Monday, December 15, 2025
Monday, December 15, 2025

HPR Institute of Paramedical Science ಶಿಕ್ಷಣದ ಅವಧಿಯಲ್ಲಿ ವಿದ್ಯಾರ್ಥಿಗಳು ಮನಸ್ಸು ಕೇಂದ್ರೀಕರಿಸಿ ಅಧ್ಯಯನ ಮಾಡಬೇಕು- ಹರಿ ಪ್ರಸಾದ ರೈ

Date:

HPR Institute of Paramedical Science ವಿದ್ಯಾರ್ಥಿಗಳು ಶಿಕ್ಷಣದ ಅವಧಿಯಲ್ಲಿ ಮನಸ್ಸನ್ನು ಕೇಂದ್ರೀಕರಿಸಿಕೊಂಡು ಅಧ್ಯಯನದಕಡೆ ಹೆಚ್ಚಿನ ಗಮನ ನೀಡಬೇಕು ಜೊತೆಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಎಚ್‌ಪಿಆರ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ ಸಂಸ್ಥೆಯ ಅಧ್ಯಕ್ಷ ಹರಿಪ್ರಸಾದ್ ರೈ ಹೇಳಿದರು.

ಶಿವಮೊಗ್ಗ ಪಟ್ಟಣದ ರಂಗಮಂದಿರದಲ್ಲಿ ಎಚ್‌ಪಿಆರ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ ವತಿಯಿಂದ ಹಮ್ಮಿಕೊಂಡ ಪ್ರಥಮ ವರ್ಷದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳ ದೀಪ ಬೆಳಗಿಸುವುದು ಮತ್ತು ಪ್ರಮಾಣ ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಉತ್ತಮ ಅಂಕಗಳಿಸುವ ಮೂಲಕ ಸಂಸ್ಥೆಗೆ ಮತ್ತು ಪೋಷಕರಿಗೆ ಕೀರ್ತಿ ತರಬೇಕು. ವೈಯುಕ್ತಿಕ ಹಿತಾಸಕ್ತಿಗಳನ್ನು ಬದಿಗೊತ್ತಿ ಮುಂದಿನ ಮೂರು ವರ್ಷ ಶಿಕ್ಷಣದ ಕಡೆ ಮನಸ್ಸನ್ನು ಕೇಂದ್ರೀಕರಿಸಬೇಕು. ನರ್ಸಿಂಗ್ ಶಿಕ್ಷಣ ಪಡೆದವರಿಗೆ ದೇಶ ಮಾತ್ರವಲ್ಲದೇ ವಿದೇಶಗಳಲ್ಲಿಯೂ ಉತ್ತಮ ಅವಕಾಶಗಳಿವೆ. ಮೆಡಿಕಲ್ ಕಾಲೇಜುಗಳಲ್ಲಿಯೂ ಸಹ ದಾದಿಯರ ಅವಶ್ಯಕತೆ ಇರುತ್ತದೆ. ನರ್ಸಿಂಗ್ ಶಿಕ್ಷಣ ಪಡೆದವರಿಗೆ ಉದ್ಯೋಗವಕಾಶಗಳು ಸಾಕಷ್ಟು ದೊರೆಯುತ್ತದೆ. ಈ ನಿಟ್ಟಿನಲ್ಲಿ ಸಮಾಜದಲ್ಲಿ ಗೌರವಯುತ ಬದುಕುಕಟ್ಟಿಕೊಳ್ಳಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ಡಾ. ನಾಗೇಂದ್ರಪ್ಪ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆಯನ್ನು ಆರಂಭಿಸುವುದು ಸವಾಲಿನ ಕೆಲಸವಾಗಿದೆ. ಆದರೂ ಸಹ ಪಟ್ಟಣದಲ್ಲಿ ನರ್ಸಿಂಗ್ ಕಾಲೇಜ್ ಆರಂಭದಿಂದಾಗಿ ಅನೇಕರ ಬದುಕು ಹಸನಾಗಿದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವ ಮೂಲಕ ಬಿಎಸ್ಸಿ ನರ್ಸಿಂಗ್ ಕಾಲೇಜ್ ಆರಂಭ ಮಾಡುವ ಉದ್ದೇಶ ಹೊಂದಲಾಗಿದೆ ಹಾಗೂ ಸರ್ಕಾರಿ ನರ್ಸಿಂಗ್ ಹಾಸ್ಟೆಲ್ ಪ್ರಾರಂಭಿಸಲಾಗುವುದು ಎಂದ ಅವರು, ವಿದ್ಯಾರ್ಥಿಗಳು ಹೊರಗಿನ ಶಕ್ತಿಗಳ ಯಾವುದೇ ಗೊಂದಲಗಳಿಗೆ ಕಿವಿಗೊಡದೇ ಸಾಧನೆಯಡೆ ಗಮನ ನೀಡಬೇಕು ಹಾಗೂ ಪೋಷಕರ ಇಟ್ಟ ಆಕಾಂಕ್ಷೆಯನ್ನು ಹುಸಿಗೊಳಿಸಬಾರದು ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ನೂತನ ನಾಯ್ಕ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜೆ.ಎಸ್. ನಾಗರಾಜ್ ಜೈನ್, ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನರ್ಸಿಂಗ್ ಅಧಿಕಾರಿಗಳಾದ ಅನಿತಾ ಕುಮಾರಿ ಹಾಗೂ ರೋಹಿಣಿ ಅವರನ್ನು ಸನ್ಮಾನಿಸಲಾಯಿತು.

HPR Institute of Paramedical Science ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಪ್ರಭು ಕೆ. ಸಾಹುಕಾರ್, ದಂತ ವೈದ್ಯ ಡಾ. ಎಚ್.ಇ. ಜ್ಞಾನೇಶ್, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಸಿ.ಕೆ. ಬಲೀಂದ್ರಪ್ಪ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಡಿ.ಎಸ್. ಶಂಕರ್ ಶೇಟ್, ಎಚ್‌ಪಿಆರ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ ಕಾಲೇಜಿನ ಆಡಳಿತಾಧಿಕಾರಿ ಶಿವಾನಂದ ಎಸ್. ನಾಯ್ಕ್, ಪ್ರಾಂಶುಪಾಲೆ ಎಂ. ಮೇಘಶ್ರೀ, ಸಾರ್ವಜನಿಕ ಆಸ್ಪತ್ರೆಯ ನರ್ಸಿಂಗ್ ಸೂಪರಿಡೆಂಟ್ ಗ್ರೇಡ್-2 ಎಚ್.ಆರ್. ಸರೋಜಾದೇವಿ, ನರ್ಸಿಂಗ್ ಅಧಿಕಾರಿಗಳಾದ ಶಿಲ್ಪಾ ಎಂ. ಬೋರ್ಕರ್, ಎಚ್.ಕೆ. ಜ್ಯೋತಿ, ಜಿ. ಭಾಗ್ಯ ಸೇರಿದಂತೆ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...