CSC – Devalaya ಮುಂದೆ ರಾಜ್ಯದ ಪ್ರಮುಖ ದೇವಾಲಯಗಳ ಪ್ರಸಾದಗಳು ಭಕ್ತರ ಮನೆ ಬಾಗಿಲಿಗೆ ಬರಲಿದೆ.
ಧಾರ್ಮಿಕ ದತ್ತಿ ಇಲಾಖೆಯಡಿ 35 ಸಾವಿರಕ್ಕೂ ಹೆಚ್ಚು ದೇವಾಲಯಗಳಿವೆ. ಅವುಗಳಲ್ಲಿ ʼಎʼ ಮತ್ತು ʼಬಿʼ ದರ್ಜೆಯ 390 ದೇವಾಲಯಗಳಿವೆ. ಭಕ್ತಾದಿಗಳು ʼಇ-ಪ್ರಸಾದʼ ವೆಬ್‌ಸೈಟ್ ಮೂಲಕ ಮೊದಲ ಹಂತದಲ್ಲಿ 14 ಪ್ರಮುಖ ದೇವಾಲಯಗಳಿಂದ ಪ್ರಸಾದವನ್ನು ಆನ್‌ಲೈನ್ ಮೂಲಕ ಆರ್ಡರ್ ಮಾಡಿ ಪಡೆಯಲು ಅನುಕೂಲ ಕಲ್ಪಿಸಲಾಗಿದೆ.
CSC – Devalaya “ನಾನಾ ಕಾರಣಗಳಿಂದಾಗಿ ಎಲ್ಲರಿಗೂ ದೇವಸ್ಥಾನಗಳಿಗೆ ಹೋಗಲು ಸಾಧ್ಯವಾಗುವುದಿಲ್ಲ. ವಯಸ್ಸಾದವರು, ವಿಶೇಷ ಚೇತನರು, ಒಬ್ಬಂಟಿಗರು ಒಳಗೊಂಡಂತೆ ಗ್ರಾಮೀಣ, ನಗರ ಹಾಗೂ ಹೊರ ರಾಜ್ಯದ ಭಕ್ತಾದಿಗಳ ಅನುಕೂಲಕ್ಕಾಗಿ ʼಇ-ಪ್ರಸಾದʼ ಸೇವೆ ಆರಂಭಿಸಲಾಗಿದೆ.
ರಾಜ್ಯದ ಯಾವುದೇ ಭಾಗದ ಭಕ್ತಾದಿಗಳು ಪ್ರಸಾದಕ್ಕೆ ಆರ್ಡರ್ ಮಾಡಿದರೆ ಸಿಎಸ್‌ಸಿ ಇ ಗವರ್ನೆನ್ಸ್ ಸಂಸ್ಥೆಯು ಮನೆ ಬಾಗಿಲಿಗೆ ತಲುಪಿಸಲಿದೆ” ಎಂದು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.