Department of Social Welfare ಸಮಾಜ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ 6ನೇ ತರಗತಿಯ 35 ಸ್ಥಾನಗಳಿಗೆ ದಾಖಲಿಸಿಕೊಳ್ಳಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಅಂತರ್ಜಾಲ ತಾಣ htpps://swd.karnataka.gov.in ರಲ್ಲಿ ಅರ್ಜಿ ಸಲ್ಲಿಸಿ, ಅರ್ಜಿ ಹಾಗೂ ದಾಖಲೆಗಳನ್ನು ಉಪನಿರ್ದೇಶಕರು ಹಾಗೂ ಎಲ್ಲಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಮೇ 03 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
Department of Social Welfare ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ದೂ.ಸಂ.: 08182-249241 ನ್ನು ಹಾಗೂ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸುವುದು.