Rotary Shivamogga ರೋಟರಿ ಸಂಸ್ಥೆಯು ಪ್ರತಿಫಲಾಪೇಕ್ಷೆ ಇಲ್ಲದೆ ನಿಸ್ವಾರ್ಥವಾಗಿ ಸೇವೆ ಮಾಡುತ್ತಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಜಿ.ಕಿರಣ್ ಕುಮಾರ್ ಹೇಳಿದರು.
ಬಿಆರ್‌ಪಿಯ ರಾಷ್ಟ್ರೀಯ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಎನ್‌ಎಸ್‌ಎಸ್ ಶಿಬಿರಾರ್ಥಿಗಳಿಗೆ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ನಾರಾಯಣ ಹೃದಯಾಲಯ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಆರೋಗ್ಯದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ರೋಟರಿ ಸಂಸ್ಥೆಯ ಸಮಾಜಮುಖಿ ಕಾರ್ಯಕ್ರಮಗಳನ್ನು ವಿವರಿಸುತ್ತಾ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನದಲ್ಲಿ ಮಹತ್ತರ ಸೇವೆ ಸಲ್ಲಿಸಿದೆ. ರಸ್ತೆ ಸುರಕ್ಷತಾ, ಹಸಿರು ಮತ್ತು ನೀರಿನ ಜಾಗೃತಿ, ಶಿಕ್ಷಣ ಮತ್ತು ಕಾನೂನಿನ ಅರಿವು, ಮತ್ತು ಆರೋಗ್ಯ ಮತ್ತು ಸ್ವಚ್ಛತಾ ಕಾರ್ಯಕ್ರಮಗಳ ಬಗ್ಗೆ ರೋಟರಿ ಸಂಸ್ಥೆಯು ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
Rotary Shivamogga ಶಿಬಿರಾರ್ಥಿಗಳು ಇಂತಹ ಶಿಬಿರದಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳಿಗೆ ನಾಯಕತ್ವದ ಗುಣ , ಸಮಾಜದಲ್ಲಿ ಒಳ್ಳೆಯ ವ್ಯಕ್ತಿಗಳಾಗಿ ಮಾರ್ಪಡುವಲ್ಲಿ ಸಹಕಾರಿಯಾಗಿದೆ. ಉತ್ತಮ ಬಾಂಧವ್ಯ ಬೆಳೆಯುತ್ತದೆ. ವಿದ್ಯಾರ್ಥಿ ಶಕ್ತಿ ರಾಷ್ಟ್ರದ ಶಕ್ತಿ ಎಂದರು.
ಹಿರಿಯ ತಜ್ಞ ವೈದ್ಯ ಡಾ. ಶ್ರೀವತ್ಸ ಮಾತನಾಡಿ, ಹೃದಯ, ಶ್ವಾಸಕೋಶದ ಬಗ್ಗೆ ವಿಶೇಷ ಮಾಹಿತಿ ನೀಡಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. 80ಕ್ಕೂ ಹೆಚ್ಚು ಶಿಬಿರಾರ್ಥಿಗಳು ಭಾಗವಹಿಸಿದ್ದರು.
ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಮಂಜುನಾಥ್ ಡಿ ಎಸ್ ಹಾಗೂ ನಾರಾಯಣ ಹೃದಯಾಲಯದ ವೈದ್ಯಾಧಿಕಾರಿ ಡಾ. ಅಭಿಲಾಶ್ ಹಾಗೂ ಗಣೇಶ್, ಮಾಜಿ ಸಹಾಯಕ ಗವರ್ನರ್ ರವಿ ಕೋಟೋಜಿ, ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಕಾರ್ಯದರ್ಶಿ ಈಶ್ವರ ಬಿವಿ ಹಾಗೂ ಮಾಜಿ ವಲಯ ಸೇನಾನಿ ಧರ್ಮೇಂದ್ರ ಸಿಂಗ್ ಹಾಗೂ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಸಿಬ್ಬಂದಿ ಉಪಸಿತರಿದ್ದರು.
Rotary Shivamogga ರೋಟರಿ ಸಂಸ್ಥೆಯಿಂದ ನಿಸ್ವಾರ್ಥ ಸೇವೆ- ಜಿ.ಕಿರಣ್ ಕುಮಾರ್
Date: