Friday, May 15, 2026
Friday, May 15, 2026

Shimoga District Fisheries Department ಮತ್ಸ್ಯ ಸಂಪದ ಸಹಾಯಧನಕ್ಕೆ ಅರ್ಜಿ, ಕೊನೆ ದಿನಾಂಕ ವಿಸ್ತರಣೆ

Date:

ಶಿವಮೊಗ್ಗ ಜಿಲ್ಲಾ ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ಸಾಲಿನವರೆಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಯ್ಸ ಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.

Shimoga District Fisheries Department ಮೀನು ಕೃಷಿಕೊಳಗಳ ನಿರ್ಮಾಣ, ಮೀನುಕೃಷಿ ಕೊಳ ನಿರ್ಮಾಣ ಮಾಡಿ ಮೀನುಕೃಷಿ ಕೈಗೊಂಡವರಿಗೆ ಹೂಡಿಕೆಗಳ ವೆಚ್ಚದ ಮೇಲೆ ಸಹಾಯ, ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯ, ಮೀನುಮರಿ ಪಾಲನಾ ಘಟಕ ನಿರ್ಮಾಣದ ಬಗ್ಗೆ ಸಹಾಯ, ಸೈಕಲ್ ವಿತ್ ಐಸ್‌ಬಾಕ್ಸ್, ಮಧ್ಯಮ ವರ್ಗದ ಅಲಂಕಾರಿಕ ಸಾಕಾಣಿಕೆ ಘಟಕ (ಪ.ಜಾ) ಮತ್ತು ಹೊಸತಾದ ಮೀನುಮಾರಾಟದ ಕಿಯೋಸ್ಕ್ ನಿರ್ಮಾಣಕ್ಕಾಗಿ ಸಹಾಯ ಧನ ನೀಡಲಾಗುತ್ತಿದ್ದು, ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. 40 ರಷ್ಟು ಹಾಗೂ ಪ.ಜಾ/ಪ.ಪಂ. ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ. 60 ರಷ್ಟು ಸಹಾಯಧನ ನೀಡಲಾಗುವುದು.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಪೂರ್ಣ ದಾಖಲೆಗಳೊಂದಿಗೆ ಮೇ 13 ರೊಳಗಾಗಿ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...