2nd PUC Exam Result 2025 ಶಿವಮೊಗ್ಗ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ ಗುರುಪುರದ ಬಿಜಿಎಸ್ ಗುರುಕುಲ ಮಾದರಿಯ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಗ್ರಾಮೀಣ ಭಾಗದ ಹೆಚ್ಚು ಮಕ್ಕಳನ್ನು ಹೊಂದಿರುವ ಈ ಕಾಲೇಜು ವಿದ್ಯಾರ್ಥಿಗಳು ಈ ಬಾರಿ ದ್ವಿತೀಯ ಪಿಯುಸಿ ಯಲ್ಲಿ ಅತ್ಯುನ್ನತ ಫಲಿತಾಂಶವನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ: 114 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 25 ಉನ್ನತ ಶ್ರೇಣಿ, 86 ಪ್ರಥಮ ಶ್ರೇಣಿ, ಎರಡು ದ್ವಿತೀಯ ಶ್ರೇಣಿ ಪಡೆದಿದ್ದು, ವಾಣಿಜ್ಯ ವಿಭಾಗದಲ್ಲಿ: 45 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 08 ಉನ್ನತ ಶ್ರೇಣಿ ಹಾಗು 35 ಪ್ರಥಮ ಶ್ರೇಣಿ ಯಲ್ಲಿ, ಒಂದು ದ್ವಿತೀಯ ಶ್ರೇಣಿಯಲ್ಲಿ ಲಭಿಸಿದೆ.
ವಿಜ್ಞಾನ ವಿಭಾಗದಲ್ಲಿ ತ್ರಿವೇಣಿ ವೈ. 600 ಕ್ಕೆ 579 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದರೆ, ಲಿಖಿತ್ ಕೆ. ಜಿ.570 ಅಂಕಗಳಿಸುವ ಮೂಲಕ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಸೃಷ್ಟಿ, ಯುಕ್ತ, ಸುಪರ್ಣ, ಚಂದ್ರಮ್ಮ ವಿಜ್ಞಾನ ವಿಭಾಗದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
2nd PUC Exam Result 2025 ವಾಣಿಜ್ಯ ವಿಭಾಗದಲ್ಲಿ ವಿಷ್ಮಯಎಂ. 600 ಕ್ಕೆ 557 ಅಂಕ ಪಡೆದುಕೊಂಡು ಕಾಲೇಜಿಗೆ ಪ್ರಥಮಳಾಗಿದ್ದಾಳೆ,ನಿತ್ಯಶ್ರೀ 555 ಅಂಕಗಳಿಸಿದ್ದಾರೆ.
ವಿದ್ಯಾರ್ಥಿಗಳ ಸಾಧನೆಯನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹಾಗೂ ಪೂಜ್ಯ ಶ್ರೀ ಸಾಯಿನಾಥ ಸ್ವಾಮೀಜಿ, ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರಾದ ಸುರೇಶ್ ಎಸ್. ಹೆಚ್., ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ
2nd PUC Exam Result 2025 ಗುರುಪುರ ಬಿಜಿಎಸ್ ಪಿಯು ಕಾಲೇಜಿಗೆ ಶೇ.99.1 ಫಲಿತಾಂಶ.
Date: