Guarantee Scheme ಗ್ಯಾರಂಟಿ ಅನುಷ್ಠಾನ ಸಮಿತಿಗಾಗಿ ರಾಜ್ಯದ ಜನರ ತೆರಿಗೆ ಹಣವನ್ನು ದುರುಪಯೋಗ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಶಾಸಕರುಗಳು ವಿಧಾನ ಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.
Guarantee Scheme ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ ಸುರೇಶ್ ಬಾಬು, ಜೆಡಿಎಸ್ ವಿಧಾನ ಪರಿಷತ್‌ನ ನಾಯಕರಾದ ಶ್ರೀ ಭೋಜೆಗೌಡ, ಬಿಜೆಪಿ ಮತ್ತು ಜೆಡಿಎಸ್‍ನ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.