The Waqf ಲೋಕಸಭೆಯಲ್ಲಿ ಅಂಗೀಕಾರವಾಗಿರುವ ಬಹು ಚರ್ಚಿತ ವಕ್ಫ್ ತಿದ್ದುಪಡಿ -2025 ಅನ್ನು ರಾಜ್ಯಸಭೆಯಲ್ಲಿ ಕೆಂದ್ರ ಸರ್ಕಾರ ಮಂಡಿಸಿತ್ತು.
ಲೋಕಸಭೆಯಲ್ಲಿ ಸುದೀರ್ಘ ಚರ್ಚೆಯನಂತರ
288-232 ಅಂತರದಲ್ಲಿ ವಕ್ಫ್ ಮಸೂದೆಗೆ ಲೋಕಸಭೆ ಅಂಗೀಕಾರ ನೀಡಿದೆ.
ರಾಜ್ಯಸಭೆಯಲ್ಲಿ
127-95 ಅಂತರದಲ್ಲಿ ಅಂಗೀಕಾರ ಪಡೆಯಿತು. ರಾಷ್ಟ್ರಪತಿಗಳು ಸಹಿ ಹಾಕಿದರೆ ಕಾನೂನಾಗಿ ಜಾರಿಗೆ ಬರುವುದು ಬಾಕಿ ಇದೆ.
ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡ ಬೆನ್ನಲ್ಲೇ ದಿಲ್ಲಿಯಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಸೋನಿಯಾ ಗಾಂಧಿ ಅವರು ಮಾತನಾಡಿ , ಈಗ ವಕ್ಫ್ ತಿದ್ದುಪಡಿ ವಿಧೇಯಕದ ಮೂಲಕ ಸಂವಿಧಾನದ ಮೇಲೆ ಕೇಂದ್ರ ಸರ್ಕಾರ ಘೋರ ದಾಳಿ ನಡೆಸಿದೆ. ಸಂಸತ್ತು ಅಂಗೀಕರಿಸಿದ ಮಹಿಳಾ ಮೀಸಲು ವಿಧೇಯಕವನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುತ್ತಿದೆ ಎಂದು ಕಿರಿಕಾರಿದರು.
ದೇಶದಲ್ಲಿರುವ ವಕ್ಫ್ ಬೋರ್ಡ್ ಗಳ ಆಸ್ತಿ ಸುಮಾರು 1.2 ಲಕ್ಷ ಕೋಟಿ ರೂಪಾಯಿ ಬೆಲೆ ಬಾಳುತ್ತದೆ. ಇಂತಹ ಬೆಲೆಬಾಳುವ ಆಸ್ತಿಯನ್ನು ದಾನಿಗಳು ನೀಡಿದ್ದಾರೆ. ಈ ಆಸ್ತಿಯನ್ನು ರಕ್ಷಣೆ ಮಾಡಿ ಬಡ ಮುಸ್ಲಿಮರಿಗೆ ಅನುಕೂಲವಾಗುವ ಕೆಲಸವನ್ನು ಈ ವಿಧೇಯಕ ಮಾಡುತ್ತಿದೆ ಎಂದು ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ಅವರು ಹೇಳಿದ್ದಾರೆ.
ಕೇಂದ್ರ ಸರ್ಕಾರವು ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ ಎಂಬ ವರದಿಗಳು ತೀವ್ರ ಸಂಚಲನ ಮೂಡಿಸಿದೆ.
ವಕ್ಫ್ ಮಂಡಳಿಯು ತನ್ನ ಆಸ್ತಿಗಳ ಮೇಲೆ ಅನಿಯಂತ್ರಿತವಾದ ಹಿಡಿತ ಸಾಧಿಸಿದ್ದು, ಅದನ್ನು ತೆರವುಗೊಳಿಸುವುದು ತಿದ್ದುಪಡಿಯ ಉದ್ದೇಶಗಳಲ್ಲಿ ಒಂದು ಎನ್ನಲಾಗಿದೆ.