Friday, June 13, 2025
Friday, June 13, 2025

Airports Authority of India ಕೇಂದ್ರ ವಿಮಾನ ಯಾನ ಸಚಿವರಿಗೆ ಸೀಎಂ ಸಿದ್ಧರಾಮಯ್ಯ ನೀಡಿದ ಪತ್ರದ ವಿವರ

Date:

Airports Authority of India ದೆಹಲಿಯಲ್ಲಿ ಇಂದು ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವರಾದ ಕಿಂಜರಾಪು ರಾಮಮೋಹನ ನಾಯ್ಡು ಅವರಿಗೆ ನೀಡಿದ ಪತ್ರದ ವಿವರ ಹೀಗಿದೆ;

ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ರಾಜ್ಯ ಸರ್ಕಾರವು ದಿನಾಂಕ 6-10-2005 ರಂದು ಒಪ್ಪಂದ ಮಾಡಿಕೊಂಡಿದೆ. ಒಪ್ಪಂದದ ನಿಯಮ ಬಿ (2) (v) ಪ್ರಕಾರ ಕಾರ್ಯನಿಯೋಜಕರು ವಿಮಾನ ನಿಲ್ದಾಣದ ವಿಸ್ತರಣೆಗಾಗಿ ಅಗತ್ಯ ವಿರುವ ಹೆಚ್ಚುವರಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಯಾವುದೇ ಋಣಭಾರವಿಲ್ಲದೆ ನಿಯೋಜಿತರಿಗೆ ಉಚಿತವಾಗಿ ವರ್ಗಾಯಿಸಬೇಕು. ಅದರಂತೆ, ಅಗತ್ಯವಿರುವ ಭೂಮಿಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಉಚಿತವಾಗಿ ವರ್ಗಾಯಿಸಲಾಗಿದೆ. ಒಪ್ಪಂದದ ಷರತ್ತು ಬಿ 2 (VI) ಪ್ರಕಾರ, ನಿಯೋಜಿತರು ಮೈಸೂರು ವಿಮಾನ ನಿಲ್ದಾಣದ ಹೆಚ್ಚಿನ ಅಭಿವೃದ್ಧಿಯ ಬಂಡವಾಳ ವೆಚ್ಚ, ಮಾರ್ಪಾಡುಗಳು, ಬಲಪಡಿಸುವಿಕೆ ಮತ್ತು ಮೇಲ್ದರ್ಜೆಗೇರಿಸುವ ಎಲ್ಲಾ ವೆಚ್ಚಗಳನ್ನು ಭರಿಸಬೇಕು. ಅದರಂತೆ, ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆಗೆ ಅಗತ್ಯವಿರುವ ಬಂಡವಾಳ ಹಾಗೂ ಇನ್ನಿತರೆ ವೆಚ್ಚಗಳನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವೇ ಭರಿಸಬೇಕಿದೆ.

ಈ ಹಿನ್ನೆಲೆಯಲ್ಲಿ, ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ಅಗತ್ಯವಿರುವ 240 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರವು 319.14 ಕೋಟಿಗಳ ಅನುದಾನವನ್ನು ಬಿಡುಗಡೆ ಮಾಡಿದೆ. ಭೂ ಸ್ವಾಧೀನ ಪ್ರಕ್ರಿಯೆಯು ಅಂತಿಮ ಹಂತದಲ್ಲಿದೆ.

ನವೆಂಬರ್ 2024 ರಲ್ಲಿ ಕಾವೇರಿ ನೀರಾವರಿ ನಿಗಮ ನಿಯಮಿತವು(ಸಿ. ಎನ್.ಎನ್.ಎಲ್) ವಿಮಾನ ನಿಲ್ದಾಣ ವಿಸ್ತರಣೆ ಪ್ರದೇಶದಲ್ಲಿ ಎರಡು ಕಂದಕಗಳ ಮತ್ತು 7 ಕಾಲುವೆಗಳ ಸ್ಥಳಾಂತರಕ್ಕೆ ವರದಿಯನ್ನು ಸಲ್ಲಿಸಿದ್ದು, ಇದಕ್ಕೆ ₹70 ಕೋಟಿಗಳ ವೆಚ್ಚವಾಗಲಿದೆ. ಅಂತೆಯೇ, ಕೆ.ಪಿ.ಟಿ.ಸಿಎಲ್ ಕೂಡ ಹೈ-ಟೆನ್ಷನ್ ಲೈನ್ ಗಳ ಮತ್ತು ಚೆಸ್ಕಾಂ ಲೋ ಟೆನ್ಶನ್ ವೈರ್ ಗಳ ಮಾರ್ಗ ಬದಲಾವಣೆಗೆ 31.82 ಕೋಟಿಗಳ ಅಂದಾಜು ವೆಚ್ಚವಾಗಲಿದೆ ಎಂದು ತಿಳಿಸಿದ್ದು, ಒಟ್ಟಾರೆ ಸದರಿ ಕಾಮಗಾರಿಗೆ 101.82 ಕೋಟಿಗಳ ಅನುದಾನದ ಅಗತ್ಯವಿದೆ ಎಂದು ತಿಳಿಸಿದ್ದಾರೆ.

Airports Authority of India ಆದ್ದರಿಂದ, ರಾಜ್ಯ ಸರ್ಕಾರವು ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ 240 ಎಕರೆ ಭೂ ಸ್ವಾಧೀನಕ್ಕೆ ತಗಲುವ 319.14 ಕೋಟಿ ವೆಚ್ಚವನ್ನು ಭರಿಸಿದ್ದು, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ವಿಸ್ತರಣೆಯ ಅಂದಾಜು ವೆಚ್ಚ 101.84 ಕೋಟಿಗಳ ಯುಟಿಲಿಟಿ ಸ್ಥಳಾಂತರದ ಯೋಜನೆಯನ್ನು ರೂಪಿಸಿ ಶ್ರೀಘ್ರವಾಗಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕೆಂದು ಕೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...