Karnataka German Technical Training Institute 2024-25 ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರಿಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಗೆ ವಿವಿಧ ಕೌಶಲ್ಯಾಭಿವೃದ್ದಿ(ತಾಂತ್ರಿಕ ನೈಪುಣ್ಯತೆ) ತರಬೇತಿಯನ್ನು ನೀಡಲು ಜಿಲ್ಲಾ ಮಟ್ಟದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ ಬೆಂಗಳೂರು ಇವರ ಪ್ರಾದೇಶಿಕ ಕೆಜಿಟಿಟಿಐ ತರಬೇತಿ ಕೇಂದ್ರಗಳ ಸಹಯೋಗದೊಂದಿಗೆ ತರಬೇತಿ ನೀಡಲಾಗುವುದು. ಅರ್ಹ ವಿದ್ಯಾವಂತ ನಿರುದ್ಯೋಗ ಯುವಕ/ಯುವತಿಯರು ಅರ್ಜಿಯನ್ನು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಶಿವಮೊಗ್ಗ ಇಲ್ಲಿ ಮತ್ತು ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರುಗಳ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಮೂಲಕ ಆಫ್‌ಲೈನ್‌ನಲ್ಲಿ ಏ.5 ರೊಳಗೆ ಸಲ್ಲಿಸಬಹುದು.
Karnataka German Technical Training Institute ಸೆಲ್ಫ್ ಎಂಪ್ಲಾಯ್ಡ್ ಟೈಲರಿಂಗ್ 2 ತಿಂಗಳ ಅವಧಿಯ ತರಬೇತಿ, ಅಸಿಸ್ಟೆಂಟ್ ಬ್ಯೂಟಿ ಥೆರಪಿಸ್ಟ್ 2 ತಿಂಗಳು, ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪರೇಟರ್ 2 ತಿಂಗಳು, ಫ್ಯಾಷನ್ ಡಿಸೈನರ್ 1 ತಿಂಗಳ ಅವಧಿಯ ತರಬೇತಿಯನ್ನು ನೀಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.