CM Siddharamaiah ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಮುಗ್ಧ ನಾಗರಿಕರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ನಮ್ಮ ಸರ್ಕಾರವು ತೀವ್ರವಾಗಿ ಖಂಡಿಸುತ್ತದೆ. ಎಲ್ಲ ಮೃತರಿಗೆ ರಾಜ್ಯದ ಜನರ ಪರವಾಗಿ ಸಂತಾಪ ಸಲ್ಲಿಸಲು ತೀರ್ಮಾನಿಸಿದೆ. ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಜಾಲತಾಣ x ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಉಗ್ರರ ದಾಳಿಗಳನ್ನು ಮನುಷ್ಯ ಕುಲದ ಮೇಲೆ ನಡೆಸುತ್ತಿರುವ ಭೀಬತ್ಸ ಕೃತ್ಯಗಳು ಎಂದು ತೀರ್ಮಾನಿಸಬೇಕು. ಎಲ್ಲ ರೀತಿಯ ಉಗ್ರವಾದವನ್ನು ಬುಡಸಮೇತ ಕಿತ್ತು ಹಾಕಲು ಇಡೀ ದೇಶ ಒಂದಾಗಿ ನಿಂತು ಶ್ರಮಿಸಬೇಕು.
ಈ ಘಟನೆಗೆ ಕಾರಣವಾಗಿರುವ ವೈಫಲ್ಯಗಳ ಕುರಿತು ಸಮರ್ಥವಾಗಿ ಮತ್ತು ಸಮರ್ಪಕವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಲು ತೀರ್ಮಾನಿಸಲಾಗಿದೆ.
CM Siddharamaiah ಮುಂದೆ ಈ ರೀತಿಯ ಯಾವುದೇ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ರಾಜ್ಯ ಸರ್ಕಾರವು ರಾಜ್ಯದ ಜನರ ಪರವಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಇಂದು ನಡೆದ ಸಂಪುಟ ಸಭೆಯು ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ