S.N. Chennabasappa ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ವಾರ್ಡ್ ನಂ. 33ರ ಕುರುಬರ ಪಾಳ್ಯ ಪ್ರದೇಶಕ್ಕೆ ಮಹಾನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಸ್ಥಳೀಯ ನಿವಾಸಿಗಳ ಬೇಡಿಕೆಗಳು ಹಾಗೂ ಸಮಸ್ಯೆಗಳ ಕುರಿತು ನಿಕಟವಾಗಿ ಮಾಹಿತಿ ಸಂಗ್ರಹಿಸಿದರು.
ಈ ವೇಳೆ ಬಡಾವಣೆಯ ಯುಜಿಡಿ ವ್ಯವಸ್ಥೆ ಹಾಗೂ ರಸ್ತೆಗಳ ದುರಸ್ಥಿಗೆ ಸಂಬಂಧಿಸಿದ ಹಲವು ಪ್ರಮುಖ ಅಂಶಗಳನ್ನು ನಿವಾಸಿಗಳು ತಿಳಿಸಿದ್ದು, ತಕ್ಷಣದ ಕ್ರಮಗಳೊಂದಿಗೆ ಈ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಸೂಚನೆಗಳನ್ನು ನೀಡಿದರು.
S.N. Chennabasappa ಈ ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳು,ವಾರ್ಡಿನ ಪ್ರಮುಖರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.