Saturday, December 6, 2025
Saturday, December 6, 2025

Shivamogga Railway Police ತರೀಕೆರೆ- ಮಸರಹಳ್ಳಿ ರೈಲ್ವೆ ನಿಲ್ದಾಣದ ನಡುವೆ ಅಪರಿಚಿತ ಮೃತವ್ಯಕ್ತಿ ಪತ್ತೆ. ರೈಲ್ವೆ ಪೊಲೀಸ್ ಮಾಹಿತಿ

Date:

Shivamogga Railway Police ತರೀಕೆರೆ ಮತ್ತು ಮಸರಹಳ್ಳಿಯ ರೈಲು ನಿಲ್ದಾಣಗಳ ಮಧ್ಯೆ ದಿ.14-09-2024 ರಂದು ಸುಮಾರು 50 ರಿಂದ 55 ವರ್ಷದ ಅಪರಿಚಿತ ವ್ಯಕ್ತಿ ಮೃತಪಟ್ಟಿರುತ್ತಾನೆಂದು ವರದಿ ಮಾಡಲಾಗಿದೆ.

ಮೃತ ವ್ಯಕ್ತಿಯು 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈ ಬಣ್ಣ, ತಲೆಯಲ್ಲಿ ಸುಮಾರು 2 ಇಂಚು ಕಪ್ಪು ಮತ್ತು ಬಿಳಿ ಮಿಶ್ರಿತ ತಲೆಕೂದಲು ಹಾಗೂ ಕುರುಚಲು ಬಿಳಿ ಮತ್ತು ಕಪ್ಪು ಮಿಶ್ರಿತ ಗಡ್ಡಮೀಸೆ ಬಿಟ್ಟಿದ್ದು, ಕಡುಗಿಣಿ ಹಸಿರು ಬಣ್ಣದ ರೆಡಿಮೇಡ್ ಟೀ-ಶರ್ಟ್, ಗಿಣಿ ಹಸಿರು ಬಣ್ಣದ ಚೆಕ್ಸ್ ಗೆರೆಗಳಿರುವ ಪಂಚೆ ಹಾಗೂ ಗಿಣಿ ಹಸಿರು ಮತ್ತು ಬಿಳಿ ಬಣ್ಣದ ಉದ್ದಗೆರೆಗಳಿರುವ ಟವೆಲ್ ಇರುತ್ತದೆ.

Shivamogga Railway Police ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ದೇಹವನ್ನು ಇರಿಸಲಾಗಿದೆ. ಈ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಸಬ್‌ಇನ್ಸ್ಪೆಕ್ಟರ್‌ನ ದೂ.ಸಂ: 08182222974 ನ್ನು ಸಂಪರ್ಕಿಸಬಹುದು ಎಂದು ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...