B. Y. Raghavendra ಭದ್ರಾವತಿಯಿಂದ ಚಿಕ್ಕಜಾಜೂರುವರೆಗೆ ನೂತನ ರೈಲ್ವೆ ಮಾರ್ಗದ ಕಾಮಗಾರಿಯನ್ನು ಶೀಘ್ರವೇ ಆರಂಭಿಸುವ ದೃಷ್ಠಿಯಿಂದ, ಈ ರೈಲ್ವೆ ಮಾರ್ಗದ ಅಂತಿಮ ಸರ್ವೆ ಮಾಡಲು ಆದೇಶ ಹೊರಡಿಸಲಾಗಿದೆ ಎಂದು ಸಂಸದರಾದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ.
ಈ ಒಂದು ಹೊಸ ಮೈಲಿಗಲ್ಲು ಸ್ಥಾಪಿತವಾದ ನಂತರ ನಮ್ಮ ಮಲೆನಾಡು ಭಾಗಕ್ಕೆ ಬಯಲು ಸೀಮೆ ಹಾಗೂ ಅರೆ ಮಲೆನಾಡು ಭಾಗಗಳ ಸಂಪರ್ಕ ಸಾಧ್ಯತೆಯಿಂದ ವ್ಯಾಪಾರ, ವ್ಯವಹಾರ, ಪ್ರವಾಸೋದ್ಯಮ, ಕೈಗಾರಿಕೆ ಹಾಗೂ ವಾಣಿಜ್ಯೋದ್ಯಮಕ್ಕೆ ಹೆಚ್ಚಿನ ಬಲ ದೊರೆಯುತ್ತದೆ ಇದರೊಂದಿಗೆ ಮಲೆನಾಡಿನ ಆರ್ಥಿಕ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣವಾಗುತ್ತದೆ ಎಂದಿದ್ದಾರೆ.
ಜೊತೆಗೆ ಮಲೆನಾಡಿಗೆ ರಾಜ್ಯದ ಎಲ್ಲಾ ಮೂಲೆಗಳಿಗೆ ಉತ್ತಮ ಸಂಪರ್ಕ ದೊರೆಯುವ ಮೂಲಕ ಜನಸಾಮಾನ್ಯರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಪೂರಕವಾಗುತ್ತದೆ. ಬಂಡವಾಳ ಹೂಡಿಕೆಗೆ ಉತ್ತಮ ವಾತಾವರಣ ಕೂಡ ನಿರ್ಮಾಣವಾಗುತ್ತದೆ.
B. Y. Raghavendra ಈ ಎಲ್ಲ ದೂರದೃಷ್ಟಿ ಇಟ್ಟುಕೊಂಡು ರಾಜ್ಯದಲ್ಲಿ ರೈಲ್ವೆ ಮೂಲಸೌಕರ್ಯಗಳ ಹೆಚ್ಚಳ ಹಾಗೂ ನೂತನ ರೈಲ್ವೆ ಮಾರ್ಗಗಳ ನಿರ್ಮಾಣಕ್ಕೆ ಬೆಂಬಲವಾಗಿ ನಿಂತಿರುವ ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ, ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಹಾಗೂ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅವರಿಗೆ ಶಿವಮೊಗ್ಗ ಜನತೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಂಸದರಾದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ.