World Health Day ವಿಶ್ವ ಆರೋಗ್ಯ ದಿನದ ಅಂಗವಾಗಿ ಮಾಚೇನಹಳ್ಳಿ ಕೈಗಾರಿಕೆಗಳ ಸಂಘ ಮತ್ತು ಶಿವಮೊಗ್ಗದ ಚಂದ್ರಗಿರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ಮಾಚೇನಹಳ್ಳಿ, ನಿಧಿಗೆ ಮತ್ತು ಜೇಡಿಕಟ್ಟೆ ಕೈಗಾರಿಕಾ ಪ್ರದೇಶಗಳಲ್ಲಿರುವ ಕಾರ್ಖಾನೆಗಳ ಸಿಬ್ಬಂದಿಗಳಿಗೆ ಮತ್ತು ಕಾರ್ಮಿಕರಿಗೆ ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಸ್ ರುದ್ರೇಗೌಡರ ಮಾರ್ಗದರ್ಶನದಂತೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಕಾರ್ಖಾನೆಗಳಲ್ಲಿ ತುರ್ತು ಸಂದರ್ಭಗಳಲ್ಲಿ ಕೈಗೊಳ್ಳಬಹುದಾದ ಪ್ರಥಮ ಚಿಕಿತ್ಸಾ ವಿಧಾನಗಳ ಬಗ್ಗೆ ಜಾಗೃತಿ ಶಿಬಿರಗಳನ್ನು ಆಯೋಜಿಸಲಾಗಿತ್ತು.
ಈ ವೇಳೆ ಮಾತನಾಡಿದ ಮಾಚೇನಹಳ್ಳಿ ಕೈಗಾರಿಕಾ ಅಸೋಸಿಯೇಷನ್ ಅಧ್ಯಕ್ಷ ಬೆನಕಪ್ಪ, ಮನುಷ್ಯನಿಗೆ ಆರೋಗ್ಯ ಅತ್ಯಂತ ಅವಶ್ಯಕ. ಹಾಗಾಗಿ ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ಪ್ರಸ್ತುತ ದಿನಮಾನದಲ್ಲಿ ಆರೋಗ್ಯದ ಬಗ್ಗೆ ಎಷ್ಟು ಜಾಗೃತರಾಗಿದ್ದರೂ ಸಾಲದು ಎಂದು ಹೇಳಿದರು.
ಶಿಬಿರದಲ್ಲಿ ಸುಮಾರು 300 ಜನರಿಗೆ ಮಧುಮೇಹ, ರಕ್ತದೊತ್ತಡ, ಇ ಸಿ ಜಿ ಮುಂತಾದ ಆರೋಗ್ಯ ತಪಾಸಣೆಗಳನ್ನು ನಡೆಸಲಾಯಿತು. ಮತ್ತು ಸುಮಾರು 70 ಜನರು ಜಾಗೃತಿ ಶಬಿರದಲ್ಲಿ ಭಾಗವಹಿಸಿದ್ದರು. ಚಂದ್ರಗಿರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಡಾ. ಸಂಗಮೇಶ್ ಮತ್ತು ಡಾ. ಮೇಘಾರವರು ಪ್ರಾತ್ಯಕ್ಷಿಕೆಗಳ ಮೂಲಕ ನೆರೆದವರ ಮನ ಮುಟ್ಟುವಂತೆ ವಿವರಿಸಿದರು.
ಈ ಸಂದರ್ಭದಲ್ಲಿ ಮಾಚೇನಹಳ್ಳಿ ಕೈಗಾರಿಕೆಗಳ ಸಂಘದ ವತಿಯಿಂದ ಚಂದ್ರಗಿರಿ ಆಸ್ಪತ್ರೆಯ ಡಾ. ಸಂಗಮೇಶ್, ಡಾ. ಮೇಘಾ.ವಿ, ಡಾ. ಮೇಘನಾ ಮತ್ತು ಇತರೆ ಸಹಾಯಕ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು.
World Health Day ಮಾಚೇನಹಳ್ಳಿ ಕೈಗಾರಿಕೆಗಳ ಸಂಘದ ಅಧ್ಯಕ್ಷ ಡಿ.ಜಿ.ಬೆನಕಪ್ಪ, ಖಜಾಂಚಿ ದಿನೇಶ್.ಹೆಚ್.ಎಲ್, ನಿರ್ದೇಶಕರುಗಳಾದ ಸೌರಭ್, ಸಂಜಯ್ ಪಾಟೀಲ್, ಸುರೇಂದ್ರ ಮತ್ತು ವಿವಿಧ ಕಾರ್ಖಾನೆಗಳ ಮಾನವ ಸಂಪನ್ಮೂಲ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.