Nidhi Aapke Nikat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮಾ. 27 ರಂದು ಆಯೋಜಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ರಿಪ್ಪನ್‌ಪೇಟೆಯ ಮೆಸ್ಕಾಂ ಹತ್ತಿರದ ಓಂ ಎಲೆಕ್ಟ್ರಿಕಲ್ಸ್ ನಲ್ಲಿ ಹಾಗೂ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹರಪ್ಪನಹಳ್ಳಿ ರಸ್ತೆಯಲ್ಲಿನ ಎಂಕೆಈಟಿ, ಎಲ್‌ಕೆ ಆಂಗ್ಲ ಮಾಧ್ಯಮ ಸಿಬಿಎಸ್‌ಸಿ ವಿದ್ಯಾಲಯದಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ.
Nidhi Aapke Nikat ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದ್ದು, ಉದ್ಯೋಗದಾತರು ಮತ್ತು ಉದ್ಯೋಗಿಗಳು ಮತ್ತು ಪಿಂಚಣಿದಾರರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.
Nidhi Aapke Nikat ಮಾರ್ಚ್ 27 ಶಿವಮೊಗ್ಗ & ದಾವಣಗೆರೆ ಜಿಲ್ಲೆಗಳಲ್ಲಿ “ನಿಧಿ ಆಪ್ ಕೆ ನಿಕಟ್” ಕಾರ್ಯಕ್ರಮ
Date: