Monday, April 21, 2025
Monday, April 21, 2025

Rotary Shimoga ಶರಾವತಿ ನದಿ ನೀರನ್ನು ಬೆಂಗಳೂರಿಗೆ ಒಯ್ಯುವ ಹುನ್ನಾರ ನಡೆಯುತ್ತಿದೆ – ಪ್ರೊ.ಬಿ.ಎಂ.ಕುಮಾರ ಸ್ವಾಮಿ

Date:

Rotary Shimoga ನಗರೀಕರಣದ ಹೆಸರಿನಲ್ಲಿ ಹೊಸ ಹೊಸ ಕೈಗಾರಿಕೆ ಮತ್ತು ಅಭಿವೃದ್ಧಿಯ ಹೆಸರಿನಲ್ಲಿ ಅರಣ್ಯ ಹಾಗೂ ಪರಿಸರ ನಾಶವಾಗುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಮನುಕುಲಕ್ಕೆ ನಷ್ಟವಾಗಲಿದೆ ಎಂದು ಪರಿಸರವಾದಿ ಪ್ರೊ. ಬಿ.ಎಂ.ಕುಮಾರಸ್ವಾಮಿ ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪರಿಸರದ ಕುರಿತು ಮಾತನಾಡಿ, ಅರಣ್ಯ ನಾಶದಿಂದ ಮಣ್ಣಿನ ಸವಕಳಿ ಹಾಗೂ ಗ್ಲೋಬಲ್ ವಾರ್ಮಿಂಗ್, ಭೂಕುಸಿತದಿಂದ ಪರಿಸರ ನಾಶವಾಗುತ್ತಿದೆ. ಮರಗಿಡಗಳ ಸಂಕ್ಷಣೆ ಇಲ್ಲದೆ ವಾಯುಮಾಲಿನ್ಯ ಹೆಚ್ಚುತ್ತಿದೆ. ಪ್ಲಾಸ್ಟಿಕ್ ಬಳಕೆ ಹೆಚ್ಚಾಗುತ್ತಿದೆ. ಶುದ್ಧವಾದ ಗಾಳಿ ಸಿಗುತ್ತಿಲ್ಲ ಎಂದು ತಿಳಿಸಿದರು.

ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಹುನ್ನಾರ ನಡೆಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಅರಣ್ಯ ನಾಶ ಹೆಚ್ಚಾಗಿರುವುದರಿಂದ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರುತ್ತಿವೆ. ಕಾಡಿನಲ್ಲಿ ಆಹಾರ ಸಿಗದ ಕಾರಣ ಊರುಗಳಿಗೆ ನುಗ್ಗುತ್ತಿರುವುದರಿಂದ ತೊಂದರೆ ಉಂಟಾಗುತ್ತಿದೆ.

ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾಡನ್ನು ಬೆಳೆಸಿ ನಾಡನ್ನು ಉಳಿಸಬೇಕು ಎಂದರು.

ಪ್ರತಿಯೊಬ್ಬರೂ ಬಡಾವಣೆಗಳಲ್ಲಿ ಸಸಿಗಳನ್ನು ನೆಟ್ಟು ಪೋಷಣೆ ಮಾಡಬೇಕು. ಮುಂದಿನ ಪೀಳಿಗೆಗೆ ಒಳ್ಳೆಯ ಪರಿಸರ ನಿರ್ಮಿಸಬೇಕು ಎಂದು ಸಲಹೆ ನೀಡಿದರು.

ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು. ರೋಟರಿ ಸದಸ್ಯರೊಂದಿಗೆ ಸಂವಾದ ನಡೆಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಅರುಣ್ ದೀಕ್ಷಿತ್ ಮಾತನಾಡಿ, ರೋಟರಿ ಸಂಸ್ಥೆ ನಿರಂತರವಾಗಿ ಪರಿಸರ ಸಂರಕ್ಷಣೆ ಕಾರ್ಯಗಳನ್ನು ಮಾಡುತ್ತಿದೆ. ಪರಿಸರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಉತ್ತಮ ಪರಿಸರದಿಂದ ಉತ್ತಮ ಆರೋಗ್ಯ ನಮ್ಮದಾಗುತ್ತದೆ ಎಂದು ತಿಳಿಸಿದರು.

Rotary Shimoga ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಶಶಿಕಾಂತ್ ನಾಡಿಗ್, ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಚಂದ್ರಹಾಸ ಪಿ.ರಾಯ್ಕರ್, ಎನ್.ಎಚ್.ಶ್ರೀಕಾಂತ್, ಎಸ್.ಸಿ.ರಾಮಚಂದ್ರ, ಎ.ಒ.ಮಹೇಶ್, ಎಸ್.ಗಣೇಶ್, ನಾಗವೇಣಿ, ಇನ್ನರ್‌ವ್ಹೀಲ್ ಮಾಜಿ ಅಧ್ಯಕ್ಷೆ ಬಿಂದು ವಿಜಯಕುಮಾರ್, ಮಂಜುನಾಥ್, ಕೆ.ಜಿ.ರಾಮಚಂದ್ರರಾವ್, ದಿನಕರ್, ರೋಟರಿ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Chidambara Mahaswami ಗುಬ್ಬಿ ಚಿದಂಬರಾಶ್ರಮದಲ್ಲಿಎಲೆಕ್ಟ್ರಿಷಿಯನ್ ವೃತ್ತಿ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Sri Chidambara Mahaswami ಶ್ರೀ ಶ್ರೀ ಚಿದಂಬರ ಮಹಾಸ್ವಾಮಿಗಳು ಶ್ರೀ ಚಿದಂಬರಾಶ್ರಮವನ್ನು...

CM Siddharamaih ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವ ಕಾರ್ಯ ನಡೆಯುತ್ತಿದೆ- ಸಿದ್ಧರಾಮಯ್ಯ

CM Siddharamaih ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ.ಈಗಾಗಲೇ...

DC Shivamogga ಪರೀಕ್ಷಾರ್ಥಿಯ ಜನಿವಾರ ತೆಗೆಸಿದ ಪ್ರಕರಣ, ಈರ್ವರು ಗೃಹ ರಕ್ಷಕ ದಳ ಸಿಬ್ಬಂದಿ ಅಮಾನತು-ಗುರುದತ್ತ‌ ಹೆಗಡೆ

DC Shivamogga ಶಿವಮೊಗ್ಗ ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ...

Mental health ಮಾನಸಿಕ ಸಮಸ್ಯೆಗಳು‌‌ ಮತ್ತು‌ ಸೂಕ್ತ ಪರಿಹಾರಗಳು ...

Mental health ಮಾನಸಿಕ ಖಾಯಿಲೆಗಳು ಯಾರಿಗಾದರೂ ಬರಬಹುದು : ಸೂಕ್ತ...