Shivamogga Union Of Working Journalists Association ಶಿವಮೊಗ್ಗ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿಯ ಮಿಂಚು ಶ್ರೀನಿವಾಸ್ ಪ್ರಶಸ್ತಿ ಪುರಸ್ಕೃತರಾದ ಶಿವಮೊಗ್ಗೆಯ ಹಿರಿಯ ಪತ್ರಕರ್ತರು, ವಿಜಯವಾಣಿ ಪತ್ರಿಕೆಯ ಸ್ಥಾನಿಕ ಸಂಪಾದಕ ಚಂದ್ರಶೇಖರ್ ಶೃಂಗೇರಿಯವರಿಗೆ, ಎಸ್. ಹೆಚ್. ರಂಗಸ್ವಾಮಿ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಪತ್ರಕರ್ತ ಗಿರೀಶ್ ಉಮ್ರಾಯ್ ಹಾಗೂ ಗಿರಿಜಮ್ಮ, ರುದ್ರಪ್ಪ ತಾಳಿಕೋಟಿ ಪ್ರಶಸ್ತಿ ಪುರಸ್ಕೃತರಾದ ಸಂಯುಕ್ತ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ್ತಿ ಕವಿತಾರವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ಅಭಿನಂದಿಸಿದೆ.
ಈ ಸಂಬಂಧವಾಗಿ ಹೇಳಿಕೆ ನೀಡಿರುವ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ ಕೆ.ವಿ. ಶಿವಕುಮಾರ್, ರಾಜ್ಯ ಸಮಿತಿ ಸದಸ್ಯ ಎನ್. ರವಿಕುಮಾರ್, ಪ್ರಧಾನ ಕಾರ್ಯದರ್ಶಿ ವಿ. ಟಿ. ಅರುಣ್ ಹಾಗೂ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಶುಭ ಕೋರಿದ್ದಾರೆ.
ಅ. ರಾ. ಶ್ರೀನಿವಾಸ್‌ರಿಗೆ ಅಭಿನಂದನೆ
ಇದೇ ಸಂದರ್ಭದಲ್ಲಿ ಸಾಗರ ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿರುವ ಹಿರಿಯ ಪತ್ರಕರ್ತ ಅ. ರಾ. ಶ್ರೀನಿವಾಸ್‌ರವರನ್ನು ಅಭಿನಂದಿಸಿರುವ ಅವರು, ಇದು ಪತ್ರಿಕಾ ಕ್ಷೇತ್ರಕ್ಕೆ ಸಂದ ಗೌರವ ಎಂದು ಶುಭ ಹಾರೈಸಿದ್ದಾರೆ. ಸುದೀರ್ಘ ಕಾಲದವರೆಗೆ ಪತ್ರಕರ್ತರಾಗಿ, ಕತೆ, ಕಾದಂಬರಿ, ರಂಗ ವಿಮರ್ಶಕರಾಗಿ ತಮ್ಮದೇ ಆದ ಛಾಪು ಮೂಡಿಸಿರುವ ಶ್ರೀನಿವಾಸ್‌ರವರ ಸರ್ವಾಧ್ಯಕ್ಷತೆಯಲ್ಲಿ ಸಮ್ಮೇಳನ ಯಶಸ್ವಿಯಾಗುವುದರ ಜೊತೆಗೆ ಮಾದರಿಯಾಗಿ ನಡೆಯಲಿ ಎಂದು ಆಶಿಸಿದ್ದಾರೆ.