Shivamogga News ಸಮಾಜದಲ್ಲಿ ಸೇವಾ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಮಾಡುವಲ್ಲಿ ರೋಟರಿಯಂತಹ ಸಂಸ್ಥೆಗಳು ಮಹತ್ತರ ಪಾತ್ರ ವಹಿಸುತ್ತವೆ ಎಂದು ಡಾ. ಕಡಿದಾಳ್ ಗೋಪಾಲ್ ಹೇಳಿದರು.
ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೋಟರಿ ಜಿಲ್ಲಾ ಗವರ್ನರ್ ಆಗಿ ನಿಯೋಜಿತರಾಗಿರುವ ವಸಂತ್ ಹೋಬಳಿದಾರ್ ಅವರಿಗೆ ಸನ್ಮಾನಿಸಿ ಮಾತನಾಡಿ, ರೋಟರಿ ಸಂಸ್ಥೆಗಳಲ್ಲಿ ತೊಡಗಿಸಿಕೊಳ್ಳುವುದರಂದ ಹೆಚ್ಚಿನ ಅನುಕೂಲಗಳಿದ್ದು, ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕು ಎಂದು ತಿಳಿಸಿದರು.
ಸನ್ಮಾನ ಸ್ವೀಕರಿಸಿದ ವಸಂತ್ ಹೋಬಳಿದಾರ್ ಮಾತನಾಡಿ, ರೋಟರಿ ಜಿಲ್ಲೆಯ ಸದಸ್ಯರು ಅಪಾರ ಪ್ರೀತಿ, ವಿಶ್ವಾಸ ಹೊಂದಿದ್ದು, ದೊರೆತಿರುವ ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತೇನೆ. ರೋಟರಿ ಸಂಸ್ಥೆ ಪ್ರಪಂಚದಲ್ಲಿ ಅತಿ ದೊಡ್ಡ ಸೇವಾ ಸಂಸ್ಥೆಯಾಗಿದೆ. ನೂರು ವರ್ಷಗಳಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಸಂಸ್ಥೆ ಮುನ್ನಡೆಯುತ್ತಿರುವುದು ಸಾಧನೆಯಾಗಿದೆ ಎಂದು ತಿಳಿಸಿದರು.
Shivamogga News ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಅರುಣ್ ದೀಕ್ಷಿತ್ ಮಾತನಾಡಿ, ಜಿಲ್ಲೆಯಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಮಹತ್ತರ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದು, ರೋಟರಿ ಶಾಲೆ, ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ, ಆರೋಗ್ಯ ಶಿಬಿರ, ಚಿತಾಗಾರ ನಿರ್ವಹಣೆ ಸೇರಿದಂತೆ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ ಎಂದು ಹೇಳಿದರು.
ಇನ್ನರ್‌ವ್ಹೀಲ್ ನಿಯೋಜಿತ ಜಿಲ್ಲಾ ಚೇರ್ಮನ್ ಶಬರಿ ಕಡಿದಾಳ್ ಮಾತನಾಡಿ, ಮುಂದಿನ ದಿನಗಳಲ್ಲಿ ಅನೇಕ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವ ಉದ್ದೇಶವಿದೆ ಎಂದು ತಿಳಿಸಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಡಾ. ಗುಡದಪ್ಪ ಕಸಬಿ, ಚಂದ್ರಹಾಸ ಪಿ ರಾಯ್ಕರ್, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಶಶಿಕಾಂತ್ ನಾಡಿಗ್, ಎಚ್.ಬಿ.ಆದಿಮೂರ್ತಿ, ಎ.ಟಿ.ಸುಬ್ಬೇಗೌಡ, ಎನ್.ಎಚ್.ಶ್ರೀಕಾಂತ್, ಕಿಶೋರ್, ಡಾ. ಧನಂಜಯ, ಅನೂಪ್, ಅನಿತಾ ರವಿಶಂಕರ್, ಕೆ.ಜಿ.ರಾಮಚಂದ್ರ, ಇನ್ನರ್‌ವ್ಹೀಲ್ ಸದಸ್ಯರು ಇದ್ದರು.
Shivamogga News ವಹಿಸಿರುವ ಜವಾಬ್ದಾರಿಯನ್ನ ಪರಿಣಾಮಕಾರಿಯಾಗಿ ನಿರ್ವಹಿಸುವೆ- ವಸಂತ ಹೋಬಳಿದಾರ್
Date: