DC Shivamogga ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಸಾರ್ವಜನಿಕ ಆರೋಗ್ಯ ಸಲಹೆಯನ್ನು ಅನುಸರಿಸುವ ಮೂಲಕ ತಮ್ಮ ಆರೋಗ್ಯದ ಕಾಳಜಿ ವಹಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಬಿಸಿಲು ಹೆಚ್ಚಾಗಿದೆ. ದಿನೇ ದಿನೇ ಸಾರ್ವಜನಿಕರು ಕೆಲಸದ ಒತ್ತಡದ ಜೊತೆಗೆ ಬಿಸಿಲಿನ ಬೇಗೆಯನ್ನು ಸಹಿಸಿಕೊಳ್ಳದ ಸ್ಥಿತಿಗೆ ತಲುಪಿದ್ದಾರೆ. ಇದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಕುಗ್ಗುತ್ತಿದ್ದಾರೆ. ಈ ಸಂದರ್ಭದಲ್ಲಿ ಸಾಮಾನ್ಯವಾಗಿ ಮನುಷ್ಯನ ದೇಹದ ಉಷ್ಣತೆಯು 36.4 ಡಿಗ್ರಿ ಸೆ ನಿಂದ 37.2 ಡಿಗ್ರಿ ಸೆ( 97.5 ಡಿಗ್ರಿ ಸೆ ಎಫ್ ನಿಂದ 98.9 ಡಿಗ್ರಿ ಸೆ ಎಫ್) ಆಗಿರುತ್ತದೆ. ಹಾಗಾಗಿ ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳು ಹೆಚ್ಚಿನ ಉಷ್ಣತೆಯಿಂದ ಕೂಡಿರುತ್ತದೆ. ಈ ಉಷ್ಣತೆಯ ಒತ್ತಡದಿಂದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ.
ಇದಲ್ಲದೆ ನಾವು ಧರಿಸುವ ಬಟ್ಟೆಗಳು ಕೂಡ ದೇಹದ ಸುರಕ್ಷತೆಗೆ ಬಹುಮುಖ್ಯವಾಗಿದೆ. ಇಂತಹ ತಾಪಮಾನದಲ್ಲಿ ತಿಳಿ ಬಣ್ಣದ, ಅಳಕವಾದ ಹತ್ತಿಯ ಬಟ್ಟೆಯನ್ನು ಧರಿಸಬೇಕು. ಹೊರ ಹೋಗುವ ಸಂದರ್ಭದಲ್ಲಿ ಛತ್ರಿ, ಟೋಪಿ, ಟವೆಲ್ ಅಥವಾ ಇನ್ನಾವುದೇ ಸಂಪ್ರಾದಯಿಕ ಪದ್ಧತಿಯನ್ನು ಅನುಸರಿಸಿ ಬಿಸಿಲಿನಿಂದ ಪಡೆಯಬೇಕು ಎಂದಿದ್ದಾರೆ.
DC Shivamogga ಈ ಸಂದರ್ಭದಲ್ಲಿ ಚಪ್ಪಲಿ/ ಶೂಸ್‌ಗಳನ್ನು ಧರಿಸಬೇಕು.
ಬಿಸಿಲಿನಲ್ಲಿ ಅಂದರೆ 12 ರಿಂದ 3 ಗಂಟೆಗೆ ಹೊರ ಹೋಗುವುದನ್ನು ತಪ್ಪಿಸಬೇಕು. ಚಪ್ಪಲಿ ಧರಸಿ ಹೊರ ಹೋಗಬೇಕು. ಮಧ್ಯಾಹ್ನ ಅಡುಗೆ ಸಿದ್ದಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲನ್ನು ತೆರದಿಡಿ, ಮಧ್ಯಾಹ್ನ ಟೀ, ಕಾಫಿ ಮತ್ತು ಕಾರ್ಬೊನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ ಎಂದು ಎಚ್ಚರಿಸಿದ್ದಾರೆ.