Bharat Scouts and Guides ಮಕ್ಕಳಲ್ಲಿ ಸಕಾರಾತ್ಮಕ ಭಾವನೆಗಳನ್ನು ಮೂಡಿಸಿ ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಬೇಸಿಗೆ ಶಿಬಿರಗಳು ಸಹಕಾರಿಯಾಗುತ್ತವೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಪ್ರಧಾನ ಆಯುಕ್ತ ಶಕುಂತಲಾ ಚಂದ್ರಶೇಖರ್ ಹೇಳಿದರು.
ಈಸೂರು ಸರ್ಕಾರಿ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಸ್ಥಳೀಯ ಸಂಸ್ಥೆಗಳ ಸಹಕಾರದಿಂದ ಆಯೋಜಿಸಿದ್ದ ಬೇಸಿಗೆ ಶಿಬಿರ ಉದ್ಘಾಟಿಸಿ ಮಾತನಾಡಿ, ವಿದ್ಯಾಭ್ಯಾಸದ ಜತೆಗೆ ಇಂತಹ ಶಿಬಿರಗಳು ಮಕ್ಕಳಲ್ಲಿ ಸೃಜನಶೀಲತೆ ಹಾಗೂ ಸಾಂಸ್ಕೃತಿಕ ಕ್ರೀಡಾ ಮನೋಭಾವ ಬೆಳೆಸುತ್ತವೆ. ಕಲಿಕಾ ಆಸಕ್ತಿ ವೃದ್ಧಿಸಲು ನೆರವಾಗುತ್ತದೆ ಎಂದು ತಿಳಿಸಿದರು.
ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್ ಮಾತನಾಡಿ, ಬೇಸಿಗೆ ರಜೆಯಲ್ಲಿ ಮಕ್ಕಳು ಅಮೂಲ್ಯವಾದ ಸಮಯವನ್ನು ಮೊಬೈಲ್, ಟಿವಿ ಹಾವಳಿಯಿಂದ ಹಾಳು ಮಾಡಿಕೊಳ್ಳುತ್ತಾರೆ. ಇಂತಹ ಶಿಬಿರಗಳಲ್ಲಿ ಪಾಲ್ಗೊಳ್ಳುವುದರಿಂದ ಧ್ಯಾನ, ಯೋಗ, ಗ್ರಾಮೀಣ ಕ್ರೀಡೆ ಸೇರಿದಂತೆ ವೈವಿಧ್ಯ ವಿಷಯಗಳ ಕಲಿಕೆಯಲ್ಲಿ ತೊಡಗಿಸಿಕೊಳ್ಳಬಹುದು. ಮಕ್ಕಳ ದೈಹಿಕ ಮತ್ತು ಮಾನಸಿಕ ಶಕ್ತಿ ವೃದ್ಧಿಯಾಗುತ್ತದೆ ಎಂದು ಹೇಳಿದರು.
Bharat Scouts and Guides ಶಿಕಾರಿಪುರ ತಾಲೂಕು ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಪರಮೇಶ್ವರಯ್ಯ ಮಾತನಾಡಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಎಲ್ಲ ಕಡೆ ಬೇಸಿಗೆ ಶಿಬಿರಗಳು ಆಯೋಜನೆಗೊಂಡಿದ್ದು, ಶಾಲೆಯ ಎಸ್‌ಡಿಎಂಸಿ ಸಮಿತಿ, ಪೋಷಕರ ಸಹಕಾರ ಅತ್ಯಂತ ಮುಖ್ಯ. ಇದರಿಂದ ಕ್ರೀಯಾಶೀಲ ಸಾಂಸ್ಕೃತಿಕ ವಾತಾವರಣ ನಿರ್ಮಾಣವಾಗುವುದರ ಜತೆಗೆ ಹೊಸ ಹೊಸ ವಿಷಯಗಳನ್ನು ಕಲಿಯಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಎಸ್‌ಡಿಎಂಸಿ ಅಧ್ಯಕ್ಷ ಚಂದ್ರಶೇಖರ್, ಬುಲ್ ಬುಲ್ ತರಬೇತಿ ಆಯುಕ್ತೆ ಮೀನಾಕ್ಷಮ್ಮ ವಿವಿಧ ಕ್ಷೇತ್ರಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಿ ಗೌರವಿಸಿದರು. ಕೇಂದ್ರ ಸ್ಥಾನಿಕ ಆಯುಕ್ತ ಮಲ್ಲಿಕಾರ್ಜುನ್ ಕಾನೂರು, ಕರಿಬಸಪ್ಪ, ಶಾರದಮ್ಮ, ಬೆನಕಪ್ಪ, ಶ್ರೀದೇವಿ ಹಾಗೂ ವಿದ್ಯಾರ್ಥಿಗಳು ಇದ್ದರು.
Bharat Scouts and Guides ವಿದ್ಯಾಭ್ಯಾಸದ ಸಂಗಡ ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಸೃಜನಶೀಲತೆ ಬೆಳೆಸುತ್ತವೆ- ಶಕುಂತಲಾ ಚಂದ್ರಶೇಖರ್
Date: