Rotary Club Shimoga ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರು ಸಮಾನತೆಯ ಹರಿಕಾರ. ದೇಶದ ಮೊದಲ ಕಾನೂನಿನ ಸಚಿವರು, ಭಾರತ ದೇಶ ಕಂಡ ಮಹಾನ್ ವ್ಯಕ್ತಿ. ಸಂವಿಧಾನ ರಚನೆಯ ಕರಡು ಸಮಿತಿಯ ಅಧ್ಯಕ್ಷರಾಗಿದ್ದರು ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಕಿರಣ್ ಕುಮಾರ್ ಜಿ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತದ ಬೃಹತ್ ಸಂವಿಧಾನಕ್ಕೆ ಇವರ ಕೊಡುಗೆ ಅಪಾರ ಹಾಗೂ ಇವರು ಅದ್ಭುತ ಸಂದೇಶ ನೀಡಿದ್ದಾರೆ. ಇತಿಹಾಸವನ್ನು ಮರೆತವರು ಇತಿಹಾಸ ನಿರ್ಮಿಸಲಾರರು, ಬದುಕು ಸುದೀರ್ಘವಾಗಿರುವುದಕ್ಕಿಂತ ಶ್ರೇಷ್ಠವಾಗಿರಬೇಕು. ವಿದ್ಯಾವಂತರಾಗಿ ಸಂಘಟಿತರಾಗಿ, ಜ್ಞಾನವು ಪ್ರತಿಯೊಬ್ಬ ವ್ಯಕ್ತಿಯ ಜೀವನಕ್ಕೆ ಆಧಾರವಾಗಿದೆ. ಡಾ. ಬಿ.ಆರ್.ಅಂಬೇಡ್ಕರ್ ಅವರು ಭಾರತದ ಇತಿಹಾಸದಲ್ಲಿ ಸ್ಮರಣೀಯ ವ್ಯಕ್ತಿ. ಭಾರತೀಯ ಸಮಾಜಕ್ಕೆ ಅವರ ಕೊಡುಗೆ ಅಪಾರ. ಏ.14ರಂದು ಅವರ ಜಯಂತಿ ಆಚರಣೆ ದೇಶಾದ್ಯಂತ ಆಚರಿಸಲಾಗುತ್ತದೆ. ಅಂಬೇಡ್ಕರ್ ಅವರು ಸಮಾಜ ಸುಧಾರಕರಾಗಿದ್ದರು. ನ್ಯಾಯಶಾಸ್ತ್ರಜ್ಞ ಹಾಗೂ ಅರ್ಥಶಾಸ್ತ್ರಜ್ಞರಾಗಿದ್ದರು ಎಂದರು.
Rotary Club Shimoga ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಕಾರ್ಯದರ್ಶಿ ಈಶ್ವರ್, ಪಿಡಿಜಿ ಎನ್.ಪ್ರಕಾಶ್, ಮಾಜಿ ಸಹಾಯಕ ಗವರ್ನರ್ ರವಿ ಕೋಟೋಜಿ, ಚುಡಾಮಣಿ ಪವಾರ್, ಆನಂದ್, ಗುರುರಾಜ್, ಧರ್ಮೇಂದ್ರ ಸಿಂಗ್, ಬಸವರಾಜ್, ರಮೇಶ್, ಸಂತೋಷ್, ಜಯಶೀಲ ಶೆಟ್ಟಿ, ವಿನುತಾ ಅಶ್ವಿನ್, ಭರತ್, ಧನಂಜಯ್, ಜಗದೀಶ್ ಮೋಹನ್ ಉಪಸ್ಥಿತರಿದ್ದರು.
Rotary Club Shimoga ಡಾ.ಅಂಬೇಡ್ಕರ್ ಭಾರತದ ಇತಿಹಾಸದಲ್ಲಿ ಸ್ಮರಣೀಯ ವ್ಯಕ್ತಿ- ಜಿ ಕಿರಣ್ ಕುಮಾರ್
Date:
