International Women’s Day ಮಾರ್ಚ್ 08, 2025 ರಂದು ಫ್ಯಾಕ್ಟರಿ ಮೀಟಿಂಗ್‌ಹಾಲ್‌ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ‘ಮಹಿಳೆಯರು ಮತ್ತು ಬಾಲಕಿಯರಿಗಾಗಿ: ಹಕ್ಕುಗಳು, ಸಮಾನತೆ ಮತ್ತು ಸಬಲತೆ’ ಎಂಬ ಧ್ಯೇಯದೊಂದಿಗೆ ಆಚರಿಸಲಾಯಿತು.
ಕಾರ್ಯಪಾಲಕ ನಿರ್ದೇಶಕರಾದ ಶ್ರೀ ಬಿ.ಎಲ್. ಚಂದ್ವಾನಿ, ಶ್ರೀ ಕೆ.ಎಸ್. ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ), ಶ್ರೀ ಎಲ್. ಪ್ರವೀಣ್ ಕುಮಾರ್, ಮಹಾಪ್ರಬಂಧಕರು (ಮಾನವ ಸಂಪನ್ಮೂಲ ಮತ್ತು ಸಾರ್ವಜನಿಕ ಸಂಪರ್ಕ), ಶ್ರೀಮತಿ ಶೋಭ ಶಿವಶಂಕರನ್, ಮಹಾಪ್ರಬಂಧಕರು (ಹಣಕಾಸು) ಶ್ರೀ ಜೆ. ಜಗದೀಶ, ಅಧ್ಯಕ್ಷರು, ವಿಐಎಸ್‌ಎಲ್ ಕಾರ್ಮಿಕರ ಸಂಘ ಮತ್ತು ಶ್ರೀ ಪಾರ್ಥಸಾರಥಿ ಮಿಶ್ರಾ, ಅಧ್ಯಕ್ಷರು, ವಿಐಎಸ್‌ಎಲ್ ಅಧಿಕಾರಿಗಳ ಸಂಘ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಪಾಲಕ ನಿರ್ದೇಶಕರಾದ ಶ್ರೀ ಬಿ.ಎಲ್. ಚಂದ್ವಾನಿ ತಮ್ಮ ಭಾಷಣದಲ್ಲಿ ವಿಐಎಸ್‌ಎಲ್‌ನ ಮಹಿಳಾ ಸಮುದಾಯದ ಪ್ರಮುಖ ಸಾಧನೆಗಳನ್ನು ಪ್ರಸ್ತಾಪಿಸುತ್ತಾ ಸಮಾಜಕ್ಕೆ ಮತ್ತು ಕಾರ್ಖಾನೆಗೆ ಅವರ ಕೊಡುಗೆಯನ್ನು ಶ್ಲಾಘಿಸಿದರು.
ಹಾಗೆಯೇ, ಸೈಲ್-ವಿಐಎಸ್‌ಎಲ್ ಮಹಿಳೆಯರಿಗೆ ಪ್ರೋತ್ಸಾಹ ಮತ್ತು ಸಹಕಾರವನ್ನು ನೀಡುವ ಮೂಲಕ ಅವರು ತಮ್ಮ ಸಮಾಥ್ಯವನ್ನು ಪ್ರದರ್ಶಿಸುವಲ್ಲಿ ಸಹಕಾರಿಯಾಗಿದೆ ಎಂದರು.
ಡಾ|| ಸುಶ್ಮಾ, ಡಾ|| ಶೋಭ, ಶ್ರೀಮತಿಯವರಾದ ಅಪರ್ಣ, ನಾಗರತ್ನ, ಅಮೃತಾ, ರಕ್ಷಿತಾ, ಕುಸುಮ, ಪ್ರೇಮ ಭಾಯಿ, ಗಿರಿಜಾ, ಅಮಿತಾ, ಮಂಜುಶ್ರೀ, ರಮ್ಯ, ಮತ್ತು ತ್ರಿವೇಣಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಶ್ರೀಮತಿ ಶೋಭ ಶಿವಶಂಕರನ್ ಮತ್ತು ಶ್ರೀ ಜೆ.ಜಗದೀಶ್ ರವರೂ ಸಹ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಮಾರ್ಚ್ 5ರಂದು ಮಹಿಳಾ ಉದ್ಯೋಗಿಗಳಿಗೆ ಮತ್ತು ಮಹಿಳಾ ಗುತ್ತಿಗೆ ಕಾರ್ಮಿಕರಿಗೆ ವಿನೋದದ ಆಟಗಳನ್ನು ಆಯೋಜಿಸಲಾಗಿತ್ತು ಮತ್ತು ಪ್ರಶಸ್ತಿ ವಿಜೇತರಿಗೆ ಗಣ್ಯರಿಂದ ಬಹುಮಾನ ವಿತರಿಸಲಾಯಿತು.
ಡಾ|| ಸುಶ್ಮಾ ಮತ್ತು ಡಾ|| ಶೋಭ ರವರು ಮಹಿಳೆಯರ ಆರೋಗ್ಯ ಸಂಬಂಧಿ ವಿಷಯದ ಕುರಿತು ವಿಐಎಸ್‌ಎಲ್ ನ ಮಹಿಳಾ ಕಾರ್ಮಿಕರು ಮತ್ತು ಗುತ್ತಿಗೆ ಕಾರ್ಮಿಕರೊಂದಿಗೆ ದಿನಾಂಕ 7ಮತ್ತು 8 ಮಾರ್ಚ್ ರಂದು ಸಂವಾದವನ್ನು ನಡೆಸಿಕೊಟ್ಟರು.
International Women’s Day ಸೈಲ್-ವಿಐಎಸ್‌ಎಲ್ ರಾಂಚಿಯವರು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ವೀಡಿಯೋ ಸಂವಾದದಲ್ಲಿ ಕಾರ್ಯಪಾಲಕ ನಿರ್ದೇಶಕರಾದ ಶ್ರೀ ಬಿ.ಎಲ್. ಚಂದ್ವಾನಿ, ಶ್ರೀ ಎಲ್. ಪ್ರವೀಣ್ ಕುಮಾರ್, ಮಹಾಪ್ರಬಂಧಕರು (ಸಾರ್ವಜನಿಕ ಸಂಪರ್ಕ), ಶ್ರೀಮತಿ ಶೋಭ ಶಿವಶಂಕರನ್, ಮಹಾಪ್ರಬಂಧಕರು (ಹಣಕಾಸು) ಮತ್ತು ವಿಐಎಸ್‌ಎಲ್‌ನ ಮಹಿಳಾ ಕಾರ್ಮಿಕರು ಭಾಗವಹಿಸಿ ಸೈಲ್ ಅಧ್ಯಕ್ಷರು ಮತ್ತು ಸೈಲ್ ಬೊರ್ಡ್ ಸದಸ್ಯರೊಂದಿಗೆ ಸಂವಾದದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಉಚಿತವಾಗಿ ಹೈಬ್ರೀಡ್ ತಳಿಯ ಪಪಾಯ ಮತ್ತು ನುಗ್ಗೆ ಸಸಿಗಳನ್ನು ಮಹಿಳಾ ಕಾರ್ಮಿಕರು ವಿತರಿಸಲಾಯಿತು.
ಡಾ|| ಶೋಭ, ವೈಧ್ಯಾಧಿಕಾರಿ, ವಿಐಎಸ್‌ಎಲ್ ಆಸ್ಪತ್ರೆ ಕಾರ್ಯಕ್ರಮವನ್ನು ನಿರೂಪಿಸಿದರು, ಸಿಬ್ಬಂದಿ, ಮಾನವ ಸಂಪನ್ಮೂಲ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳು ಕಾರ್ಯಕ್ರಮವನ್ನು ಆಯೋಜಿಸಿದ್ದವು.
