Saturday, December 6, 2025
Saturday, December 6, 2025

Madhu Bangarappa ನಮ್ಮೂರು ನಮ್ಮ ಶಾಲೆ, ಜೊತೆಗೆ ಸರ್ಕಾರದ ಆಸ್ತಿ ರಕ್ಷಣೆಯ ಹೊಣೆಯೂ ನಮ್ಮದಾಗಿರಲಿ- ಮಧು ಬಂಗಾರಪ್ಪ

Date:

Madhu Bangarappa ಸಾರ್ವಜನಿಕವಾಗಿರುವ ಎಲ್ಲಾ ಕೆಲಸ ಕಾರ್ಯಗಳನ್ನು ಸರ್ಕಾರವೇ ಮಾಡಲೆಂದು ಅಪೇಕ್ಷಿಸದೆ ತಾವು ಕೂಡ ಸ್ವಯಂ ಪ್ರೇರಿತರಾಗಿ ಕೈಲಾದ ಸೇವೆ ಸಲ್ಲಿಸಲು ಸಿದ್ದರಾಗಬೇಕು. ಎಲ್ಲರಲ್ಲೂ ನಮ್ಮ ಊರು, ನಮ್ಮ ಶಾಲೆ ಎಂಬ ಅಭಿಮಾನವಿರಬೇಕು. ಮಕ್ಕಳ ಭವಿಷ್ಯ ರೂಪಿಸುವುದು ಮಾತ್ರವಲ್ಲ ಸರ್ಕಾರದ ಅಸ್ತಿಯ ರಕ್ಷಣೆಯ ಹೊಣೆಯೂ ನಮ್ಮೆಲ್ಲರದ್ದಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.
ಅವರು ಸೊರಬ ತಾಲೂಕು ಹುರುಳಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಸರ್ಕಾರಿ ಶಾಲೆಗೆ ನೂತನ ಶಾಲಾ ಕಾಂಪೌಂಡ್ ಮತ್ತು ಅಡುಗೆ ಕೋಣೆಯ ಕಾಮಗಾರಿಗಳಿಗೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಯೋಜನೆ ಮತ್ತು ಸಾಂಕಿಕ ಸಚಿವ ಡಿ. ಸುಧಾಕರ್ ಹಾಗೂ ಸ್ಥಳೀಯರೊಂದಿಗೆ ಭಾಗವಹಿಸಿ, ಶಾಲಾ ಕಾಂಪೌಂಡ್ ಮತ್ತು ಅಡುಗೆ ಕೋಣೆ ನಿರ್ಮಾಣಕ್ಕೆ ಶ್ರಮದಾನ ಮಾಡಿದ ನಂತರ ಗಿಡನೆಟ್ಟು ಶಂಕುಸ್ಥಾಪನೆ ನೆರವೇರಿಸಿದರು. ನಂತರ ಶಾಲಾ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಸಮಾರಂಭವನ್ನು ಉದ್ಘಾಟಿಸಿದ ಅವರು ಶಾಲಾ ಸ್ವತ್ತು ರಕ್ಷಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ಹಿಂದೆ ಶಾಸಕನಾಗಿದ್ದ ಅವಧಿಯಲ್ಲಿ ನೂತನ ಶಾಲಾ ಕೊಠಡಿಯ ನಿರ್ಮಾಣಕ್ಕೆ ಅಗತ್ಯ ಅನುದಾನ ನೀಡಲಾಗಿತ್ತು. ಪ್ರಸ್ತುತ ಹೆಚ್ಚುವರಿಯಾಗಿ ಎರಡು ಕೊಠಡಿಗಳ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನ ಬಿಡುಗಡೆ ಮಾಡುವುದಾಗಿ ಅವರು ಭರವಸೆ ನೀಡಿದರು.
ದೇಶದ ಉಜ್ವಲ ಭವಿಷ್ಯ ರೂಪಿಸುವ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸುವ ಶಿಕ್ಷಣ ಇಲಾಖೆ ಸಚಿವನಾಗಿ ಕಾರ್ಯನಿರ್ವಹಿಸುತ್ತಿರುವುದು ತೃಪ್ತಿ ತಂದಿದೆ. ಎಲ್ಲರಿಗೂ ಸ್ಫೂರ್ತಿ ದಾಯಕವಾದ ಇಂತಹ ಕಾರ್ಯಕ್ರಮದಲ್ಲಿ ಶ್ರಮದಾನಕ್ಕೆ ಭಾಗಿಯಾದ ತಮಗೆ ಅಭಿನಂದನೆಗಳು ಎಂದರು.
Madhu Bangarappa ಅಜೀಮ್ ಪ್ರೇಮ್ ಜಿ ಫೌಂಡೇಶನ್ ಅವರ 1591 ಕೋಟಿ ರೂ. ಗಳ ಆರ್ಥಿಕ ನೆರವಿನೊಂದಿಗೆ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ವಾರದ ಆರು ದಿನಗಳು ಪೌಷ್ಟಿಕ ಆಹಾರ ಮೊಟ್ಟೆ, ಹಾಲು, ರಾಗಿಮಾಲ್ಟ್, ನೀಡಲಾಗುತ್ತಿದೆ. ಅಲ್ಲದೆ ಬಟ್ಟೆ, ಶೂ, ಸಾಕ್ಸ್ ಮತ್ತಿತರ ಸೌಲಭ್ಯಗಳೊಂದಿಗೆ ಶಾಲೆಗೆ ಉಚಿತ ವಿದ್ಯುತ್ ಮತ್ತು ನೀರನ್ನು ಒದಗಿಸಲಾಗುತ್ತಿದೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಆದ್ಯತೆ ನೀಡುವಂತೆ ಮನವಿ ಮಾಡಿದರು.
ಇಂದಿನ ಮಕ್ಕಳು ದೇಶದ ಅತ್ಯಂತ ಉಚ್ಚ ಸ್ಥಾನ ಅಲಂಕರಿಸಿ ಸೇವೆ ನೀಡುವಂತಾಗಬೇಕು. ರಾಜ್ಯದ ಎಲ್ಲಾ ವರ್ಗದ ಜನರಿಗೆ ಮದ್ಯವರ್ತಿಗಳ ನೆರವಿಲ್ಲದೆ ಗ್ಯಾರಂಟಿ ಯೋಜನೆಗಳ ಲಾಭ ದೊರೆಯುತ್ತಿದೆ. ರಾಜ್ಯದ ಪ್ರತಿ ಮನೆಗೂ ಯೋಜನೆಯ ಲಾಭ ದೊರೆತಿದೆ. ಮುಂದಿನ ದಿನಗಳಲ್ಲಿ ಜನರ ಅಶೋತ್ತರಾಗಳಿಗೆ ಪೂರಕವಾಗಿ ಇನ್ನಷ್ಟು ಸೇವೆ ಮಾಡುವ ಉತ್ಸಾಹ ಬಂದಿದೆ ಎಂದರು.
ರಾಜ್ಯದ ಅತಿಹೆಚ್ಚು ಅಂದರೆ 1300 ಕೆರೆಗಳನ್ನು ಹೊಂದಿರುವ ಸೊರಬ ತಾಲೂಕಿನ ಕೆರೆಗಳ ಅಭಿವೃದ್ಧಿಗೆ ನರೇಗಾ ಯೋಜನೆ ಸಂಜೀವಿನಿಯಾಗಿದೆ ಎಂದರು.

ಸಾರ್ವಜನಿಕವಾಗಿರುವ ಎಲ್ಲಾ ಕೆಲಸ ಕಾರ್ಯಗಳನ್ನು ಸರ್ಕಾರವೇ ಮಾಡಲೆಂದು ಅಪೇಕ್ಷಿಸದೆ ತಾವು ಕೂಡ ಸ್ವಯಂ ಪ್ರೇರಿತರಾಗಿ ಕೈಲಾದ ಸೇವೆ ಸಲ್ಲಿಸಲು ಸಿದ್ದರಾಗಬೇಕು. ಎಲ್ಲರಲ್ಲೂ ನಮ್ಮ ಊರು, ನಮ್ಮ ಶಾಲೆ ಎಂಬ ಅಭಿಮಾನವಿರಬೇಕು. ಮಕ್ಕಳ ಭವಿಷ್ಯ ರೂಪಿಸುವುದು ಮಾತ್ರವಲ್ಲ ಸರ್ಕಾರದ ಅಸ್ತಿಯ ರಕ್ಷಣೆಯ ಹೊಣೆಯೂ ನಮ್ಮೆಲ್ಲರದ್ದಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.
ಅವರು ಇಂದು ಸೊರಬ ತಾಲೂಕು ಹುರುಳಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಸರ್ಕಾರಿ ಶಾಲೆಗೆ ನೂತನ ಶಾಲಾ ಕಾಂಪೌAಡ್ ಮತ್ತು ಅಡುಗೆ ಕೋಣೆಯ ಕಾಮಗಾರಿಗಳಿಗೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಯೋಜನೆ ಮತ್ತು ಸಾಂಕಿಕ ಸಚಿವ ಡಿ. ಸುಧಾಕರ್ ಹಾಗೂ ಸ್ಥಳೀಯರೊಂದಿಗೆ ಭಾಗವಹಿಸಿ, ಶಾಲಾ ಕಾಂಪೌAಡ್ ಮತ್ತು ಅಡುಗೆ ಕೋಣೆ ನಿರ್ಮಾಣಕ್ಕೆ ಶ್ರಮದಾನ ಮಾಡಿದ ನಂತರ ಗಿಡನೆಟ್ಟು ಶಂಕುಸ್ಥಾಪನೆ ನೆರವೇರಿಸಿದರು. ನಂತರ ಶಾಲಾ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಸಮಾರಂಭವನ್ನು ಉದ್ಘಾಟಿಸಿದ ಅವರು ಶಾಲಾ ಸ್ವತ್ತು ರಕ್ಷಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ಹಿಂದೆ ಶಾಸಕನಾಗಿದ್ದ ಅವಧಿಯಲ್ಲಿ ನೂತನ ಶಾಲಾ ಕೊಠಡಿಯ ನಿರ್ಮಾಣಕ್ಕೆ ಅಗತ್ಯ ಅನುದಾನ ನೀಡಲಾಗಿತ್ತು. ಪ್ರಸ್ತುತ ಹೆಚ್ಚುವರಿಯಾಗಿ ಎರಡು ಕೊಠಡಿಗಳ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನ ಬಿಡುಗಡೆ ಮಾಡುವುದಾಗಿ ಅವರು ಭರವಸೆ ನೀಡಿದರು.
ದೇಶದ ಉಜ್ವಲ ಭವಿಷ್ಯ ರೂಪಿಸುವ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸುವ ಶಿಕ್ಷಣ ಇಲಾಖೆ ಸಚಿವನಾಗಿ ಕಾರ್ಯನಿರ್ವಹಿಸುತ್ತಿರುವುದು ತೃಪ್ತಿ ತಂದಿದೆ. ಎಲ್ಲರಿಗೂ ಸ್ಫೂರ್ತಿ ದಾಯಕವಾದ ಇಂತಹ ಕಾರ್ಯಕ್ರಮದಲ್ಲಿ ಶ್ರಮದಾನಕ್ಕೆ ಭಾಗಿಯಾದ ತಮಗೆ ಅಭಿನಂದನೆಗಳು ಎಂದರು.
ಅಜೀಮ್ ಪ್ರೇಮ್ ಜಿ ಫೌಂಡೇಶನ್ ಅವರ 1591 ಕೋಟಿ ರೂ. ಗಳ ಆರ್ಥಿಕ ನೆರವಿನೊಂದಿಗೆ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ವಾರದ ಆರು ದಿನಗಳು ಪೌಷ್ಟಿಕ ಆಹಾರ ಮೊಟ್ಟೆ, ಹಾಲು, ರಾಗಿಮಾಲ್ಟ್, ನೀಡಲಾಗುತ್ತಿದೆ. ಅಲ್ಲದೆ ಬಟ್ಟೆ, ಶೂ, ಸಾಕ್ಸ್ ಮತ್ತಿತರ ಸೌಲಭ್ಯಗಳೊಂದಿಗೆ ಶಾಲೆಗೆ ಉಚಿತ ವಿದ್ಯುತ್ ಮತ್ತು ನೀರನ್ನು ಒದಗಿಸಲಾಗುತ್ತಿದೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಆದ್ಯತೆ ನೀಡುವಂತೆ ಮನವಿ ಮಾಡಿದರು.
ಇಂದಿನ ಮಕ್ಕಳು ದೇಶದ ಅತ್ಯಂತ ಉಚ್ಚ ಸ್ಥಾನ ಅಲಂಕರಿಸಿ ಸೇವೆ ನೀಡುವಂತಾಗಬೇಕು. ರಾಜ್ಯದ ಎಲ್ಲಾ ವರ್ಗದ ಜನರಿಗೆ ಮದ್ಯವರ್ತಿಗಳ ನೆರವಿಲ್ಲದೆ ಗ್ಯಾರಂಟಿ ಯೋಜನೆಗಳ ಲಾಭ ದೊರೆಯುತ್ತಿದೆ. ರಾಜ್ಯದ ಪ್ರತಿ ಮನೆಗೂ ಯೋಜನೆಯ ಲಾಭ ದೊರೆತಿದೆ. ಮುಂದಿನ ದಿನಗಳಲ್ಲಿ ಜನರ ಅಶೋತ್ತರಾಗಳಿಗೆ ಪೂರಕವಾಗಿ ಇನ್ನಷ್ಟು ಸೇವೆ ಮಾಡುವ ಉತ್ಸಾಹ ಬಂದಿದೆ ಎಂದರು.
ರಾಜ್ಯದ ಅತಿಹೆಚ್ಚು ಅಂದರೆ 1300 ಕೆರೆಗಳನ್ನು ಹೊಂದಿರುವ ಸೊರಬ ತಾಲೂಕಿನ ಕೆರೆಗಳ ಅಭಿವೃದ್ಧಿಗೆ ನರೇಗಾ ಯೋಜನೆ ಸಂಜೀವಿನಿಯಾಗಿದೆ ಎಂದರು.

  • ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಅವರು ಸರ್ಕಾರದ ಪ್ರತಿನಿಧಿಯಾಗಿ ಸಾರ್ವಜನಿಕ ರೊಡಗೂಡಿ ಕಾಂಪೌAಡ್ ನಿರ್ಮಾಣ ಕಾರ್ಯದಲ್ಲಿ ಶ್ರಮದಾನಕ್ಕೆ ಮುಂದಾಗಿರುವುದು ರಾಜ್ಯಕ್ಕೆ ಮಾದರಿಯಾಗಿದೆ.
  • ಆರ್. ಎಂ. ಮಂಜುನಾಥಗೌಡ, ಅಧ್ಯಕ್ಷರು, ಒಂಆಃ ಶಿವಮೊಗ್ಗ.
  • ಶ್ರಮಿಕ ವರ್ಗಕ್ಕೆ ಬಲ ತುಂಬುವ ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ದೂರದೃಷ್ಟಿಯ ಯೋಜನೆ ನರೇಗಾ ಅತ್ಯದ್ಭುತ ಯೋಜನೆಯಾಗಿದೆ. ಹಲವು ದಶಕಗಳ ನಂತರವು ಯೋಜನೆ ಪ್ರಚಲಿತದಲ್ಲಿರುವುದು ಯೋಜನೆಯ ಮಹತ್ವ ವನ್ನು ಸಾರಿ ಹೇಳುತ್ತದೆ.
  • ಶ್ರೀಮತಿ ಬಲ್ಕಿಶ್ ಬಾನು, ವಿಧಾನ ಪರಿಷತ್ ಸದಸ್ಯರು, ಶಿವಮೊಗ್ಗ .
    ಕಾರ್ಯಕ್ರದಲ್ಲಿ ಉಪಸ್ಥಿತರಿದ್ದ ರಾಜ್ಯ ಯೋಜನೆ ಮತ್ತು ಸಾಂಖಿಕ ಸಚಿವ ಡಿ. ಸುಧಾಕರ್ ಅವರು ಮಾತನಾಡಿ, ರಾಜ್ಯದ ಪ್ರಗತಿಗೆ ಮುಖ್ಯಮಂತ್ರಿ ದೇವರಾಜ ಅರಸು ಅವರ ನಂತರ ಎಸ್. ಬಂಗಾರಪ್ಪ ಅವರು ಮೇಲ್ಪಕ್ತಿಯಲ್ಲಿ ಗುರುತಿಸಲಾಗುತ್ತಿದೆ. ಅವರ ಉಚಿತ ವಿದ್ಯುತ್ ನೀಡುವ ಯೋಜನೆ ಇಂದಿಗೂ ಪ್ರಚಲಿತದಲ್ಲಿದೆ. ದೇವಸ್ಥಾನಕ್ಕಿಂತ ಶಾಲಾ ಕಟ್ಟಡ ನಿರ್ಮಾಣ ಅತ್ಯಂತ ಪುಣ್ಯದ ಕಾರ್ಯ. ಮಕ್ಕಳ ಶಿಕ್ಷಣಕ್ಕೆ ಶ್ರಮಿಸುತ್ತಿರುವ ಸಚಿವ ಮಧು ಅವರು ಅಭಿನಂದನಾರ್ಹರು ಎಂದರು.
    ಕಾರ್ಯಕ್ರಮದಲ್ಲಿ ಹುರುಳಿ ಗ್ರಾ. ಪಂ. ಅಧ್ಯಕ್ಷೆ ಶ್ರೀಮತಿ ಅನಸೂಯ ಶಿವಕುಮಾರ್, ಮುಖಂಡ ಆರ್. ಪ್ರಸನ್ನಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
    “ ಸಚಿವ ಎಸ್. ಮಧು ಬಂಗಾರಪ್ಪ ಅವರೇ ಸ್ವತಃ ಗುದ್ದಲಿ, ಪಿಕಾಸಿ ಹಿಡಿದು, ಗುಂಡಿ ತೆಗೆದು, ಅಕ್ಷರಷಃ ತಲೆಯ ಮೇಲೆ ಮಣ್ಣಿನ ಬುಟ್ಟಿ ಹೊತ್ತು ಶ್ರಮದಾನ ಮಾಡಿದ್ದು, ಎಲ್ಲರಿಗೂ ಪ್ರೇರಣೆಯಾಗಿತ್ತು. ”

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...