Department of Social Welfare ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಏ.05 ರ ಬೆಳಿಗ್ಗೆ 11 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಮ್‌ರವರ 118 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಎಸ್ ಇವರ ಘನ ಉಪಸ್ಥಿತಿ ಇರಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ, ಭದ್ರಾವತಿ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮ/ಕೆಆರ್‌ಐಡಿಎಲ್ ಅಧ್ಯಕ್ಷರಾದ ಬಿ.ಕೆ.ಸಂಗಮೇಶ್ವರ, ಸಾಗರ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಅರಣ್ಯ ಕೈಗಾರಿಕೆ ನಿಗಮ ನಿಯಮಿತದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಇವರು ನೆರವೇರಿಸುವರು.
Department of Social Welfare ಅಧ್ಯಕ್ಷತೆಯನ್ನು ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಎಸ್.ಎನ್.ಚನ್ನಬಸಪ್ಪ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರು, ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ದಲಿತ ಸಂಘಟನೆಗಳ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಳ್ಳುವರು. ಮೈಸೂರಿನ ಸಾಹಿತಿಗಳು ಹಾಗೂ ಸಮುದಾಯ ಚಿಂತಕರಾದ ದಾಸನೂರು ಕೂಸಣ್ಣ ವಿಶೇಷ ಉಪನ್ಯಾಸ ನೀಡುವರು. ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಸೈನ್ಸ್ ಮೈದಾನದಿಂದ ಅಮೀರ್ ಅಹ್ಮದ್ ಸರ್ಕಲ್, ಗೋಪಿ ಸರ್ಕಲ್ ಮಾರ್ಗವಾಗಿ ಕುವೆಂಪು ರಂಗಮಂದಿರದವೆಗೆ ಡಾ.ಬಾಬು ಜಗಜೀವನರಾಮ್‌ರವರ ಭಾವಚಿತ್ರ ಮೆರವಣಿಗೆ ಇರಲಿದೆ.