Madhu Bangarappa ನಾಗರೀಕರ ಅಹವಾಲುಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರ ನೇತೃತ್ವದಲ್ಲಿ ಏ.21 ರಂದು ಹೊಸನಗರದ ಈಡಿಗರ ಸಭಾ ಭವನದಲ್ಲಿ ಬೆಳಿಗ್ಗೆ 9.30 ರಿಂದ ಜಿಲ್ಲಾ ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಂಬಂಧಿಸಿದ ಅಧಿಕಾರಿಗಳು ಹಾಜರಿರುವುದರಿಂದ ಜಿಲ್ಲೆಯ ಎಲ್ಲಾ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು.
Madhu Bangarappa ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ಅಹವಾಲನ್ನು ತಾವೊಬ್ಬರೇ ಸಲ್ಲಿಸಬಹುದಾಗಿದೆ. ಸಾರ್ವಜನಿಕವಾಗಿ ಅಹವಾಲು ಸಲ್ಲಿಸುವವರು ಗರಿಷ್ಟ ಇಬ್ಬರಿಗೆ ಅವಕಾಶವನ್ನು ನೀಡಲಾಗುವುದು ಹಾಗೂ ಅರ್ಜಿ ನೋಂದಾಯಿಸಿದ ನಂತರ ಟೋಕನ್‌ಗಳನ್ನು ಪಡೆಯತಕ್ಕದ್ದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.