Thursday, June 25, 2026
Thursday, June 25, 2026

S N Channabasappa ದೇವಗಂಗೆಯನ್ನ ಧರೆಗಿಳಿಸಿ ನಮ್ಮೆಲ್ಲರನ್ನು ಪವಿತ್ರಗೊಳಿಸಿದವರು,ಶ್ರೀಭಗೀರಥ- ಎಸ್.ಎನ್.ಚನ್ನಬಸಪ್ಪ

Date:

S N Channabasappa ಪ್ರಯತ್ನಕ್ಕೆ ಮತ್ತೊಂದು ಹೆಸರೇ ಶ್ರೀ ಭಗೀರಥ. ಪಿತೃಗಳಿಗೆ ಮುಕ್ತಿ ನೀಡಲು ಅತ್ಯಂತ ಪವಿತ್ರಳಾದ ದೇವ ಗಂಗೆಯನ್ನು ಧರೆಗಿಳಿಸಿ, ನಮ್ಮೆಲ್ಲರನ್ನು ಪವಿತ್ರಗೊಳಿಸಿದವರು ಭಗೀರಥರು ಎಂದು
ಶಾಸಕರಾದ ಎಸ್.ಎನ್. ಚನ್ನಬಸಪ್ಪ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಉಪ್ಪಾರ ಸಮಾಜ, ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಭಾನುವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶ್ರೀ ಭಗೀರಥರು ನಿರ್ಜೀವ ವಸ್ತುಗಳಿಗೆ ಸಂಸ್ಕಾರ ನೀಡಿದವರು. ಪಿತೃಗಳಿಗೆ ಶಕ್ತಿ ಕೊಡುವ ಸಲುವಾಗಿ ಗಂಗೆಯನ್ನು ಧರೆಗಿಳಿಸಿ ನಮ್ಮೆಲ್ಲರ ಪಾಪ‌ ಕಳೆಯುವ ಶ್ರೇಷ್ಠ ಕೆಲಸ ಮಾಡಿದರು. ಕಲುಷಿತವನ್ನು ಪವಿತ್ರಗೊಳಿಸುವುದು ಗಂಗೆ ಮಾತ್ರ. ಭಗೀರಥ ಪ್ರಯತ್ನದ ಪರಿಣಾಮ ಇದು. ತನ್ನನ್ನು ತಾನು ಶುದ್ದಗೊಳಿಸುವ ಶಕ್ತಿ ಆಕೆಗೆ ಮಾತ್ರ ಇದೆ. ಪ್ರಯತ್ನಕ್ಕೆ ಮತ್ತೊಂದು ಹೆಸರೇ ಭಗೀರಥ.
ಬಿಹಾರದ ಸಾಮಾನ್ಯ ವ್ಯಕ್ತಿ ದಶರಥ ಮಂಝಿ ಗುಡ್ಡ ಕಡಿದು ರಸ್ತೆ ‌ಮಾಡಿತ್ತಾನೆ. ಅನೇಕ‌ ಜೀವ ರಾಶಿಗಳ‌ ಉಳುವಿಗೆ ಕಾರಣನಾಗುತ್ತಾನೆ. ಇದು ಭಗೀರಥ ಪ್ರಯತ್ನದ ಒಂದು ಉದಾಹರಣೆ ಎಂದರು.
ಇದು ಸಣ್ಣ ಸಮಾಜವಲ್ಲ.‌ ಪವಿತ್ರ ಗಂಗೆಯನ್ನು ನೀಡಿದ ಸಮಾಜ. ಎಲ್ಲ ಸಣ್ಣ ಸಮಾಜಗಳು ಒಟ್ಟಾಗಿದ್ದಾಗ ಇಡೀ ಸಮಾಜಕ್ಕೆ ಶಕ್ತಿ ಬರುತ್ತದೆ. ಭಗೀರಥ ಪ್ರಯತ್ನದ ಮೂಲಕವೇ ಸಮಾಜವನ್ನು‌ ಇನ್ನೂ ಉತ್ತಮ ರೀತಿಯಲ್ಲಿ‌ ಕಟ್ಟಿ, ಶ್ರೇಷ್ಠ ಕೊಡುಗೆಗಳನ್ನು ನೀಡಬೇಕಿದೆ ಎಂದರು.
ಜಿಲ್ಲಾ ಉಪ್ಪಾರ ಸಂಘದ ಪ್ರಧಾನ ಕಾರ್ಯದರ್ಶಿ ದೇವೇಂದ್ರಪ್ಪ‌ ಕೆ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಉಪ್ಪಾರ ಸಮಾಜಕ್ಕೆ ಒಂದು ಉತ್ತಮ‌ ಇತಿಹಾಸವಿದೆ. ಬೇರೆ ಬೇರೆ ಸ್ಥಳಗಳಲ್ಲಿ ಈ ಸಮಾಜವನ್ನು ಬೇರೆ ಬೇರೆ ಹೆಸರುಗಳಿಂದ ಕರೆಯಲ್ಪಡುತ್ತಾರೆ. ಉಪ್ಪಾರರು ಇಕ್ಷಾಕು ಕುಲಕ್ಕೆ ಸೇರಿದವರು. ಉಪ್ಪಾರ ಸಮಾಜದ ಹೆಸರು ಉಳಿಯಲು ಭಗೀರಥರು ಕಾರಣರಾಗಿದ್ದು,
ಪಿತೃಗಳಿಗೆ ಮುಕ್ತಿ ನೀಡಲು ಹಾಗು ಮನುಕುಲದ ಉದ್ದಾರಕ್ಕಾಗಿ ದೃಢ ಸಂಕಲ್ಪದಿಂದ ನಿರಂತರ ತಪಗೈದು ದೇವಗಂಗೆಯನ್ನು ಧರೆಗೆಳೆಸಿದರು ಶ್ರೀ ಭಗೀರಥರು.
ಗಂಗಾ ನದಿ ನೀರಿನಿಂದಾಗಿ ದೇಶದ ಹಲವು‌ಪ್ರದೇಶ ನೆಮ್ಮದಿ ಬದುಕು ನಡೆಸುತ್ತಿದ್ದು, ಭಗೀರಥರ ತಪಸ್ಸಿನ ಫಲ ಇದಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರ ಇಂತಹ ಮಹಾನ್ ಮಹರ್ಷಿಗಳ ಜಯಂತಿ ಆಚರಣೆ ಮಾಡುತ್ತಿರುವುದು ಅಭಿನಂದನೀಯ. ಇಂದು ಜಿಲ್ಲೆಯ ಎಲ್ಲೆಡೆ ಜಯಂತಿ ಆಚರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷರಾದ ಎಸ್.ಟಿ.ಹಾಲಪ್ಪ ಮಾತನಾಡಿ, ರಾಮನ ಕುಲದಲ್ಲಿ ಹುಟ್ಟಿದ ನಾವು,
ನಂತರದ ದಿನಗಳಲ್ಲಿ ತಮ್ಮ‌ ಕುಲ ಕಸುಬಿನಿಂದ ಗುರುತಿಸಲ್ಪಡುತ್ತಾ, ಮಣ್ಣಿನ‌ ಕೆಲಸ, ಕೆರೆ ಕಟ್ಟೆ, ಮನೆ ಕಟ್ಟುವ ಕೆಲಸದಲ್ಲಿ ತೊಡಗಿ ಶ್ರಮಜೀವಿಗಳಾದೆವು. ಮುಂದಿನ ಪೀಳಿಗೆಗೆ ಉತ್ತಮ ಶಿಕ್ಷಣ ನೀಡಬೇಕು. ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಬೆಳೆದು ಸಮಾಜಕ್ಕೆ ಉತ್ತಮ‌ ಕೊಡುಗೆ ನೀಡಬೇಕು. ಸಮಾಜ ಬಾಂಧವರು ಒಗ್ಗಟ್ಟಿನಿಂದ ಇರಬೇಕು. ನಮ್ಮಶಕ್ತಿ‌ಯನ್ನು ನಾವು ತಿಳಿಯಬೇಕು ಎಂದರು.
S N Channabasappa ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಭೂಪಾಲ್ ಮಾತನಾಡಿ, ಯಶಸ್ವಿ ತಪಸ್ಸಿನ‌ ಮೂಲಕ ಗಂಗಾ ಮಾತೆಯನ್ನು ಧರೆಗಿಳಿಸಿದವರು ಭಗೀರಥ. ಭರತ ಖಂಡದಲ್ಲಿ‌ಅತ್ಯಂತ ಪವಿತ್ರ ನದಿ ಗಂಗೆ. ಇಂತಹ ಗಂಗೆ ಮಾತೆಯನ್ನು‌ ಪಡೆದ ನಾವೇ ಧನ್ಯರು.
ಸಣ್ಣ ಸಣ್ಣ ಹಿಂದುಳಿದ ಸಮಾಜಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿದರೆ ಸಾಮಾಜಿಕವಾಗಿ, ರಾಜಕೀಯವಾಗಿ, ಆರ್ಥಿಕವಾಗಿ ಅಭಿವೃದ್ಧಿ ಸಾಧ್ಯ. ಉಪ್ಪಾರ ಸಮಾಜದಂತಹ ಸಮಾಜಗಳನ್ನು ಗುರುತಿಸಿ ಸ್ಥಾನಮಾನ ನೀಡಬೇಕು ಎಂದರು.
ಖಜಾಂಚಿ ನಾಗರಾಜ ಕಂಕಾರಿ ಮಾತನಾಡಿ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಜೃಂಭಣೆಯಿಂದ ಜಯಂತಿ ಆಚರಣೆ ಮಾಡಬೇಕು. ಸಮಾಜದವರೆಲ್ಲ ಒಗ್ಗೂಡಿ, ಒಗ್ಗಟ್ಟಿನಿಂದ ಮುಂದೆ ಬರಬೇಕು ಎಂದರು. ಇತಿಹಾಸ ತಿಳಿಯಬೇಕು. ಪ್ರಯತ್ನ ಎಂದಿಗೂ ಕೈಬಿಡಬಾರದು. ಛಲ ಬಿಡದೆ, ದೃಢ ಸಂಕಲ್ಪದಿಂದ ಉತ್ತಮ‌ ಫಲ ಸಿಗುತ್ತದೆ ಎಂದು ಭಗೀರಥರು ತಿಳಿಸಿಕೊಟ್ಟಿದ್ದು ನಾವೆಲ್ಲ ಅವರ ದಾರಿಯಲ್ಲಿ‌ ಸಾಗಬೇಕೆಂದರು.
ಶಿವಮೊಗ್ಗ ತಹಶಿಲ್ದಾರರಾದ ರಾಜೀವ್ ಸ್ವಾಗತಿಸಿದರು. ಸಮಾಜದ ಮುಖಂಡರು ಪಾಲ್ಗೊಂಡಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...