Dr. Sharan Prakash Patil ಬೆಂಗಳೂರಿನ ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಗೆ ರಾಜ್ಯದ ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಭೇಟಿ ನೀಡಿ, ಅಲ್ಲಿನ ಒಳರೋಗಿಗಳ ಯೋಗಕ್ಷೇಮವನ್ನು ವಿಚಾರಿಸಿದರು.
ಇದೇ ಸಂದರ್ಭದಲ್ಲಿ ದೂರದೂರಿನಿಂದ ಬಂದ, ಆರ್ಥಿಕವಾಗಿ ಹಿಂದುಳಿದ ರೋಗಿಗಳಿಗೆ ಹೆಚ್ಚಿನ ಆರ್ಥಿಕ ಹೊರೆ ಹಾಕದೇ, ಅವರನ್ನು ಒಳರೋಗಿಗಳಾಗಿ ಸೇರಿಸಿಕೊಳ್ಳಬೇಕು ಎಂದು ಕಿದ್ವಾಯಿ ಆಡಳಿತ ಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು.
ಸಂಸ್ಥೆಯ ಆಡಳಿತ ಮಂಡಳಿಯ ಜೊತೆ ಸಭೆ ನಡೆಸಿ
ರೋಗಿಗಳಿಗೆ ಹೆಚ್ಚಿನ ಆರ್ಥಿಕ ಹೊರೆಯಾಗದಂತೆ ನಿಗಾವಹಿಸಿ, ದೂರದ ಊರಿಗಳಿಂದ ಬಂದ ರೋಗಗಳ ಬಗ್ಗೆ ಹೆಚ್ಚಿನ ಗಮನ ನೀಡಿ ಎಂದು ತಿಳಿಸಿದರು
ಅಂತಿಮ ಆರೋಗ್ಯದ ವರದಿಗಳನ್ನು ನೀಡಲು ಒಂದೆರಡು ದಿನಗಳು ತೆಗೆದುಕೊಳ್ಳಬಹುದು, ಈ ಅವಧಿಯಲ್ಲಿ ಒಳರೋಗಿಗಳಾಗಿ ದಾಖಲಾಗಲು ಬಯಸುವವರಿಗೆ ಒಪ್ಪಿಗೆ ಪತ್ರವನ್ನು ಒದಗಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು
Dr. Sharan Prakash Patil ಕಿದ್ವಾಯಿ ಆಸ್ಪತ್ರೆಗೆ ಬರುವ ಶೇ. 90ಕ್ಕಿಂತ ಹೆಚ್ಚು ರೋಗಿಗಳು ಬಿಪಿಎಲ್ ವರ್ಗವಾಗಿರುವುದರಿಂದ, ವಿಶೇಷ ವಾರ್ಡ್, ಶಾಂತಿಧಾಮ ಮತ್ತು ಅನಿಕೇತನ, ಅರೆ-ವಿಶೇಷ ವಾರ್ಡನ್ನು ಸಾಮಾನ್ಯ ವಾರ್ಡ್ ಗಳಾಗಿ ಪರಿವರ್ತಿಸಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಕಿದ್ವಾಯಿ ಆಡಳಿತಾಧಿಕಾರಿ ವೈ.ನವೀನ್ ಭಟ್ ಮತ್ತು ನಿರ್ದೇಶಕ ಡಾ.ನವೀನ್ ಸೇರಿದಂತೆ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದರು