Thursday, November 5, 2026
Thursday, November 5, 2026

Radio Shivamogga ರೇಡಿಯೊ ಶಿವಮೊಗ್ಗದಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಬಾನುಲಿ ಪಾಠ ಸರಣಿ

Date:

Radio Shivamogga ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಶಿವಮೊಗ್ಗ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ ಹಾಗೂ ಆರ್ಯ ವಿಜ್ಞಾನ ಕಾಲೇಜು, LBS ನಗರ ಶಿವಮೊಗ್ಗ ಇವರ ಸಹಯೋಗದಲ್ಲಿ, ರೇಡಿಯೋ ಪಾಠಗಳು ನಡೆಯುತ್ತಿದೆ. ಇದು ರೇಡಿಯೋ ಶಿವಮೊಗ್ಗ 90.8 ಎಫ್.ಎಂ. ನಲ್ಲಿ ಮಾರ್ಚ್ 14ರಿಂದ 20ರವರೆಗೆ ಪ್ರತಿದಿನ ಬೆಳಗ್ಗೆ 11 ಗಂಟೆಗೆ ಹಾಗೂ ಸಂಜೆ 8 ಗಂಟೆ 10 ನಿಮಿಷಕ್ಕೆ ಪ್ರಸಾರವಾಗಲಿದೆ.

ಈ ಕಾರ್ಯಕ್ರಮದ ಸದುಪಯೋಗವನ್ನು ರಾಜ್ಯದಲ್ಲಿ ಎಸ್.ಎಸ್. ಎಲ್. ಸಿ. ವ್ಯಾಸಂಗ ನಡೆಸುತ್ತಿರುವ ಎಲ್ಲಾ ವಿದ್ಯಾರ್ಥಿಗಳೂ ಪಡೆಯಬಹುದಾಗಿದೆ.

ಪ್ರಸಾರ ವೇಳಾಪಟ್ಟಿ ಹೀಗಿದೆ. ದಿನಾಂಕ 14-03-2025 ರಂದು ಕನ್ನಡ, 15 ರಂದು ಗಣಿತ, 17 ರಂದು ಇಂಗ್ಲೀಷ್ 18 ರಂದು ಸಮಾಜ ವಿಜ್ಞಾನ 19 ರಂದು ವಿಜ್ಞಾನ 20 ರಂದು ಹಿಂದಿ, ಪಾಠಗಳು ಪ್ರಸಾರವಾಗಲಿದೆ.

Radio Shivamogga ರೇಡಿಯೋ ಶಿವಮೊಗ್ಗವು ಸಾಮಾನ್ಯ ರೇಡಿಯೋಗಳ ಜೊತೆಗೆ, ಮೊಬೈಲ್ ನಲ್ಲಿರುವ ಇನ್ ಬಿಲ್ಟ್ ಎಫ್ ಎಂ ಗಳಲ್ಲಿ ಪ್ರಸಾರವಾಗಲಿದೆ. ಇದರ ಜೊತೆಗೆ ಸ್ವಂತದ್ದೇ ಆಪ್ ಸಹಾ ಹೊಂದಿದ್ದು, ಅದನ್ನು ಗೂಗಲ್ ಪ್ಲೇಸ್ಟೋರ್ ನಲ್ಲಿ ಡೌನ್ಲೋಡ್ ಮಾಡಬಹುದಾಗಿದೆ. ಅದರ ಕೊಂಡಿ ಹೀಗಿದೆ.

https://play.google.com/store/apps/details?id=com.atclabs.radioshivmogga

ಹೆಚ್ಚಿನ ಮಾಹಿತಿಗೆ ( ಮೊ: 72591 76279) ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...