Wednesday, June 18, 2025
Wednesday, June 18, 2025

S N Channabasappa ಸೊಳ್ಳೆಗಳ ನಿಯಂತ್ರಣ ನಮ್ಮೆಲ್ಲರ ಜವಾಬ್ದಾರಿ- ಎಸ್.ಎನ್.ಚನ್ನಬಸಪ್ಪ

Date:

S N Channabasappa ಡೆಂಗಿ, ಚಿಗುನ್ ಗುನ್ಯ, ಮಲೇರಿಯಾದಂತಹ ಇತರೆ ರೋಗಗಳನ್ನು‌ ಹರಡುವ ಸೊಳ್ಳೆಗಳನ್ನು‌ ನಿಯಂತ್ರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಶಾಸಕರಾದ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮ, ಬಾಪೂಜಿ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಬಾಪೂಜಿ ಆಯುರ್ವೇದಿಕ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಡೆಂಗಿ ದಿನಾಚರಣೆ – 2025 ಕಾರ್ಯಕ್ರಮ ಉದ್ಘಾಟಿಸಿ ಅವರು‌ ಮಾತನಾಡಿದರು.
ಮುಂಗಾರು ಆರಂಭವಾಗಲಿದ್ದು ನಮ್ಮ ಮನೆ ಸುತ್ತಲಿನಲ್ಲಿ ಸೊಳ್ಳೆಗಳು ಆಗದಂತೆ ನೋಡಿಕೊಳ್ಳಬೇಕು. ಆರೋಗ್ಯ ಇಲಾಖೆಯಿಂದ ಡೆಂಗಿ ಸೇರಿದಂತೆ ಸೊಳ್ಳೆಯಿಂದ ಹರಡಯವ ರೋಗಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಎಲ್ಲ ಹಂತಗಳಲ್ಲಿ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿರುತ್ತವೆ. ನಾವು ಈ ಕಾರ್ಯಕ್ರಮಗಳ ಉದ್ದೇಶ ಅರಿತುಕೊಂಡು ಜಾಗೃತರಾಗಬೇಕು.
ನಾವೆಲ್ಲ ಸೇರಿ ಡೆಂಗಿಯಂತಹ ಮಾರಣಾಂತಿಕ ರೋಗದ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ನಿಯಂತ್ರಣಕ್ಕೆ ಬದ್ದರಾಗಬೇಕು ಎಂದ ಅವರು ಪ್ಲಾಸ್ಟಿಕ್ ಬಳಕೆಗೆ ಸಹ ಕಡಿವಾಣ ಹಾಕಬೇಕೆಂದು ಕಿವಿ‌ಮಾತು ಹೇಳಿದರು.
ಕಾರ್ಯಕ್ರಮದಲ್ಲಿ‌ ಡಿಹೆಚ್ಈ ಡಾ.ನಟರಾಜ್ ಮಾತನಾಡಿ, ಸೊಳ್ಳೆಗಳ ಉತ್ಪತ್ತಿ ತಾಣಗಳಾದ ಸಿಮೆಂಟ್ ತೊಟ್ಟಿಗಳು ಟೈರ್ ಗಳು ಬ್ಯಾರೆಲ್ ಗಳು, ನಿರ್ಮಾಣ ಹಂತದಲ್ಲಿ ಇರುವ ಕಟ್ಟಡಗಳು ಮತ್ತು ಘನ ತ್ಯಾಜ್ಯ ವಸ್ತುಗಳಲ್ಲಿ ನೀರು ನಿಂತು ಡೆಂಗ್ಯೂ ಮತ್ತು ಚಿಕನ್ ಗುನ್ಯಾ ಹರಡುವ ಸೊಳ್ಳೆಗಳು ಯಥೇಚ್ಛವಾಗಿ ಉತ್ಪತ್ತಿಯಾಗುತ್ತಿವೆ . ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ .‌ಆದ್ದರಿಂದ ಇವುಗಳನ್ನು ನಿಯಂತ್ರಿಸಲು ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳುವುದು ತುಂಬಾ ಅತ್ಯಗತ್ಯ ಎಂದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಗುಡದಪ್ಪ ಕಸಬಿ ಮಾತನಾಡಿ, ಡೆಂಗಿ ಸೋಲಿಸಲು ಹೆಜ್ಜೆಗಳು : ಪರಿಶೀಲಿಸಿ ಸ್ವಚ್ಚಗೊಳಿಸಿ ಮುಚ್ಚಿಡಿ’ ಎಂಬುದು ಈ ವರ್ಷದ ಘೋಷವಾಕ್ಯವಾಗಿದ್ದು ಅದರಂತೆ ನಾವು ನಡೆದುಕೊಳ್ಳಬೇಕಿದೆ. ಪ್ರತಿ‌ವರ್ಷ ಮೇ ೧೬ ರಂದು ಡೆಂಗಿ ದಿನಾಚರಣೆ ಆಚರಿಸಲಾಗುತ್ತದೆ. ಮುಂಗಾರು ಆರಂಭದ ಮುನ್ನ ಸೊಳ್ಳೆಯಿಂದ ಹರಡುವ ಡೆಂಗಿ, ಮಲೇರಿಯಾ, ಚಿಕುನ್ ಗುನ್ಯ, ಝೀಕಾದಂತಹ ಸೋಂಕುಗಳು ಉಲ್ಬಣಗೊಳ್ಳುವ ಕಾರಣ ಸೊಳ್ಳೆ ಸಂತಾನೋತ್ಪತ್ತಿ ತಾಣಗಳನ್ನು ಗುರುತಿಸಿ, ಸೊಳ್ಳೆಗಳ ನಿಯಂತ್ರಣ ಮಾಡುವುದರಿಂದ ಈ ರೋಗಗಳ ನಿಯಂತ್ರಣ ಸಾಧ್ಯ ಆಗುತ್ತದೆ. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ಹಾಗೂ ಆರೋಗ್ಯ
S N Channabasappa ಇಲಾಖೆ ಈ ರೋಗಗಳನ್ನು ಎದುರಿಸಲು ಸಿದ್ದವಾಗಬೇಕೆಂಬ ಉದ್ದೇಶದಿಂದ ಈ ದಿನ ಆಚರಣೆ ಮಾಡಲಾಗುತ್ತದೆ. ಕಳೆದ ಸಾಲಿನಲ್ಲಿ ರಾಜ್ಯಾದ್ಯಂತ ಡೆಂಗಿ ಹೆಚ್ಚು ಪ್ರಕರಣ ದಾಖಲಾಗಿ ಸಾವುನೋವು ಸಂಭವಿಸಿತ್ತು. ಡೆಂಗಿ ಮಾರಣಾಂತಿಕ ರೋಗವಾಗಿದ್ದು, ನಿರ್ಲಕ್ಷ್ಯ ಮಾಡಬಾರದು. ಯಾವುದೇ ರೀತಿ ಜ್ವರ ಇದ್ದರೂ ಸರ್ಕಾರಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬೇಕು. ಈ ರೋಗಗಳ ನಿಯಂತ್ರಣದಲ್ಲಿ ಪ್ರತಿ ನಾಗರಿಕರ ಜವಾಬ್ದಾರಿ ಇದ್ದು, ಸೊಳ್ಳೆ ಉತ್ಪತ್ತಿ ತಾಣಗಳು, ಪರಿಕರಗಳಾದ ಡ್ರಮ್, ಸಿಮೆಂಟ್, ತೊಟ್ಟಿ ಇತರೆ ಸ್ವಚ್ಛ ಗೊಳಿಸಬೇಕು. ಅಡಿಕೆ ತೋಟದಲ್ಲಿನ ಹಾಳೆಗಳಲ್ಲಿ ಲಾರ್ವಾ ಹೆಚ್ಚಿರುತ್ತದೆ. ತೋಟದ ಕೆಲಸ ಮಾಡುವ ಕಾರ್ಮಿಕರಲ್ಲೂ ಪ್ರಕರಣಗಳು ಕಾಣುತ್ತಿರುವುದರಿಂದ ಹಾಳೆಯಲ್ಲಿ ನೀರು ನಿಲ್ಲದಂತೆ ನಿಯಂತ್ರಣ ಮಾಡಬೇಕು ಹಾಗೂ ವೈಯಕ್ತಿಕ ರಕ್ಷಣಾತ್ಮಕ ಕ್ರಮಗಳಾದ ಸೊಳ್ಳೆ ನಿವಾರಕ ಲೇಪನ, ಸೊಳ್ಳೆ ಪರದೆಗಳನ್ನು ಬಳಸಬೇಕು. ಈ ಸೊಳ್ಳೆಗಳು ಹಗಲು ಕಚ್ಚುವದರಿಂದ ಮಕ್ಕಳು, ಹಿರಿಯರು ಮೈ ತುಂಬಾ ಬಟ್ಟೆ ಧರಿಸಬೇಕು ಎಂದ ಅವರು, ಜಾಗೃತಿ ಜಾಥಾ ಕಾರ್ಯಕ್ರಮ ಎಲ್ಲ, ತಾಲ್ಲೂಕು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಕರಪತ್ರಗಳು, ಆಡಿಯೋ ಜಿಂಗಲ್ಸ್ ಮೂಲಕವೂ ಅರಿವು ಮೂಡಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಡಿಎಸ್ ಒ ಡಾ.ನಾಗರಾಜ ನಾಯ್ಕ್, ಟಿಹೆಚ್ ಒ ಡಾ. ಚಂದ್ರಶೇಖರ್, ಬಾಪೂಜಿ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಅಧ್ಯಕ್ಷ ಆರಾಧ್ಯ ಎಂ.ವಿ.ಟಿ, ಬಾಪೂಜಿ‌ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಕವಿತಾ, ಇತರೆ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

District Legal Services Authority ಯೋಗಾಭ್ಯಾಸದ ಮಹತ್ವ ಕುರಿತು ಹಿರಿಯ ನಾಗರೀಕರಿಗೆ ಮಾಹಿತಿ ಕಾರ್ಯಕ್ರಮ

District Legal Services Authority ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

MESCOM ಜೂ.20 ರಂದು ಶಿವಮೊಗ್ಗದ ವಿವಿಧೆಡೆ ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ಎಂ ಆರ್.ಎಸ್. ವಿವಿ ಕೇಂದ್ರ ಮುಖ್ಯ ಸ್ವೀಕರಣಾ...