Saturday, December 6, 2025
Saturday, December 6, 2025

ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಓದಿದವರು‌‌ ಮತ್ತು‌ ಸಂಘಸಂಸ್ಥೆಗಳು ರೋಟರಿ ಸೇವೆಗೆ ಸಹಕರಿಸಬೇಕು- ಹರಿಪ್ರಸಾದ್ ರೈ

Date:

ಸೊರಬ ಪಟ್ಟಣದ ಸಾಗರ ರಸ್ತೆಯಲ್ಲಿ ಲಯನ್ಸ್ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ನಿರ್ಮಾಣ ಸ್ಥಳಕ್ಕೆ ಲಯನ್ಸ್ ದ್ವಿತೀಯ ಜಿಲ್ಲಾ ಗವರ್ನರ್ ಹರಿಪ್ರಸಾದ್ ರೈ ಭೇಟಿ ನೀಡಿ ವೀಕ್ಷಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಹರಿಪ್ರಸಾದ್ ರೈ ಅವರು, ಪಟ್ಟಣದಲ್ಲಿ ಲಯನ್ಸ್ ಕ್ಲಬ್ ಆರಂಭವಾದ ತರುವಾಯ ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ಶಿಕ್ಷಣ ಸಂಸ್ಥೆಯನ್ನು ಪ್ರಾರಂಭಿಸಲಾಯಿತು. ಹಳೇ ಕಟ್ಟಡ ಶಿಥಿಲಗೊಂಡ ಹಿನ್ನೆಲೆಯಲ್ಲಿ ಖಾಸಗಿ ಕಟ್ಟಡದಲ್ಲಿ ಶಾಲೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಶಾಲೆಯಲ್ಲಿ ಶಿಕ್ಷಣ ಪಡೆದ ಅನೇಕರು ದೇಶ-ವಿದೇಶಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಕಟ್ಟಡ ನಿರ್ಮಾಣದ ಉಸ್ತುವಾರಿ ವಹಿಸಿಕೊಳ್ಳಲಾಗಿದ್ದು, ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಮಾಡಿದವರು ಹಾಗೂಸಂಘ-ಸಂಸ್ಥೆಯವರು ಸಹ ಮುಕ್ತ ಮನಸ್ಸಿನಿಂದ ಸಹಕಾರ ನೀಡುವಂತೆ ತಿಳಿಸಿದರು.
ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ಡಾ. ಎಂ.ಕೆ. ಭಟ್ ಮಾತನಾಡಿ, ಪಟ್ಟಣದಲ್ಲಿ ಸುಮಾರು 52 ವರ್ಷಗಳಿಂದ ಲಯನ್ಸ್ ಕ್ಲಬ್ ಸೇವೆ ಸಲ್ಲಿಸುತ್ತಾ ಬರುತ್ತಿದೆ. ಕಳೆದ ಐದು ದಶಕಗಳ ಹಿಂದೆ ಕಲ್ಯಾಣ ಮಂದಿರವನ್ನು ನಿರ್ಮಿಸಿ ಬಡವರಿಗೆ ಅನುಕೂಲ ಕಲ್ಪಿಸಲಾಗಿತ್ತು. ಅನೇಕ ಧಾರ್ಮಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಕಾರ್ಯಗಳು ಕಲ್ಯಾಣ ಮಂದಿರದಲ್ಲಿ ಜರುಗಿದೆ. ನಂತರ ಕಳೆದ ಮೂರು ದಶಕದ ಹಿಂದೆ ಶಿಕ್ಷಣ ಸಂಸ್ಥೆಯನ್ನು ಆರಂಭಿಸಲಾಯಿತು. ನೂತನ ಕಟ್ಟಡದ ಜವಾಬ್ದಾರಿಯನ್ನು ಹರಿಪ್ರಸಾದ್ ರೈ ಅವರು ವಹಿಸಿಕೊಂಡಿದ್ದಾರೆ. ಉತ್ತಮ ಕಟ್ಟಡ ನಿರ್ಮಿಸುವ ಗುರಿ ಹೊಂದಲಾಗಿದ್ದು, ಸ್ಥಳೀಯ ಲಯನ್ಸ್ ಸದಸ್ಯರು ಸಹ ಸಹಕಾರ ನೀಡುತ್ತಿದ್ದಾರೆ. ಮಾದರಿಯಾದ ಶಿಕ್ಷಣ ಸಂಸ್ಥೆಯಾಗಿ ರೂಪಿಸುವ ಉದ್ದೇಶ ಹೊಂದಲಾಗಿದೆ ಎಂದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಭುವನೇಶ್ ಗೌಡ ಹಿರಳೆ, ಕಾರ್ಯದರ್ಶಿ ಎಚ್.ಎಂ. ಪ್ರಶಾಂತ್, ಮಾಜಿ ಅಧ್ಯಕ್ಷ ದಿನಕರ ಭಟ್ ಭಾವೆ, ವಕೀಲ ಸಿ. ಶಿವಕುಮಾರ್ ಸುಬ್ರಹ್ಮಣ್ಯ ಗುಡಿಗಾರ್ ಸೇರಿದಂತೆ ಇತರರಿದ್ದರು.
ಫೋಟೋ
೧೦ ಸೊರಬ ೦೧: ಸೊರಬ ಪಟ್ಟಣದ ಸಾಗರ ರಸ್ತೆಯಲ್ಲಿ ಲಯನ್ಸ್ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ನಿರ್ಮಾಣ ಸ್ಥಳಕ್ಕೆ ಲಯನ್ಸ್ ದ್ವಿತೀಯ ಜಿಲ್ಲಾ ಗವರ್ನರ್ ಹರಿಪ್ರಸಾದ್ ರೈ ಭೇಟಿ ನೀಡಿ ವೀಕ್ಷಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bangalore Television Centre ಕಲಾತ್ಮಕ ಧಾರಾವಾಹಿ ನಿರ್ಮಾಣ & ಫೋಕ್ ರಿಯಾಲಿಟಿ ಶೋ ನಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ

Bangalore Television Centre ಬೆಂಗಳೂರು ದೂರದರ್ಶನ ಕೇಂದ್ರವು ನಿರ್ಮಿಸಲಿರುವ ಕಲಾತ್ಮಕ ಧಾರಾವಾಹಿಯನ್ನು...

ಭಗವದ್ಗೀತೆ ಪಠ್ಯದಲ್ಲಿ ಅಳವಡಿಸಲು ಸಚಿವ ಕುಮಾರಣ್ಣ ಬರೆದ ಪತ್ರಕ್ಕೆ ಅಶೋಕ ಜಿ.ಭಟ್ ಕೃತಜ್ಞತೆ

ಶಿವಮೊಗ್ಗದಲ್ಲಿ ಇತ್ತೀಚೆಗೆ ಭಗವದ್ಗೀತಾ ಅಭಿಯಾನವು ಅತ್ಯಂತ ಯಶಸ್ವಿಯಾಗಿ ನೆರವೇರಿತು.ರಾಜ್ಯಮಟ್ಟದ ಬೃಹತ್ಸಮಾರಂಭದಲ್ಲಿ ವಿವಿಧ...

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...