Friday, May 15, 2026
Friday, May 15, 2026

University of Mysore ಬಿ.ವಿ.ಎ.( ದೃಶ್ಯಕಲೆ)ಪದವಿ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ

Date:

University of Mysore ಶೈಕ್ಷಣಿಕ ಸಾಲಿಗೆ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ಧಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) 4 ವರ್ಷದ ಎಂಟು ಸೆಮಿಸ್ಟರ್ ಎನ್.ಇ.ಪಿ.ಪದ್ಧತಿಯ ದೃಶ್ಯಕಲೆಯಲ್ಲಿ ಪ್ರಥಮ ಬಿ.ವಿ.ಎ. ಪದವಿ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಈ ಪದವಿಯಲ್ಲಿ 3ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.
ಆಸಕ್ತರು ಕರ್ನಾಟಕ ಸರ್ಕಾರದ ಅಂತರ್ಜಾಲ ತಾಣ https://uucms.karnataka.gov.in ಅಥವಾ https://www.cavamysore.karnataka.gov.in ಮೂಲಕವೇ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಇತರೆ ಮಾಹಿತಿಗಳನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು ಎಂದು ಕಾಲೇಜಿನ ಡೀನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ.: 0821-2438931 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...