Dr. Raj Kumar ವರನಟ ಡಾ ರಾಜ್ ಕುಮಾರ್ ರವರ ಜನ್ಮದಿನಾಚರಣೆ ಅಂಗವಾಗಿ ಏಪ್ರಿಲ್ 24 ರಂದು ಸಂಜೆ 6.00 ಗಂಟೆಗೆ ಸರಿಯಾಗಿ ನಗರದ ಕುವೆಂಪು ರಂಗಮಂದಿರದಲ್ಲಿ ಚಿತ್ರನಟ ಡಾ ರಾಜ್ ಕುಮಾರ್ ಅಭಿನಯದ ಚಲನಚಿತ್ರಗಳ ಗೀತೆಗಳನ್ನಾಧರಿಸಿದ ಗೀತಗಾಯನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಪ್ರೆಸ್ ಟ್ರಸ್ಟ್, ಕಾರ್ಯನಿರತ ಪತ್ರಕರ್ತರ ಸಂಘ, ಸಿಹಿಮೊಗೆ ಚಿತ್ರಸಮಾಜ, ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಖ್ಯಾತ ಗಾಯಕಿ ಶ್ರೀಮತಿ ಸುರೇಖಾ ಹೆಗಡೆ ಮತ್ತು ತಂಡದವರು ಗೀತಗಾಯನ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.
Dr. Raj Kumar ಈ ಕಾರ್ಯಕ್ರಮವನ್ನು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಎಸ್.ಬಂಗಾರಪ್ಪ ಅವರು ಉದ್ಘಾಟಿಸುವರು. ಶಾಸಕ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು. ಸಂಸದ ಬಿ.ವೈ.ರಾಘವೇಂದ್ರ, ಗ್ರಾಮಾಂತರ ಶಾಸಕಿ ಶ್ರೀಮತಿ ಶಾರದಾ ಪೂರ್ಯಾನಾಯ್ಕ್ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಮುಖ್ಯ ಅತಿಥಿಗಳಾಗಿ ಆಗಮಿಸಲಿರುವರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ,ಮಿಥುನ್ ಕುಮಾರ್ ರವರು ಉಪಸ್ಥಿತರಿದ್ದು, ಡಾ| ರಾಜ್ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವರು.
ಸಕಾಲದಲ್ಲಿ ಆರಂಭಗೊಳ್ಳಲಿರುವ ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ರಾಜ್ ಕುಮಾರ್ ಅಭಿಮಾನಿಗಳು, ಕಲಾರಸಿಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಆರ್.ಮಾರುತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Dr. Raj Kumar ಡಾ.ರಾಜ್ ಅಭಿನಯದ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ
Date: