Saturday, December 6, 2025
Saturday, December 6, 2025

K.N.Phanindra ಬಾಲಕಿಯರ ಬಾಲಮಂದಿರಕ್ಕೆ ನ್ಯಾ.ಕೆ.ಎನ್.ಫಣೀಂದ್ರ ಅನಿರೀಕ್ಷಿತ ಭೇಟಿ. ಸ್ವಚ್ಛತೆಗೆ ಆದ್ಯತೆ ನೀಡಲು ಸೂಚನೆ

Date:

K.N.Phanindra ಮಾನ್ಯ ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ರವರು ಶುಕ್ರವಾರ ಬಾಲಕಿಯರ ಬಾಲ ಮಂದಿರಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿ, ಸೂಕ್ತ ಸಲಹೆ ಸೂಚನೆಗಳನ್ನು‌ನೀಡಿದರು.
ಅಡುಗೆ ಮನೆಗೆ ತೆರಳಿ, ಅಡುಗು ಮನೆ ಮೇಲ್ಚಾವಣೆ ಹಾಗೂ ಆಹಾರದ ಸುರಕ್ಷಿತ ತಪಾಸಣೆ ಮಾಡಿದರು.
ಕೈ ತೊಳೆಯುವ ಸ್ಥಳ, ವಾಟರ್ ಫಿಲ್ಟರ್ , ಮಕ್ಕಳ ಮಲಗುವ ಕೊಠಡಿಯನ್ನು ಪರಿವೀಕ್ಷಿಸಿ ಹಾಳಾಗಿರುವ ಹಾಸಿಯನ್ನು ಹಾಗೂ ಮಂಚಗಳನ್ನು ಬದಲಾಯಿಸಬೇಕೆಂದು ನಿರ್ದೇಶನ ನೀಡಿದರು.
ಹಾಸಿಗೆ, ಮಂಚಗಳ ಗುಣಮಟ್ಟ ಪರೀಕ್ಷಿಸಿ ಖರೀದಿಸಬೇಕು. ಹಾಳಾದ ಮಂಚಗಳನ್ನು ದುರಸ್ತಿಪಡಿಸಿ, ಹಾಳಾದ ಹಾಸಿಗೆಗಳನ್ನು ತೆಗೆದುಹಾಕಿ ಹೊಸದನ್ನು ಹಾಕಿಸುವಂತೆ ಸೂಷಿಸಿದರು. ಕಿಟಕಿ‌ ಗಾಜು, ಮೆಶ್ ಸರಿಪಡಿಸಿ ಸ್ವಚ್ಚತೆಯನ್ನು ಇನ್ನು ಒಂದು ವಾರದೊಳಗೆ ಮಾಡಬೇಕು. ಇಲ್ಲವಾದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಆವರಣದೊಳಗೆ ಹಂದಿಗಳ ಹಾವಳಿ ತಪ್ಪಿಸಿ, ಸ್ವಚ್ಚತೆ ಕಾಪಾಡಿ ಸೂಕ್ತ ಕ್ರಮ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು. ಶೌಚಾಲಯ ವೀಕ್ಷಿಸಿದ ಅವರು ಒಡೆದ ಹಳ ಊಟ, ತಿಂಡಿ ಇತರೆ ಸೌಲಭ್ಯಗಳು ಸರಿಯಾಗಿ ನೀಡುತ್ತಿದ್ದಾರಾ, ಕುಡಿಯುವ ನೀರಿನ ಸೌಲಭ್ಯ, ಬಿಸಿನೀರು, ಹೊಟ್ಟೆ ತುಂಬ ಗುಣಮಟ್ಟದ ಊಟ ಕೊಡುತ್ತಿದ್ದಾರಾ? ಎಂದು ಕೇಳಿದರು. ಗ್ರಂಥಾಲಯಕ್ಕೆ ಬೇಕಾದ ಪುಸ್ತಕ ಗಳನ್ನು ಕೇಳಿರಿ.
ಏನು ಸೌಕರ್ಯ, ಸೌಲಭ್ಯಗಳು ಬೇಕೆಂದು ಕೇಳಿದರು. K.N.Phanindra ಸತ್ಪ್ರಜೆಗಳಾಗಬೇಕು. ಸೇವಾ ಮನೋಭಾವ ಬೆಳೆಸಿಕೊಂಡು, ಉತ್ತಮ‌ ಉದ್ಯೋಗ ಪಡೆದು‌, ದೇಶ ಸೇವೆ ಮಾಡುವಂತೆ ತಿಳಿಸಿದರು. ನಿಮ್ಮ ಪೀಳಿಗೆ ಚೆನ್ನಾಗಿದ್ದರೆ ದೇಶ ಅಭಿವೃದ್ಧಿ ಸಾಧ್ಯ. ಚೆನ್ನಾಗಿ ಓದಿರಿ. ನಿಮ್ಮ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿದರು.
ಅನುದಾನದ ಅವಶ್ಯಕತೆ ಇದ್ದರೆ ಕೇಳಿ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡುತ್ತೇನೆ. ತಮ್ಮ ಮನೆಯಂತೆ ಬಾಲಮಂದಿರವನ್ನು‌ ನೋಡಿಕೊಳ್ಳಬೇಕೆಂದು ತಿಳಿಸಿದರು.
ನಂತರ ಸರ್ಕಾರಿ ವಿಶೇಷ ದತ್ತು ಸಂಸ್ಥೆಗೆ ಭೇಟಿಗೆ ನೀಡಿ, ಶಿವರಾತ್ರಿ ಹಬ್ಬದಂದು ಕೇಂದ್ರಕ್ಕೆ ದಾಖಲಾದ ಹೆಣ್ಣು ಮಗುವಿಗೆ ಉಪ ಲೋಕಾಯುಕ್ತರು ನಾಮಕರಣ ಮಾಡಿದರು.
ರಾಜ್ಯ ಮಹಿಳಾ‌ ನಿಲಯಕ್ಕೆ ಭೇಟಿ ನೀಡಿ, ನಿವಾಸಿಗಳೊಂದಿಗೆ ಮಾತನಾಡಿ, ಕುಂದು ಕೊರತೆಗಳನ್ನು ಆಲಿಸಿದರು.ಮಾನ್ಯ ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ರವರು ಶುಕ್ರವಾರ ಬಾಲಕಿಯರ ಬಾಲ ಮಂದಿರಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿ, ಸೂಕ್ತ ಸಲಹೆ ಸೂಚನೆಗಳನ್ನು‌ನೀಡಿದರು.
ಅಡುಗೆ ಮನೆಗೆ ತೆರಳಿ, ಅಡುಗು ಮನೆ ಮೇಲ್ಚಾವಣೆ ಹಾಗೂ ಆಹಾರದ ಸುರಕ್ಷಿತ ತಪಾಸಣೆ ಮಾಡಿದರು.
ಕೈ ತೊಳೆಯುವ ಸ್ಥಳ, ವಾಟರ್ ಫಿಲ್ಟರ್ , ಮಕ್ಕಳ ಮಲಗುವ ಕೊಠಡಿಯನ್ನು ಪರಿವೀಕ್ಷಿಸಿ ಹಾಳಾಗಿರುವ ಹಾಸಿಯನ್ನು ಹಾಗೂ ಮಂಚಗಳನ್ನು ಬದಲಾಯಿಸಬೇಕೆಂದು ನಿರ್ದೇಶನ ನೀಡಿದರು.
ಹಾಸಿಗೆ, ಮಂಚಗಳ ಗುಣಮಟ್ಟ ಪರೀಕ್ಷಿಸಿ ಖರೀದಿಸಬೇಕು. ಹಾಳಾದ ಮಂಚಗಳನ್ನು ದುರಸ್ತಿಪಡಿಸಿ, ಹಾಳಾದ ಹಾಸಿಗೆಗಳನ್ನು ತೆಗೆದುಹಾಕಿ ಹೊಸದನ್ನು ಹಾಕಿಸುವಂತೆ ಸೂಷಿಸಿದರು. ಕಿಟಕಿ‌ ಗಾಜು, ಮೆಶ್ ಸರಿಪಡಿಸಿ ಸ್ವಚ್ಚತೆಯನ್ನು ಇನ್ನು ಒಂದು ವಾರದೊಳಗೆ ಮಾಡಬೇಕು. ಇಲ್ಲವಾದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಆವರಣದೊಳಗೆ ಹಂದಿಗಳ ಹಾವಳಿ ತಪ್ಪಿಸಿ, ಸ್ವಚ್ಚತೆ ಕಾಪಾಡಿ ಸೂಕ್ತ ಕ್ರಮ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು.
ಶೌಚಾಲಯ ವೀಕ್ಷಿಸಿದ ಅವರು ಒಡೆದ ಹಳ
ಊಟ, ತಿಂಡಿ ಇತರೆ ಸೌಲಭ್ಯಗಳು ಸರಿಯಾಗಿ ನೀಡುತ್ತಿದ್ದಾರಾ, ಕುಡಿಯುವ ನೀರಿನ ಸೌಲಭ್ಯ, ಬಿಸಿನೀರು, ಹೊಟ್ಟೆ ತುಂಬ ಗುಣಮಟ್ಟದ ಊಟ ಕೊಡುತ್ತಿದ್ದಾರಾ? ಎಂದು ಕೇಳಿದರು. ಗ್ರಂಥಾಲಯಕ್ಕೆ ಬೇಕಾದ ಪುಸ್ತಕ ಗಳನ್ನು ಕೇಳಿರಿ.
ಏನು ಸೌಕರ್ಯ, ಸೌಲಭ್ಯಗಳು ಬೇಕೆಂದು ಕೇಳಿದೆಉ.

ಸತ್ಪ್ರಜೆಗಳಾಗಬೇಕು. ಸೇವಾ ಮನೋಭಾವ ಬೆಳೆಸಿಕೊಂಡು, ಉತ್ತಮ‌ ಉದ್ಯೋಗ ಪಡೆದು‌, ದೇಶ ಸೇವೆ ಮಾಡುವಂತೆ ತಿಳಿಸಿದರು. ನಿಮ್ಮ ಪೀಳಿಗೆ ಚೆನ್ನಾಗಿದ್ದರೆ ದೇಶ ಅಭಿವೃದ್ಧಿ ಸಾಧ್ಯ. ಚೆನ್ನಾಗಿ ಓದಿರಿ. ನಿಮ್ಮ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿದರು.
ಅನುದಾನದ ಅವಶ್ಯಕತೆ ಇದ್ದರೆ ಕೇಳಿ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡುತ್ತೇನೆ. ತಮ್ಮ ಮನೆಯಂತೆ ಬಾಲಮಂದಿರವನ್ನು‌ ನೋಡಿಕೊಳ್ಳಬೇಕೆಂದು ತಿಳಿಸಿದರು.
ನಂತರ ಸರ್ಕಾರಿ ವಿಶೇಷ ದತ್ತು ಸಂಸ್ಥೆಗೆ ಭೇಟಿಗೆ ನೀಡಿ, ಶಿವರಾತ್ರಿ ಹಬ್ಬದಂದು ಕೇಂದ್ರಕ್ಕೆ ದಾಖಲಾದ ಹೆಣ್ಣು ಮಗುವಿಗೆ ಉಪ ಲೋಕಾಯುಕ್ತರು ನಾಮಕರಣ ಮಾಡಿದರು.
ರಾಜ್ಯ ಮಹಿಳಾ‌ ನಿಲಯಕ್ಕೆ ಭೇಟಿ ನೀಡಿ, ನಿವಾಸಿಗಳೊಂದಿಗೆ ಮಾತನಾಡಿ, ಕುಂದು ಕೊರತೆಗಳನ್ನು ಆಲಿಸಿದರು. ನಂತರ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ‌ನಂತರ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ, ಅಡುಗೆ ಮನೆ, ದಾಸ್ತಾನು‌ ಕೊಠಡಿ, ಮಕ್ಕಳು ಮಲಗುವ ಕೊಠಡಿಗಳನ್ನು‌ ವೀಕ್ಷಿಸಿ ಸೂಕ್ತ ಸಲಹೆ ಸೂಚನೆ ನೀಡಿದರು.

ಸರ್ಕಾರ ನೀಡುವ ಸೌಲಭ್ಯಗಳನ್ನು ಸದ್ಬಳಕೆ ಆಗಬೇಕು. ಏನಾದರೂ ತೊಂದರೆ ಇದ್ದರೆ ಹೇಳಿ, ಗ್ರಂಥಾಲಯ ಇದೆಯಾ? ಎಂದು‌ಕೇಳಿದರು. ವೈದ್ಯರು ಬಂಸು ತಪಾಸಣೆ ಮಾಡುತ್ತಾರೆ. ಸ್ಯಾನಿಟರಿ ಪ್ಯಾಡ್ ನೀಡುತ್ತಾರಾ ಎಂದು ಪ್ರಶ್ನಿಸಿದರು.‌ ಕಂಪ್ಯೂಟರ್ ಇದೆಯಾ, ೨೫೦ ಕ್ಕೂ ಹೆಚ್ಚು ಜನ ಇರುವ ಕಾರಣ ೫ ೬ ಕಂಪ್ಯೂಟರ್ ನೀಡಿರಿ. ಬಿಸಿ ನೀರು ನೀಡಿರಿ‌, ಮಕ್ಕಳಿಗೆ ನೀಡಬೇಕಾದ ಎಲ್ಲ ಸೌಲಭ್ಯಗಳನ್ನು ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿದ್ಯಾರ್ಥಿಗಳು ಚೆನ್ನಾಗಿ ಓದಬೇಕು.‌ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು. ಭ್ರಷ್ಟಾಚಾರದಲ್ಲಿ ತೊಡಗುವುದಿಲ್ಲ, ಉತ್ತೇಜಿಸುವುದಿಲ್ಲ. ನಿಯಂತ್ರಿಸುತ್ತೇನೆ ಎಂಬ ಮನೊಭಾವ ಇಟ್ಟುಕೊಂಡು ಮುಂದೆ ಬರಬೇಕು. ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳ ಬೇಕು ಎಂದರು.
ಹಾಸ್ಟೆಲ್ ಆವರಣದಲ್ಲಿರುವ ಯುಜಿಡಿ ಸಂಪರ್ಕ ವೀಕ್ಷಿಸಿ , ಸೂಕ್ತವಾದ ಯುಜಿಡಿ ವ್ಯವಸ್ಥೆ ಮಾಡುವಂತೆ ಪಾಲಿಕೆ ಆಯುಕ್ತ ರಿಗೆ ಸೂಚನೆ ನೀಡಿದರು.
ಈ ವೇಳೆ ಅವರು ಮಾತನಾಡಿ, ಎಸ್ ಸಿ ಎಸ್ ಟಿ ಹಾಸ್ಟೆಲ್ ನಲ್ಲಿ‌ ನಿರ್ಲಕ್ಷ್ಯ ವಹಿಸಿ ಕೊಡಬೇಕಾದ ಸೌಲಭ್ಯ ನೀಡದ, ಸ್ವಚ್ಚತೆ ಕಾಪಾಡದ ಅಧಿಕಾರಿಗಳ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ, ಸರಿಪಡಿಸಿಕೊಳ್ಳಲು ಕಾಲಾವಕಾಶ ನೀಡಿ, ಸರಿಪಡಿಸಿಕೊಳ್ಳದಿದ್ದರೆ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...