Food, Civil Supplies and Consumer Affairs ಬೆಂಗಳೂರು, ಏಪ್ರಿಲ್ 22, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಮತ್ತು ವಸತಿ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್ ರವರ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ವಿಧಾನ ಸೌಧದದಲ್ಲಿ ಸಭೆ ನಡೆಯಿತು.
ಬಳ್ಳಾರಿ ಜಿಲ್ಲೆಯ ರೈತರ ನಿಯೋಗವು ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಯಲ್ಲಿ ಹೆಚ್ಚಾಗಿ ಜೋಳ ಬೆಳೆಯವ ಜಿಲ್ಲೆಗಳು ಹಾಗೂ ರಾಜ್ಯದಾದ್ಯಂತ ಹಿಂಗಾರು ಹಂಗಾಮಿನ ಅವಧಿಯಲ್ಲಿ ಹೆಚ್ಚಿನ ಜೋಳವನ್ನು ಬೆಳೆಯುವ ಜಿಲ್ಲೆಗಳಲ್ಲಿ ಸರ್ಕಾರದ ವತಿಯಿಂದ ಬೆಂಬಲ ಬೆಲೆ ಯೋಜನೆಯಡಿ 2024-2025 ನೇ ಸಾಲಿನಲ್ಲಿ ಒಂದು ಲಕ್ಷ ಕ್ವಿಂಟಾಲ್ (LMT) ಜೋಳವನ್ನು ರೈತರಿಂದ ನೇರವಾಗಿ ಖರೀದಿ ಕೇಂದ್ರಗಳ ಮೂಲಕ ಖರೀದಿಸಲು ತೀರ್ಮಾನಿಸಿದ್ದು, ಪ್ರತಿ ಕ್ವಿಂಟಾಲ್ ಜೋಳದ ಧರ ಹೈಬ್ರೀಡ್ 3371 ಮಾಲ್ದಂಡಿ ಜೋಳಕ್ಕೆ ಪ್ರತಿ ಕ್ವಿಂಟಾಲ್ ಗೆ 3421 ಧರವನ್ನು ನಿಗಧಿಪಡಿಸಲಾಗಿದೆ.
ಈಗಾಗಲೇ ನೊಂದಾಯಿಸಿದ ರೈತರು ಹಾಗೂ ಹೊಸದಾಗಿ ನೊಂದಾಯಿಸುವ ರೈತರು ಸಹ ತಾವು ಬೆಳೆದ ಬೆಲೆಯನ್ನು ನಿರ್ದಿಷ್ಟ ಖರೀಧಿ ಕೇಂದ್ರದ ಸ್ಥಳದಲ್ಲಿ ನೊಂದಣಿ ಮಾಡಿಕೊಂಡು ಸರ್ಕಾರಕ್ಕೆ ನೀಡಲು ಕೋರಿದೆ ಎಂದರು.
ಅನ್ನ ಭಾಗ್ಯ ಯೋಜನೆ ಫಲಾನುಭವಿಗಳಿಗೆ ಪ್ರತಿ ವ್ಯಕ್ತಿಗೆ 5 ಕೆಜಿ ಪಡಿತರ ಧಾನ್ಯ ನೀಡುತ್ತಿದ್ದು ಉತ್ತರ ಕರ್ನಾಟಕದ ಭಾಗದಲ್ಲಿ 2 ಕೆಜಿ ಅಕ್ಕಿಯ ಜೊತೆಗೆ 3 ಕೆಜಿ ಜೋಳವನ್ನು ವಿತರಿಸಲು ತೀರ್ಮಾನಿಸಲಾಗಿದೆ ಎಂದರು.
Food, Civil Supplies and Consumer Affairs ಈ ಸಂದರ್ಭದಲ್ಲಿ ವಿಧಾನ ಪರಿಷತ್ ನ ಸದಸ್ಯ ಬಸನಗೌಡ ಬಾದರ್ಲಿ, ವಸತಿ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಆಹಾರ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್ ಸೇರಿದಂತೆ ಹಾಗೂ ರೈತ ಸಂಘದ ರಘುನಾಥ್, ಮಾದವರೆಡ್ಡಿ ಕರೂರ್, ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.