Madhu Bangarappa ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರವನ್ನು ತೆಗೆಸಿದ ಘಟನೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಶಾಲಾಶಿಕ್ಷಣ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
Madhu Bangarappa ಮಾಧ್ಯಮ ವರದಿಗಳಲ್ಲಿ ನಾವು ಗಮನಿಸಿದಂತೆ, ಅಂತಹ ನಿರ್ದೇಶನಗಳನ್ನು ನೀಡಲು ಯಾವುದೇ ಕಾನೂನಿನಲ್ಲಿ ಅವಕಾಶ ಇಲ್ಲ ಮತ್ತು ಈ ಕ್ರಮವನ್ನು ಅನುಮತಿಸುವ ಕಾನೂನಿನಡಿಯಲ್ಲಿ ಯಾವುದೇ ನಿಯಮಗಳಿಲ್ಲ ಎಂದು ಸಚಿವರು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ನೀಡಿದ್ದಾರೆ.
ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣ ಖಂಡನೀಯ- ಸಚಿವ ಮಧು ಬಂಗಾರಪ್ಪ