Saturday, June 21, 2025
Saturday, June 21, 2025

CM Siddaramaiah ಎಂಟು ಗಣಿ ಕಂಪೆನಿಗಳ ಕುರಿತ ಮಾಧ್ಯಮ ವರದಿಗಳ ‌ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಏನು ಹೇಳ್ತಾರೆ?

Date:

CM Siddaramaiah ಇಂದು ಮಾಧ್ಯಮಗಳಲ್ಲಿ 8 ಗಣಿ ಕಂಪೆನಿಗಳ ಕುರಿತಾಗಿ ಪ್ರಕಟಗೊಂಡ ಸುದ್ದಿ ಗಮನಿಸಿದೆ. ಈ ಬಗ್ಗೆ ಕೆಲವು ಸ್ಪಷ್ಟನೆ ನೀಡಬಯಸಿದ್ದೇನೆ.

ಗಣಿ ಗುತ್ತಿಗೆ ನವೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ.
ಇಂತಹ ಅಪ ಪ್ರಚಾರಗಳು ನಾನು ಅಧಿಕಾರಕ್ಕೆ ಬಂದಾಗಿನಿಂದಲೂ ನಡೆದುಕೊಂಡು ಬರುತ್ತಿದೆ. ಕೆಲವು ದುಷ್ಟಶಕ್ತಿಗಳು ರಾಜಭವನವನ್ನು ತಪ್ಪು ದಾರಿಗೆಳೆಯುವ ಕೆಲಸವನ್ನು ನಿರಂತರವಾಗಿ ಮಾಡುತ್ತಿವೆ.

2015 ಕ್ಕಿಂತ ಮೊದಲು ಅಸ್ತಿತ್ವದಲ್ಲಿದ್ದ ಎಂಎಂಡಿಆರ್‌-1957 ಕಾಯ್ದೆಯಲ್ಲಿ ನವೀಕರಣವು 20 ವರ್ಷಗಳ ಅವಧಿಗೆ ಅನ್ವಯವಾಗುತ್ತಿತ್ತು. ಅದರ ಪ್ರಕಾರ ಸರ್ಕಾರವು “ಗಣಿ ಗುತ್ತಿಗೆಯ ನವೀಕರಣಕ್ಕೆ ಫಾರೆಸ್ಟ್‌ ಕ್ಲಿಯರೆನ್ಸ್‌ನ್ನು ಪಡೆದುಕೊಳ್ಳುವ ಸಲುವಾಗಿ ಮಾತ್ರ ಷರತ್ತುಬದ್ಧ ತಾತ್ವಿಕ ಅನುಮೋದನೆ ನೀಡಲಾಗಿದೆ.”  

ದಿನಾಂಕ: 12.01.2015 ರಂದು ಕೇಂದ್ರ ಸರ್ಕಾರವು ಎಂಎಂಡಿಆರ್‌ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿಯನ್ನು ತಂದ ಕಾರಣ ವಿವಿಧ ಹಂತದ ಪರಿಶೀಲನೆಗಳನ್ನು ನಡೆಸಿ, ದಿನಾಂಕ: 09.02.2015 ರಂದು ಗಣಿ ಗುತ್ತಿಗೆ ನವೀಕರಣಕ್ಕಾಗಿ ನೀಡಿದ್ದ ಷರತ್ತುಬದ್ಧ 8 ಕಂಪನಿಗಳ ತಾತ್ವಿಕ ಅನುಮತಿ ಪತ್ರಗಳು ಊರ್ಜಿತವಲ್ಲ ಎಂದು ತೀರ್ಮಾನಿಕಸಿ ಅವುಗಳನ್ನು ರದ್ದುಪಡಿಸಿ ತಿದ್ದುಪಡಿ ಕಾಯ್ದೆಯಂತೆ ಕ್ರಮವಹಿಸಲು ಸೂಚಿಸಲಾಯಿತು.

ನಂತರ, ಗಣಿ ಇಲಾಖೆಯು ಸಲ್ಲಿಸಿದ ಡೀಮ್ಡ್‌ ಅವಧಿ ವಿಸ್ತರಣೆ ಪ್ರಸ್ತಾವನೆಗಳನ್ನು  ನಿಯಮಾನುಸಾರ ಪರಿಶೀಲಿಸಿ ರಾಜ್ಯ ಸರ್ಕಾರವು ಒಂದು ಪ್ರಕರಣವನ್ನು ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಡೀಮ್ಡ್‌ ಅವಧಿ ವಿಸ್ತರಣೆಗೆ ಪರಿಗಣಿಸದೆ ರದ್ದುಪಡಿಸಲಾಗಿದೆ. ಉಳಿದ 7 ಪ್ರಕರಣಗಳಿಗೆ ಶಾಸನಬದ್ಧವಾದ ಅರಣ್ಯ, ಪರಿಸರ ಮುಂತಾದ ತೀರುವಳಿ ಪತ್ರಗಳನ್ನು ಹಾಜರುಪಡಿಸುವ, ಬೇಬಾಕಿ ಪತ್ರ ಸಲ್ಲಿಸುವ ಹಾಗೂ ಸಿಬಿಐ, ಎಸ್‌ಐಟಿ ಸೇರಿದಂತೆ ವಿವಿಧ ಸಂಸ್ಥೆಗಳ ತನಿಖೆಯ ಅಂತಿಮ ವರದಿಯನ್ನು ಆಧರಿಸಿ ಸರ್ಕಾರದ ಕ್ರಮಕ್ಕೆ ಬದ್ಧರಾಗಲು ಷರತ್ತು ವಿಧಿಸಿ ಡೀಮ್ಡ್‌ ಅವಧಿ ವಿಸ್ತರಣೆ ಪತ್ರ ನೀಡಲಾಗಿದೆ.

CM Siddaramaiah ಆದರೆ, ಈ 7 ಕಂಪನಿಗಳ ಪೈಕಿ 2 ಕಂಪನಿಗಳು ಶಾಸನಬದ್ಧವಾದ ತೀರುವಳಿಗಳನ್ನು ಸಲ್ಲಿಸದ ಕಾರಣ, ಯಾವುದೇ ಗಣಿಗಾರಿಕೆ ಹಕ್ಕುಗಳನ್ನು ನೀಡಿರುವುದಿಲ್ಲ.  ಉಳಿದ 5 ಪ್ರಕರಣಗಳಲ್ಲಿ 3 ಪ್ರಕರಣಗಳನ್ನು ಬಿಜೆಪಿ ಆಡಳಿತದ ಅವಧಿಯಲ್ಲಿ ಅಂದರೆ 2020 ಹಾಗೂ 2021 ರಲ್ಲಿ ಗಣಿ ಗುತ್ತಿಗೆ ಹಕ್ಕನ್ನು ನೀಡಲಾಗಿದೆ. ಉಳಿದ ಎರಡು ಪ್ರಕರಣಗಳನ್ನು 2016 ಮತ್ತು 2018 ರಲ್ಲಿ ಪೂರಕ ಕರಾರು ಪತ್ರದ ಮುಖಾಂತರ ಷರತ್ತುಬದ್ಧ ಡೀಮ್ಡ್‌ ವಿಸ್ತರಣೆಯ ಗಣಿ ಗುತ್ತಿಗೆ ಹಕ್ಕನ್ನು ನೀಡಲಾಗಿದೆ.

ಹಾಗಾಗಿ, ಈ ಎಲ್ಲಾ 8 ಪ್ರಕರಣಗಳಲ್ಲಿ ಸರ್ಕಾರಕ್ಕೆ ನಯಾಪೈಸೆಯಷ್ಟೂ ನಷ್ಟವಾಗಲಿಲ್ಲ. ಈ ಅವಧಿಯಲ್ಲಿ ಒಂದು ಹಿಡಿಯಷ್ಟೂ ಅದಿರು ತೆಗೆದಿಲ್ಲ.

ಈ ಕುರಿತಂತೆ ಈ ಹಿಂದೆ ಕೂಡ ವಿರೋಧ ಪಕ್ಷಗಳವರು ಹಾಗೂ ಕೆಲವು ವ್ಯಕ್ತಿಗಳು ಹಲವು ಸಂಸ್ಥೆಗಳಲ್ಲಿ ಪ್ರಕರಣಗಳನ್ನು ದಾಖಲಿಸಿದ್ದರು. ಈ ದೂರುಗಳಲ್ಲಿ ಯಾವುದೇ ಹುರುಳಿಲ್ಲವೆಂದು ದೂರುಗಳನ್ನು ಮುಕ್ತಾಯಗೊಳಿಸಲಾಗಿದೆ.

ವಿರೋಧ ಪಕ್ಷಗಳವರು ಸದರಿ ವಿಚಾರವನ್ನು ಸದನದಲ್ಲೂ ಪ್ರಶ್ನಿಸಿದ್ದರು. ಈಗಿನ ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಮಂತ್ರಿಯಾಗಿರುವ ಕುಮಾರಸ್ವಾಮಿಯವರು ದಿನಾಂಕ: 14.01.2018 ರಂದು ಪತ್ರಿಕಾ ಗೋಷ್ಠಿಯನ್ನೂ ಮಾಡಿದರು.

ಆದರೆ, ಈ ಯಾವುದೇ ಪ್ರಕರಣಗಳಲ್ಲಿ ಹುರುಳೆ ಇರಲಿಲ್ಲ. ಏಕೆಂದರೆ, ಈ ಎಲ್ಲಾ 8 ಪ್ರಕರಣಗಳನ್ನು ಹೊಸ ಸುಗ್ರೀವಾಜ್ಞೆಯ ನಿಯಮಾವಳಿಗಳಿಗೆ ಅನುಗುಣವಾಗಿ ಕ್ರಮವಹಿಸಲಾಗಿದೆ. ಅವಧಿ ಮುಗಿದ ಗಣಿ ಗುತ್ತಿಗೆಗಳನ್ನು ನಂತರ ನಿಯಮಾನುಸಾರ ಹರಾಜಿಗೆ ಒಳಪಡಿಸಿ ವಿಲೇ ಮಾಡಲಾಗಿದೆ.

ಸುಮಾರು 10 ವರ್ಷಗಳ ನಂತರ ಈ ಪ್ರಕರಣವನ್ನು ರಾಜಕೀಯ ದುರುದ್ದೇಶದಿಂದ ಜಗಿಯಲು ಪ್ರಾರಂಭಿಸಿದ್ದಾರೆ.

ಹುರುಳಿಲ್ಲದ ವಿಷಯಕ್ಕೆ ವಿಷ ತುಂಬಿ ನಾಡಿನ ಜನರ ಮೆದುಳನ್ನು ಕಲುಷಿತಗೊಳಿಸಲು ಹೊರಟಿರುವ ದುಷ್ಟ ರಾಜಕೀಯ ಪಿತೂರಿಗಳನ್ನು ನಾಡಿನ ಪ್ರಜ್ಞಾವಂತ ಜನ ನಂಬಬಾರದು ಎಂದು ಮನವಿ ಮಾಡುತ್ತೇನೆ ಎಂದು ಸಾಮಾಜಿಕ ಜಾಲತಾಣ X ಖಾತೆಯಲ್ಲಿ ತಮ್ಮ ಅಭಿಪ್ರಾಯವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಂಚಿಕೊಂಡಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಕ್ಕಳಿಗೆ ಜಾನಪದದ ಅರಿವು ಮೂಡಿಸುವುದು ಅವಶ್ಯ: ಕವಿತಾ ಸುಧೀಂದ್ರ

ಮಕ್ಕಳಲ್ಲಿ ಬಾಲ್ಯದಿಂದಲೇ ಜಾನಪದ ಸಂಸ್ಕೃತಿಯ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದು...

Shivamogga District Minority Welfare Department ವಿದ್ಯಾರ್ಥಿನಿಲಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ

Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ...

ರಾಜ್ಯ ಮಟ್ಟದ ಅಂಬೆಗಾಲು – 6 ಕಿರು ಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಶಿವಮೊಗ್ಗ ನಗರದ ಸಿನಿಮೊಗೆ - ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ...