸಿಂಗ್ ಹಾಗೂ ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...