Sunday, February 1, 2026
Sunday, February 1, 2026

CM Siddaramaih ಪ್ರಸ್ತುತ ಜಾಗತಿಕ ರಾಷ್ಟ್ರಗಳು ಭಾರತದ ಪರವಾಗಿವೆ. ಭಯೋತ್ಪಾದನೆ ಖಂಡಿಸಿ ಪಾಕ್ ಗೆ ಪಾಠ ಕಲಿಸಬೇಕಿದೆ- ಸಿದ್ಧರಾಮಯ್ಯ

Date:

CM Siddaramaih ಯುದ್ಧದ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ – ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ.

ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ‌ ಆಯ್ಕೆಯೇ ಹೊರತು, ಯುದ್ಧವೇ ಮೊದಲ ಇಲ್ಲವೇ ಏಕೈಕ ಆಯ್ಕೆಯಲ್ಲ.
ಶತ್ರುವನ್ನು ಮಣಿಸುವ ಉಳಿದೆಲ್ಲ ಆಯ್ಕೆಗಳು ವಿಫಲವಾದಾಗ ಮಾತ್ರ ಯುದ್ಧಕ್ಕೆ ಹೊರಡಬೇಕು ಎಂದು
ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಿಳಿಸಿದ್ದಾರೆ.

ಪಹಲ್ಗಾಮ್ ನಲ್ಲಿ ನಡೆದ ಪಾಕ್‍ ಪ್ರೇರಿತ ಉಗ್ರರ ದಾಳಿಗೆ ನಮ್ಮ ಗೂಢಚರ್ಯೆ ಮತ್ತು ಭದ್ರತಾ ವ್ಯವಸ್ಥೆಯ ವೈಫಲ್ಯ ಕಾರಣ ಎನ್ನುವುದು ದೇಶದ ಜನತೆಗೆ ಮತ್ತು ಕೇಂದ್ರ ಸರ್ಕಾರಕ್ಕೂ ಈಗ ಮನವರಿಕೆಯಾಗಿದೆ. ಮೊದಲು ಈ ಲೋಪವನ್ನು ಸರಿಪಡಿಸಿಕೊಂಡು ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಎಚ್ಚರಿಕೆ ವಹಿಸುವ ಹೊಣೆಗಾರಿಕೆ ಕೇಂದ್ರ ಸರ್ಕಾರದ ಮೇಲಿದೆ.

ಸಿಂಧೂ ನದಿ ಒಪ್ಪಂದದ ರದ್ದತಿಯೂ ಸೇರಿದಂತೆ ಕೇಂದ್ರ ಸರ್ಕಾರ ಕೆಲವು ರಾಜತಾಂತ್ರಿಕ ಕ್ರಮಗಳನ್ನು ಕೈಗೊಂಡಿದೆ. ಇದನ್ನು ನಾವು ಸ್ವಾಗತಿಸುತ್ತೇವೆ. ಕೇಂದ್ರ ಸರ್ಕಾರ ಮುಂದೆ ಇದಕ್ಕಿಂತಲೂ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎನ್ನುವ ಭರವಸೆ ನಮಗಿದೆ. ಅವುಗಳನ್ನೆಲ್ಲ ಬಹಿರಂಗ ಪಡಿಸುವ ಅಗತ್ಯವಿಲ್ಲ. ಅಂತಹ ಕ್ರಮಗಳಿಗೆ ನಮ್ಮ ಸಂಪೂರ್ಣ ಸಹಕಾರ ಇದೆ.

ಇದೇ ವೇಳೆ ಕೆಲವು ಕಿಡಿಗೇಡಿಗಳು ಯುದ್ಧೋನ್ಮಾದವನ್ನು ಸೃಷ್ಟಿಸಿ ದೇಶದೊಳಗಿನ ಸೌಹಾರ್ದತೆಯನ್ನು ಕಲಕುವ ಪ್ರಯತ್ನ ಮಾಡುತ್ತಿದ್ದು ಇಂತಹವರ ವಿರುದ್ಧವೂ ಕೇಂದ್ರ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು. ಇಂದು ದೇಶ ಅತ್ಯಂತ ಸೂಕ್ಷ್ಮ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಬಾಹ್ಯ ಶತ್ರುವನ್ನು ಎದುರಿಸಬೇಕಾದರೆ ಆಂತರಿಕವಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಇರಬೇಕಾಗುತ್ತದೆ ಎಂದರು.

CM Siddaramaih ಪಾಕಿಸ್ತಾನ ಇಂದು ಆರ್ಥಿಕವಾಗಿ ದಿವಾಳಿಯಾಗಿರುವ ರೋಗಗ್ರಸ್ತ ದೇಶವಾಗಿದೆ. ಅವರು ಕಳೆದುಕೊಳ್ಳುವುದೇನೂ ಇಲ್ಲ, ಈ ಕಾರಣದಿಂದಾಗಿಯೇ ಜಗತ್ತಿನ ಬಲಾಢ್ಯ ರಾಷ್ಟ್ರವಾಗಿ ಬೆಳೆಯುತ್ತಿರುವ ಭಾರತ ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕಾಗಿದೆ. ಈ ಸಂದರ್ಭದಲ್ಲಿ ವಿಶ್ವದ ಎಲ್ಲ ರಾಷ್ಟ್ರಗಳು ಪಾಕ್ ಪ್ರೇರಿತ ಭಯೋತ್ಪಾದನೆಯನ್ನು ಖಂಡಿಸಿ ಭಾರತದ ಪರವಾಗಿ ನಿಂತಿವೆ. ಈ ಬೆಳವಣಿಗೆಯನ್ನು ಭಾರತ ಸದುಪಯೋಗಪಡಿಸಿಕೊಂಡು ಪಾಕಿಸ್ತಾನ ಮುಂದೆಂದೂ ಇಂತಹ ದುಸ್ಸಾಹಸಕ್ಕೆ ಕೈಹಾಕದಂತೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದು
ಮುಖ್ಯಮಂತ್ರಿ ಸಿದ್ಧರಾಮಯ್ಯ
ತಮ್ಮ ಹೇಳಿಕೆಗೆ ಜಾಲತಾಣದಲ್ಲಿ ಸಮರ್ಥನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...