S N Channabasappa ಅಂಬೇಡ್ಕರ್ ಅವರ ಜೀವನದ ಆದರ್ಶಗಳು ಮತ್ತು ಸಮಾಜ ಪರಿವರ್ತನೆಗೆ ಅವರು ನೀಡಿದ ಅಮೂಲ್ಯ ಕೊಡುಗೆಗಳ ಎಂದಿಗೂ ಅಜರಾಮರ!
ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಅಂಗವಾಗಿ ಇಂದು ಶಿವಮೊಗ್ಗ ನಗರದ ಬಾಪೂಜಿನಗರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಉದ್ಯಾನವನದಲ್ಲಿ ನಡೆದ ಭಾವಪೂರ್ಣ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಭಾಗವಹಿಸಿ, ಮಾತನಾಡಿದರು.
S N Channabasappa ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ, ಹಲವಾರು ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಸರ್ಕಾರಿ ಶಾಲೆಯ ಶಿಕ್ಷಕರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಇದರೊಂದಿಗೆ, ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂಧರ್ಭದಲ್ಲಿ ಸ್ಥಳೀಯರು, ವಿದ್ಯಾರ್ಥಿಗಳು ಹಾಗೂ ಸಮಾಜ ಸೇವಕರು ಉಪಸ್ಥಿತರಿದ್ದರು.
