shakti yojana ನಾಡಿನ ಪ್ರತಿಯೊಬ್ಬ ಮಹಿಳೆಯೂ ಕೂಡ ಆರ್ಥಿಕ ಸಂಕಷ್ಟಗಳಿಂದ ಹೊರಬಂದು ಸುಖ ಸಂತೋಷದಿಂದ ಜೀವನ ಸಾಗಿಸುವಂತಾಗಬೇಕು ಎಂಬ ರಾಜ್ಯ ಸರ್ಕಾರದ ಉದ್ದೇಶವನ್ನು ಗ್ಯಾರಂಟಿ ಯೋಜನೆಗಳು ಈಡೇರಿಸುತ್ತಿದೆ.
ನಾಡಿನ ಸ್ವಾಭಿಮಾನಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದೊಂದಿಗೆ ಜಾರಿಗೆ ತಂದ ಶಕ್ತಿ ತನ್ನ ಗುರಿಯನ್ನು ಯಶಸ್ವಿಯಾಗಿ ಈಡೇರಿಸುತ್ತಾ ಮುನ್ನಡೆಯುತ್ತಿರುವುದು ಯೋಜನೆಯ ಯಶಸ್ಸಿಗೆ ಹಿಡಿದಿರುವ ಕೈಗನ್ನಡಿ.
shakti yojana ʼಒಡಲ ಧ್ವನಿʼಯೆಂಬ ಮಹಿಳಾ ಸಂಘ ಕಟ್ಟಿಕೊಂಡು, ವಿಜಯಪುರದ ಇಂಡಿಯಲ್ಲಿ ಹೋಳಿಗೆ ತಯಾರಿಸಿ ಶಕ್ತಿ ಯೋಜನೆಯಡಿ ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಬೆಳೆಸಿ ಬೆಂಗಳೂರಿಗೆ ತಂದು ವ್ಯಾಪಾರ ಮಾಡಿ ಕೈತುಂಬ ಆದಾಯ – ನೆಮ್ಮದಿಯ ಸ್ವಾವಲಂಬಿ ಬದುಕು ಕಟ್ಟಿಕೊಂಡಿರುವ ಈ ಮಹಿಳೆಯರ ಕತೆ ಸ್ಪೂರ್ತಿದಾಯಕವಾಗಿದೆ ಎಂದು ರಾಜ್ಯ ಪ್ರಚಾರ ಇಲಾಖೆ ಪ್ರಕಟಣೆ ತಿಳಿಸಿದೆ.