Renukacharya Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಜಿಲ್ಲಾ ಜಂಗಮ ಹಾಗೂ ಬೇಡ ಜಂಗಮ ಸಮಾಜ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಮಾ.12 ರ ಬೆಳಿಗ್ಗೆ 11 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವವನ್ನು ಆಯೋಜಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾಪ್ಪ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರು ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮ ಹಾಗೂ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮತದ ಅಧ್ಯಕ್ಷರುಗಳು, ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಿಗಳ ಅಧ್ಯಕ್ಷರು, ಜನಪ್ರತಿಧಿನಿಗಳು, ಅಧಿಕಾರಿಗಳು ಪಾಲ್ಗೊಳ್ಳುವರು.
ಬಸವೇಶ್ವರ ವಿದ್ಯಾ ಸಂಸ್ಥೆಯ ನಿವೃತ್ತ ಪ್ರಾಚಾರ್ಯರಾದ ಗುರುಸಿದ್ದ ಶಾಸ್ತಿç ಜಿ ಟಿ ಎಂ ವಿಶೇಷ ಉಪನ್ಯಾಸ ಮಾಡುವರು.