Chamber Of commerce Shivamogga ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತ ಸಾಧಕ ಪತ್ರಕರ್ತರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು.
ಜೀವಮಾನ ಸಾಧನೆಗಾಗಿ ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ಪಿ.ಲಂಕೇಶ್ ಪ್ರಶಸ್ತಿಯನ್ನು ಕನ್ನಡಪ್ರಭ ಪ್ರಧಾನ ವರದಿಗಾರ ಗೋಪಾಲ್ ಯಡಗೆರೆ, ಶಿವಮೊಗ್ಗ ಟೈಮ್ಸ್ ಸಂಪಾದಕ ಎಸ್.ಚಂದ್ರಕಾಂತ್, ಸಂಯುಕ್ತ ಕರ್ನಾಟಕದ ಪತ್ರಕರ್ತ ಕೆ.ತಿಮ್ಮಪ್ಪ ಅವರಿಗೆ ನೀಡಿ ಅಭಿನಂದಿಸಲಾಯಿತು.
ನೆಲದ ಧ್ವನಿ ಡಿಜಿಟಲ್ ಮೀಡಿಯಾ ಸಂಪಾದಕ ಶಿವಾನಂದ ಕರ್ಕಿ ಹಾಗೂ ಸೊರಬ ಕನ್ನಡಪ್ರಭ ವರದಿಗಾರ ಎಚ್.ಕೆ.ಎಸ್.ಸ್ವಾಮಿ ಅವರಿಗೆ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಕ್ರಿಯಾಶೀಲ ಪತ್ರಕರ್ತ ಪ್ರಶಸ್ತಿ ನೀಡಿ ಗೌರವಿಸಿತು.
ಐವರು ಪ್ರಶಸ್ತಿ ಪುರಸ್ಕೃತರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ನೇತೃತ್ವದಲ್ಲಿ ಅಭಿನಂದಿಸಲಾಯಿತು.
Chamber Of commerce Shivamogga ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್, ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಚಿನ್ನ ಬೆಳ್ಳಿ ವರ್ತಕರ ಸಂಘದ ಅಧ್ಯಕ್ಷ ವಿ.ಕೆ.ಜೈನ್, ಮಾಚೇನಹಳ್ಳಿ ಕೈಗಾರಿಕಾ ಸಂಘದ ಅಧ್ಯಕ್ಷ ಜಿ.ಬೆನಕಪ್ಪ, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಹಾಜರಿದ್ದರು.