M.Chinnaswamy Stadium ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಗಳ ವೀಕ್ಷಣೆಗಾಗಿ ನಮ್ಮ ಮೆಟ್ರೋ ಏಪ್ರಿಲ್ 02, 10, 18, 24 ಹಾಗೂ ಮೇ 03, 13, 17 ರಂದು ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ ವೈಟ್‌ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ರೇಷ್ಮೆ ಸಂಸ್ಥೆ ಮತ್ತು ಮಾದವರ ಮೆಟ್ರೋ ರೈಲು ಸೇವೆಯನ್ನು ರಾತ್ರಿ 12.30ರ ವರೆಗೆ ವಿಸ್ತರಿಸಿದೆ.
ನಾಡಪ್ರಭು ಕೆಂಪೇಗೌಡ ಮೆಜೆಸ್ಟಿಕ್ ನಿಲ್ದಾಣದಿಂದ ಎಲ್ಲಾ ನಾಲ್ಕು ದಿಕ್ಕುಗಳ ಕಡೆಗೆ ಕೊನೆಯ ರೈಲು ಮಧ್ಯರಾತ್ರಿ 1.15ಕ್ಕೆ ಹೊರಡಲಿದೆ.