Wednesday, February 4, 2026
Wednesday, February 4, 2026

World Hypertension Day ಮೇ18. ವಿಶ್ವ ರಕ್ತದೊತ್ತಡ ಜಾಗೃತಿ ದಿನ. ಸಹ್ಯಾದ್ರಿ ಎನ್.ಹೆಚ್.ಆಸ್ಪತ್ರೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

Date:

World Hypertension Day ವಿಶ್ವ ರಕ್ತದೊತ್ತಡ ದಿನಾಚರಣೆ (World Hypertension Day) ಯ ವಿಶೇಷ ಸಂದರ್ಭದಲ್ಲಿ, ನಗರದ ಕುವೆಂಪು ರಸ್ತೆಯಲ್ಲಿರುವ ನಂಬಳ ಅಟ್ರಿಯಂ ಬಳಿಯ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್ ಸಾರ್ವಜನಿಕರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದೆ. ಈ ಶಿಬಿರವು ಮೇ 18ರ ಭಾನುವಾರದಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕ್ಲಿನಿಕ್‌ನ ಆವರಣದಲ್ಲಿ ನಡೆಯಲಿದೆ.

ಈ ಶಿಬಿರದಲ್ಲಿ ಡಾ. ಗೋಪಾಲ್ ಡಿ ಮತ್ತು ಡಾ. ಕಿರಣ್ ವಿ.ಎಚ್. ಅವರು ಪಾಲ್ಗೊಳ್ಳುವವರಿಗೆ ಉಚಿತ ಆರೋಗ್ಯ ಸಲಹೆ ಹಾಗೂ ಮಾರ್ಗದರ್ಶನ ನೀಡಲಿದ್ದಾರೆ. ಇದರೊಂದಿಗೆ, ರಕ್ತದೊತ್ತಡ (ಬಿಪಿ), ಇಸಿಜಿ (ಹೃದಯದ ಪರೀಕ್ಷೆ), ಮತ್ತು ಜಿಆರ್‌ಬಿಎಸ್ – ರಕ್ತದಲ್ಲಿನ ಸಕ್ಕರೆ ಪರೀಕ್ಷೆಗಳನ್ನು ಸಂಪೂರ್ಣವಾಗಿ ಉಚಿತವಾಗಿ ನಡೆಸಲಾಗುವುದು.

World Hypertension Day ಈ ಉಚಿತ ಆರೋಗ್ಯ ತಪಾಸಣಾ ಶಿಬಿರದ ಮುಖ್ಯ ಉದ್ದೇಶವು ರಕ್ತದೊತ್ತಡ (ಬಿಪಿ)ದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಮತ್ತು ರೋಗ ಬರುವ ಮುಂಚೆಯೇ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅರಿವು ಹೆಚ್ಚಿಸುವುದಾಗಿದೆ. ಶಿವಮೊಗ್ಗ ನಗರದ ನಾಗರಿಕರು ಈ ಅಮೂಲ್ಯ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಆರೋಗ್ಯವನ್ನು ಪರೀಕ್ಷಿಸಿಕೊಳ್ಳಬೇಕೆಂದು ಆಸ್ಪತ್ರೆಯು ವಿನಂತಿಸಿದೆ.

ಹೆಚ್ಚಿನ ಮಾಹಿತಿಗಾಗಿ ದಯವಿಟ್ಟು ಸಂಪರ್ಕಿಸಿ: 9886413131

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...