Ayushman Bharat Project ಎಲ್ಲ ವರ್ಗದ ಜನರಿಗೆ ಉತ್ತಮ ಆರೋಗ್ಯ ಒದಗಿಸುವ ಉದ್ದೇಶದಿಂದ ಆರಂಭಿಸಿರುವ ‘ಆಯುಷ್ಮಾನ್ ಭಾರತ್’ ಯೋಜನೆಯಲ್ಲಿ 562 ಕೋಟಿ ರೂ. ಲೂಟಿಯಾಗಿರುವುದು ಪತ್ತೆಯಾಗಿದೆ. ದೇಶದ ಕೇಂದ್ರಾಡಳಿತ ಪ್ರದೇಶಗಳು ಸೇರಿ ಒಟ್ಟು 24 ರಾಜ್ಯಗಳಲ್ಲಿ ಈ ರೀತಿ ಮೋಸ ನಡೆದಿದೆ. ಸುಳ್ಳು ದಾಖಲೆ ಮತ್ತು ಚಿಕಿತ್ಸೆಯ ನಕಲಿ ಬಿಲ್ ಸೃಷ್ಟಿಸಿ ಹಣ ದೋಚಲಾಗಿದೆ. ಉತ್ತರ ಪ್ರದೇಶವೊಂದರಲ್ಲಿಯೇ 139 ಕೋಟಿ ರೂ. ಮೋಸ ನಡೆದಿದೆ ಎಂದು ಕೇಂದ್ರ ಸರಕಾರ ಹೇಳಿದೆ.
Ayushman Bharat Project ಕರ್ನಾಟಕದಲ್ಲಿ ಎಲ್ಲಿಯೂ ನಕಲಿ ಬಿಲ್ ತಯಾರಿಸಿದ ಪ್ರಕರಣ ಪತ್ತೆಯಾಗಿಲ್ಲ, ಖಾಸಗಿ ಆಸ್ಪತ್ರೆಗಳು ಚಿಕಿತ್ಸಾದರ ಪರಿಷ್ಕರಿಸಲು ಕೇಳುತ್ತಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ್ ಅವರು ತಿಳಿಸಿದ್ದಾರೆ.ಕೇಂದ್ರ ಆರೋಗ್ಯ ಖಾತೆ ಸಹಾಯಕ ಸಚಿವ ಪ್ರತಾಪ್ ರಾವ್ ಜಾಧವ್ ಅವರು ರಾಜ್ಯಸಭೆಯಲ್ಲಿ ನೀಡಿದ ಲಿಖಿತ ಉತ್ತರ ದಲ್ಲಿ ಈ ಮಾಹಿತಿಗಳನ್ನು ಹಂಚಿಕೊಂಡಿದ್ದು, ಯೋಜನೆಯಲ್ಲಿ ಅಕ್ರಮ ತಡೆಗೆ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ