Madhu Bangarappa ಶರಾವತಿ ಸಂತ್ರಸ್ಥರ ನೆಮ್ಮದಿಯ ಬದುಕಿಗೆ ಸರ್ಕಾರ ಬದ್ಧವಾಗಿದ್ದು, ಅವರ ರಕ್ಷಣೆಯ ಕುರಿತು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸಂತ್ರಸ್ಥರು ಸರ್ಕಾರದೊಂದಿಗೆ ಸಹಕರಿಸುವಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು.
ಅವರು ನಗರದ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಶರಾವತಿ ಸಂತ್ರಸ್ಥರ ನೆರವಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳೆರೆಡೂ ಸಕಾರಾತ್ಮಕವಾಗಿ ಹೆಜ್ಜೆ ಇರಿಸಿದೆ. ಹಲವು ದಶಕಗಳಿಂದ ಇತ್ಯರ್ಥವಾಗದೇ ಉಳಿದಿದ್ದ ಶರಾವತಿ ಸಂತ್ರಸ್ಥರಿಗೆ ಪುನರ್ವಸತಿ ಹಾಗೂ ಬದುಕು ರೂಪಿಸುವಲ್ಲಿ ನ್ಯಾಯಾಲಯಕ್ಕೆ ಮಾಡಿದ ಮನವಿಯಂತೆ ಅಲ್ಲಿನ ಸಮೀಕ್ಷೆಗೆ ಚಾಲನೆ ನೀಡಿ ಆದೇಶ ಹೊರಡಿಸಿರುವುದು ಸಹಜವಾಗಿ ಎಲ್ಲರಲ್ಲೂ ಹರ್ಷ ಮೂಡಿಸಿದೆ ಎಂದರು.
ಈ ಸಂಬಂಧ ನ್ಯಾಯಾಲಯದ ಸೂಚನೆಯಂತೆ ಜಿಲ್ಲಾಡಳಿತ ಸರ್ವೇ ಕಾರ್ಯಕ್ಕೆ ಸದ್ಯದಲ್ಲೇ ಚಾಲನೆ ನೀಡಲಿದೆ. ಸಂತ್ರಸ್ಥರೂ ಕೂಡ ಸಮೀಕ್ಷಾ ಕಾರ್ಯಕ್ಕೆ ಬರುವ ಅಧಿಕಾರಿ-ಸಿಬ್ಬಂಧಿಗಳಿಗೆ ಸಲ್ಲದ ಅಡಚಣೆ ಮಾಡದಂತೆ ಸಹಕರಿಸುವಂತೆ ಮನವಿ ಮಾಡಿದ ಅವರು, ಪ್ರಸ್ತುತ ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಸಲ್ಲಿಸಿದ ಮನವಿಯಂತೆ ಸಮೀಕ್ಷಾ ಕಾರ್ಯ ನಡೆಯಲಿದೆ. ನಂತರವೂ ಸಂತ್ರಸ್ಥ ಕುಟುಂಬಗಳಲ್ಲಿ ಅಹವಾಲುಗಳಿದ್ದಲ್ಲಿ ಅವುಗಳನ್ನು ಶಾಂತವಾಗಿ ಆಲಿಸಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.
ಸಂತ್ರಸ್ಥರ ಹಿತಕಾಯುವ ನಿಟ್ಟಿನಲ್ಲಿ ಹಲವು ದಶಕಗಳಿಂದ ನಿರಂತರ ಹೋರಾಟ ಮಾಡುತ್ತಾ ಬಂದಿದ್ದು, ಇದೀಗ ತಾರ್ಕಿಕ ಅಂತ್ಯ ಕಾಣುವ ನಿರೀಕ್ಷೆ ಇದೆ. ಅಲ್ಲದೇ ರಾಜ್ಯಮಟ್ಟದ ಹಿರಿಯ ಅಧಿಕಾರಿಗಳು, ತಜ್ಞರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಲಾಗಿತ್ತು. ಈ ಭಾಗದ ಜನರ ಸಮಸ್ಯೆಗಳನ್ನು ಆಲಿಸಿದ್ದ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ದೇಶದ ಸರ್ವೋಚ್ಛ ನ್ಯಾಯಾಲಯವೂ ಕೂಡ ನಿಗಧಿಪಡಿಸಿದ ಅತ್ಯಲ್ಪ 4-5 ಸಾವಿರ ಸಂಖ್ಯೆಯ ಜನರ ಸಮೀಕ್ಷೆಗೆ ಮುಂದಾಗಿತ್ತು. ಆದರೆ, ಇಲ್ಲಿನ ಜನರ ಒಕ್ಕೊರಲಿನ ಅಭಿಪ್ರಾಯವನ್ನು ರಾಜ್ಯ ಸರ್ಕಾರ ನೇಮಿಸಿದ ಸಮರ್ಥ ವಕೀಲರು ನ್ಯಾಯಾದೀಶರೆದುರು ವ್ಯವಸ್ಥಿತವಾಗಿ ಮಂಡಿಸಿದ ಪರಿಣಾಮವಾಗಿ ಸಂತ್ರಸ್ತರ 9000ಹೆಕ್ಟೇರ್‌ಪ್ರದೇಶದ ವ್ಯಾಪ್ತಿಯ ಹಳ್ಳಿಗಳು, ವಸತಿ ಪ್ರದೇಶಗಳು ಸೇರಿದಂತೆ ಸಮೀಕ್ಷೆಗೆ ಮುಂದಾಗಿರುವುದು ಸಂತೋಷವಾಗಿದೆ. ಈ ಸಮೀಕ್ಷೆ ಕಾರ್ಯಕ್ಕೆ ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡುವುದಾಗಿ ಅವರು ತಿಳಿಸಿದರು.
Madhu Bangarappa ಈ ಸಮೀಕ್ಷಾ ಕಾರ್ಯಕ್ಕೆ ಅತ್ಯಾಧುನಿಕವಾದ ಸಮೀಕ್ಷಾ ಪರಿಕರಗಳು, ಅಗತ್ಯ ಸಿಬ್ಬಂಧಿಗಳನ್ನು ನಿಯೋಜಿಸಲಾಗಿದೆ. ಸದ್ಯದಲ್ಲಿ ಸಮೀಕ್ಷೆ ಆರಂಭಗೊಳ್ಳಲಿದೆ. ಅದಕ್ಕಾಗಿ ವಿಭಾಗೀಯ ಶಾಖೆಯನ್ನು ಆರಂಭಿಸಲು ಸೂಚಿಸಲಾಗಿದೆ. ಸಂತ್ರಸ್ಥರು ವಾಗ್ವಾದಗಳಿಗೆ ಇಳಿಯದೇ ಸಹಕರಿಸಬೇಕು. ಮೂರು ತಿಂಗಳೊಳಗಾಗಿ ಪೂರ್ಣಗೊಳಿಸಲು ಕೋರಲಾಗಿದೆ ಎಂದ ಅವರು ಈ ಸಮೀಕ್ಷೆ ಇಂತಹ ಅನೇಕ ಸಂತ್ರಸ್ಥ ಭೂಪ್ರದೇಶಗಳಿಗೆ ಮಾಧರಿಯಾಗಿ ಉಳಿಯಲಿದೆ ಎಂದರು.
ನಗರದ ಈದ್ಗಾ ಮೈದಾನದ ಸಮಸ್ಯೆಯನ್ನು ಶಾಂತಿಯುತವಾಗಿ ಇತ್ಯರ್ಥಪಡಿಸಲು ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿದೆ. ಅರಣ್ಯ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸರ್ಕಾರದ ಕಾರ್ಯದರ್ಶಿಗಳು ಸೂಚಿಸಿದ್ದಾರೆ ಎಂದವರು ತಿಳಿಸಿದರು.
Madhu Bangarappa ಸಮಸ್ಯೆ ಪರಿಹರಿಸುವಲ್ಲಿ ಶರಾವತಿ ಸಂತ್ರಸ್ತರು ಸರ್ಕಾರದೊಂದಿಗೆ ಸಹಕರಿಸಬೇಕು- ಮಧು ಬಂಗಾರಪ್ಪ
Date: