CM Siddharamaiah ವಿಧಾನ ಸೌಧದ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಸೌಧದ ಭವ್ಯ ಮೆಟ್ಟಿಲುಗಳ ಬಿಳಿ ಹಮ್ಮಿಕೊಳ್ಳಲಾದ ಸಮಾರಂಭದಲ್ಲಿ ಲೋಕಾರ್ಪಣೆಗೊಳಿಸಿದರು.
CM Siddharamaiah ಈ ಸಮಾರಂಭದಲ್ಲಿ, ವಿಧಾನ ಸಾಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ, ಇಂಧನ ಸಚಿವ ಕೆ.ಜೆ.ಜಾರ್ಜ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
