CM siddharamaih ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಿದ್ದೇನೆ. ಭಾರತದಲ್ಲಿ ನೆಲೆಸಿರುವ ವಿದೇಶದವರ ಬಗ್ಗೆ ಕಣ್ಗಾವಲು ಇರಿಸಲು ಕೇಂದ್ರ ಗೃಹ ಇಲಾಖೆ ರಾಜ್ಯಗಳಿಗೆ ಸೂಚನೆ ನೀಡಿದೆ. ಉಗ್ರರು ಯಾವುದೇ ರಾಜ್ಯದಲ್ಲಿರಲಿ ಅವರನ್ನು ಮಟ್ಟಹಾಕಬೇಕಾಗಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಉಗ್ರರ ಚಟುವಟಿಕೆಗಳಿಗೆ ಅವಕಾಶ ಕೊಡಕೂಡದು. ಪಹಲ್ಗಾಮ್ ಘಟನೆ ಅತ್ಯಂತ ಹೇಯ ಹಾಗೂ ಅಮಾನುಷವಾದುದ್ದು. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಪುಲ್ವಾಮಾ ಘಟನೆಯೂ ಇದೇ ಜಿಲ್ಲೆಯಲ್ಲಿ ನಡೆದಿದ್ದರಿಂದ ಎಚ್ಚರಿಕೆಯಿಂದ ಇರಬೇಕಾಗಿತ್ತು. ಬಂದೋಬಸ್ತ್ ಸಡಿಲಗೊಳಿಸಬಾರದಿತ್ತು. ಇಲ್ಲಿ ಗುಪ್ತಚರ ವ್ಯವಸ್ಥೆಯ ವೈಫಲ್ಯವಾಗಿದೆ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ.ಎಂದು ಮಲೆಮಾದೇಶ್ವರ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತಾಡುತ್ತಿದ್ದರು
ಮಲೆಮಹದೇಶ್ವರ ಬೆಟ್ಟದಲ್ಲಿ ಆಯೋಜಿಸಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳು ಹಾಗು ಚಾಮರಾಜನಗರ ಜಿಲ್ಲೆಗೆ ಅಗತ್ಯವಿರುವ ಪ್ರಮುಖ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗತ್ತದೆ
ಘಟನೆ ನಡೆದ ಬಳಿಕ ಕ್ರಮ ತೆಗೆದುಕೊಳ್ಳುವುದು ಬೇರೆ. ಘಟನೆಯಾಗದಂತೆ ತೆಗೆದುಕೊಳ್ಳುವ ಕ್ರಮಗಳು ಬೇರೆ. ಅದನ್ನು ಕೇಂದ್ರ ಸರ್ಕಾರ ಮಾಡಬೇಕಿತ್ತು.
CM siddharamaih ಪುಲ್ವಾಮಾದಲ್ಲಿ 40 ಸೈನಿಕರು ಪ್ರಾಣತೆತ್ತರು. ಈ ಘಟನೆಯಲ್ಲಿ 28 ಜನ ನಾಗರಿಕರು ಮೃತರಾಗಿದ್ದಾರೆ. ಇದನ್ನು ತಪ್ಪಿಸಲು ಕ್ರಮ ವಹಿಸಬೇಕಿತ್ತು. ಇಂಥ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕು. ಉಗ್ರರು ಯಾವುದೇ ಧರ್ಮಕ್ಕೆ ಸೇರಿರಲಿ ಅವರೆಲ್ಲರನ್ನೂ ಮಟ್ಟ ಹಾಕಬೇಕಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ, ಅದಕ್ಕೆ ಬೇಕಾಗಿರುವ ಎಲ್ಲಾ ಸಹಕಾರ, ಬೆಂಬಲವನ್ನು ನಾವು, ನಮ್ಮ ಸರ್ಕಾರ ಕೊಡುತ್ತದೆ ಮದು ತಿಳಿಸಿದರು