Dr Ambedkar’s birth anniversary celebration ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಏ.14 ರ ಬೆಳಗ್ಗೆ 11.00ಕ್ಕೆ ನಗರದ ಡಾ|| ಬಿ.ಆರ್. ಅಂಬೇಡ್ಕರ್ ಭವನ, ಗಾಂಧಿ ಪಾರ್ಕ್ ಹತ್ತಿರ ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ|| ಬಿ.ಆರ್ ಅಂಬೇಡ್ಕರ್‌ರವರ 134ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರ ಉಪಸ್ಥಿತಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಹೆಚ್.ಸಿ.ಮಹಾದೇವಪ್ಪ, ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಭದ್ರಾವತಿ ಕ್ಷೇತ್ರ ಶಾಸಕ ಬಿ.ಕೆ.ಸಂಗಮೇಶ್ವರ ಮತ್ತು ಕರ್ನಾಟಕ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷರು ಹಾಗೂ ಸಾಗರ ಕ್ಷೇತ್ರ ಶಾಸಕ ಬೇಳೂರು ಗೋಪಾಲಕೃಷ್ಣ ಇರವರುಗಳು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.
ಶಾಸಕ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಇನ್ನಿತರ ಗಣ್ಯರು, ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
Dr Ambedkar’s birth anniversary celebration ಅಂದು ಬೆಳಗ್ಗೆ 8.30ಕ್ಕೆ ಮಹಾನಗರ ಪಾಲಿಕೆಯ ಆವರಣದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಪುಷ್ಪಾರ್ಜನೆ ಹಾಗೂ ಬೆಳಗ್ಗೆ 9.00 ಕ್ಕೆ ಸೈನ್ಸ್ ಮೈದಾನದಿಂದ ಡಾ|| ಬಿ.ಆರ್. ಅಂಬೇಡ್ಕರ್ ಭವನದವರೆಗೆ ಡಾ|| ಬಿ.ಆರ್. ಅಂಬೇಡ್ಕರ್‌ರವರ ಭಾವಚಿತ್ರ ಮೆರವಣಿಗೆ ಆಯೋಜಿಸಲಾಗಿದೆ.
ಶಿವಮೊಗ್ಗ ಸಹ್ಯಾದ್ರಿ ಕಲಾ ಕಾಲೇಜಿನ ಭಾಷಾಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು ಆಗಿರುವ ಪ್ರೊ ಮೇಟಿ ಮಲ್ಲಿಕಾರ್ಜುನರವರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ